AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೆ ಹರಿದ ನೆತ್ತರು: ಓರ್ವನ ಬರ್ಬರ ಕೊಲೆ, ಮತ್ತೊಬ್ಬನಿಗೆ ತಲ್ವರ್ ಏಟು

ಸುಹಾಸ್ ಶೆಟ್ಟಿ ಹತ್ಯೆಯ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸುಹಾಸ್​ ಶೆಟ್ಟಿ ಕೊಲೆ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಕಾರದ ಮಾತುಗಳು ಕೇಳಿಬರುತ್ತಿವೆ. ಇದರ ನಡುವೆ ಬಂಟ್ವಾಳದಲ್ಲಿ ಓರ್ವ ವ್ಯಕ್ತಿಯ ಕೊಲೆಯಾಗಿದೆ. ಇನ್ನು,ಮಂಗಳೂರಿನ ನ್ಯಾಯಾಲಯದ ಆವರಣದಲ್ಲಿ ರೌಡಿಶೀಟರ್ ರೀಲ್ಸ್ ಮಾಡಿರುವುದು ವೈರಲ್ ಆಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರಿನಲ್ಲಿ ಮತ್ತೆ ಹರಿದ ನೆತ್ತರು: ಓರ್ವನ ಬರ್ಬರ ಕೊಲೆ, ಮತ್ತೊಬ್ಬನಿಗೆ ತಲ್ವರ್ ಏಟು
ಕೃತ್ಯ ನಡೆದ ಸ್ಥಳ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:May 27, 2025 | 7:52 PM

Share

ಮಂಗಳೂರು, ಮೇ 27: ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿ (Suhas Shetty) ಕೊಲೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆ ಪ್ರಕ್ಷುಬ್ಧಗೊಂಡಿದೆ. ಪ್ರತಿಕಾರದ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪಿಕಪ್ ವಾಹನ ಚಾಲಕನನ್ನು ಕೊಲೆ ಮಾಡಲಾಗಿದೆ. ಅಬ್ದುಲ್ ರಹಿಮಾನ್ ಮೃತ ದುರ್ದೈವಿ.

ವಾಹನದಿಂದ ಮರಳು ಅನ್​ಲೋಡ್ ಮಾಡುವಾಗ ಅಬ್ದುಲ್ ರಹಿಮಾನ್​ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಇದೇ ವೇಳೆ ಅಬ್ದುಲ್ ರಹಿಮಾನ್ ಜೊತೆಗಿದ್ದ ಕಲಂಧರ್ ಎಂಬುವರ ಮೇಲೂ ದಾಳಿ ಮಾಡಲಾಗಿದ್ದು, ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್​ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಬ್ದುಲ್​ ರಹೀಮ್​ ಹತ್ಯೆಗೆ ಗುಂಡೂರಾವ್​ ಖಂಡನೆ

ಮಂಗಳೂರಿನ ಬಂಟ್ವಾಳದ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ DG &IGP ಹಾಗೂ ಕಾನೂನು ಸುವ್ಯವಸ್ಥೆ ADGP ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು, ಸೂಕ್ತ ಬಿಗಿ ಕಾನೂನು ಕ್ರಮಗಳನ್ನ ಜರುಗಿಸುವಂತೆ ಸೂಚನೆ ನೀಡಿದರು. ಅಲ್ಲದೇ ಮಂಗಳೂರು ಜಿಲ್ಲಾಧಿಕಾರಿ ಹಾಗೂ ಎಸ್.ಪಿ ಅವರೊಂದಿಗೆ ಮಾತನಾಡಿದ ಸಚಿವರು ಮಂಗಳೂರಿನಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸೂಚನೆ ನೀಡಿದರು. ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ
Image
ಪಂಜಾಬ್​ನಲ್ಲಿ ಧರ್ಮಸ್ಥಳದ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ
Image
ಸುಹಾಸ್​ ಕೊಲೆಯ ಪ್ರತೀಕಾರಕ್ಕೆ ಹಿಂದೂ ಸಮಾಜ ಕಾದು ಕೂತಿದೆ: ಭಜರಂಗದಳ ಮುಖಂಡ
Image
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ
Image
ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣ NIAಗೆ ವಹಿಸುವಂತೆ ರಾಜ್ಯಪಾಲರಿಗೆ BJP ಮನವಿ

ಇದನ್ನೂ ಓದಿ: ಕಾರಾಗೃಹದಲ್ಲೂ ಹಿಂದೂ-ಮುಸ್ಲಿಂ: ಮುನೀರ್​ ಹೊಡೆದಿದ್ದಕ್ಕೆ ಮಂಗಳೂರು ಜೈಲು ರಣಾಂಗಣ

ಸುಹಾಸ್ ಶೆಟ್ಟಿ ಕೊಲೆ

ಕಳೆದ ಗುರುವಾರ (ಮೇ.01) ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Tue, 27 May 25

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು