ಮಂಗಳೂರು: ಕರ್ಣಾಟಕ ಬ್ಯಾಂಕ್​ನಲ್ಲಿ ಕೋಟ್ಯಂತರ ನಗದು, ಚಿನ್ನಾಭರಣ ದೋಚಿದ್ದ ಮೂವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಭಾರೀ ಕಳ್ಳತನ ನಡೆದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ನಗದು ಮತ್ತು ಚಿನ್ನಾಭರಣ ದೋಚಿದ್ದ ಮೂವರವನ್ನು ಪುತ್ತೂರು ಉಪವಿಭಾಗದ ಪೊಲೀಸರ ತಂಡ ಬಂಧಿಸಿದೆ.

ಮಂಗಳೂರು: ಕರ್ಣಾಟಕ ಬ್ಯಾಂಕ್​ನಲ್ಲಿ ಕೋಟ್ಯಂತರ ನಗದು, ಚಿನ್ನಾಭರಣ ದೋಚಿದ್ದ ಮೂವರ ಬಂಧನ
ಬಂಧಿತರು
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Mar 11, 2024 | 5:00 PM

ಮಂಗಳೂರು, ಮಾರ್ಚ್​ 11: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ (Karnataka Bank) ಶಾಖೆಯಲ್ಲಿ ಭಾರೀ ಕಳ್ಳತನ ನಡೆದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ನಗದು ಮತ್ತು ಚಿನ್ನಾಭರಣ ದೋಚಿದ್ದ ಮೂವರವನ್ನು ಪುತ್ತೂರು ಉಪವಿಭಾಗದ ಪೊಲೀಸರ ತಂಡ ಬಂಧಿಸಿದೆ. ಬಂಟ್ವಾಳದ ಮಹಮ್ಮದ್ ರಫೀಕ್ ( 35 ), ಮಂಜೇಶ್ವರದ ಇಬ್ರಾಹಿಂ ಕಲಂದರ್ (41) ಹಾಗೂ ಮಂಜೇಶ್ವರದ ದಯಾನಂದ ಎಸ್ (37) ಬಂಧಿತರು. ಘಟನೆ ನಡೆದು ಒಂದು ತಿಂಗಳ ಬಳಿಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸುಮಾರು 20 ವರ್ಷ ಹಳೇ ಕಟ್ಟಡದಲ್ಲಿ ಕರ್ನಾಟಕ ಬ್ಯಾಂಕ್ ಶಾಖೆ ಕಾರ್ಯನಿರ್ವಹಿಸುತ್ತಿತ್ತು. ಬ್ಯಾಂಕ್ ಸುತ್ತಲೂ ಪೊದೆಯಿದ್ದರಿಂದ ಕಿಟಕಿ ಮುರಿದು ಒಳನುಗ್ಗಿ ಕಳವು ಮಾಡಲಾಗಿತ್ತು.

ದುಷ್ಕರ್ಮಿಗಳಿಂದ ಬ್ಯಾಂಕ್​​ ದರೋಡೆಗೆ ಯತ್ನ

ಕೊಪ್ಪಳ: ದುಷ್ಕರ್ಮಿಗಳು ಬ್ಯಾಂಕ್​​ನಲ್ಲಿ ದರೋಡೆ ಮಾಡಲು ಯತ್ನಿಸಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್​​ನ ಶೆಟರ್ ಗಳನ್ನು ಮುರಿದು ದುಷ್ಕರ್ಮಿಗಳು ಒಳಹೋಗಲು ಯತ್ನಿಸಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲೊಂದು ಅಮಾನವೀಯ ಘಟನೆ: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಿಂದ ಹೊಡೆದ ಸೊಸೆ, ಬಂಧನ

ಬ್ಯಾಂಕ್​​ನಲ್ಲಿರುವ ಸಿಸಿಟಿವಿಗಳನ್ನು ಹಾಳು ಮಾಡಿದ್ದರು. ಆದರೆ ಒಳಹೋಗಲು ಆಗದೇ ಇದ್ದಾಗ ಅಲ್ಲಿಂದ ಕಾಲ್ಕಿತ್ತಿದ್ದರು. ಈ ಬಗ್ಗೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದ್ದು, ದರೋಡೆಕೋರರ ಗ್ಯಾಂಗ್ ಪತ್ತೆ ಮಾಡಲು ಮುಂದಾಗಿದೆ.

ಪೋನ್ ಪೇ ಮಾಡಿಸಿಕೊಳ್ಳೊ ನೆಪದಲ್ಲಿ ಪೋನ್ ಸೇರಿದಂತೆ ಚಿನ್ನದ ಸರ ಕಳ್ಳತನ

ಚಿಕ್ಕಬಳ್ಳಾಪುರ: ತಮ್ಮ ಸ್ನೇಹಿತನಿಗೆ ಪೋನ್ ಪೇನಲ್ಲಿ ಅರ್ಜೆಂಟಾಗಿ ಹಣ ಕಳಿಸಬೇಕು, ನಾವು ಕ್ಯಾಶ್ ಕೊಡ್ತಿವಿ ನೀವು ಅವರಿಗೆ ಹಣ ಕಳುಹಿಸಿ ಅಂತ ನಂಬಿಸಿ ಹಣ ವರ್ಗಾವಣೆ ಮಾಡುವ ಸಮಯದಲ್ಲಿ ನಂಬಿದ ವ್ಯಕ್ತಿಯ ಪೋನ್ ಹಾಗೂ ಆತನ 24 ಗ್ರಾಮ್ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದಂತಹ ಘಟನೆ ಇತ್ತೀಚೆಗೆ ನಡೆದಿತ್ತು.

ಇದನ್ನೂ ಓದಿ: ಶಿವರಾತ್ರಿಯಂದು ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಕೊಲೆ; ಮೂವರು ಆರೋಪಿಗಳು ಅರೆಸ್ಟ್

ಚಿಕ್ಕಬಳ್ಳಾಪುರ ತಾಲೂಕು ಯರಗಾನಹಳ್ಳಿ ಗ್ರಾಮದ ಬಳಿ ತೋಟದಲ್ಲಿದ್ದ ಚಂದ್ರಶೇಖರ್ ಎನ್ನುವವರನ್ನು ನಂಬಿಸಿ ಕಳ್ಳತನ ಮಾಡಲಾಗಿತ್ತು. ಇದರಿಂದ ನೊಂದ ಚಂದ್ರಶೇಖರ್ ನ್ಯಾಯಕ್ಕಾಗಿ ಚಿಕ್ಕ ಗ್ರಾಮಾಂತರ ಪೊಲೀಸರ ಮೊರೆ ಹೋಗಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:29 pm, Mon, 11 March 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್