ಮಂಗಳೂರು: ಪತ್ನಿ, ಮಗನನ್ನು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ಭೀಕರ ಘಟನೆ ನಡೆದಿದೆ. ಕಾರ್ತಿಕ್ ಭಟ್ ಎಂಬಾತ ತನ್ನ ಪತ್ನಿ ಪ್ರಿಯಾಂಕಾ ಮತ್ತು ನಾಲ್ಕು ವರ್ಷದ ಮಗ ಹೃದಯ್ ಅನ್ನು ಚೂರಿಯಿಂದ ಇರಿದು ಕೊಂದು ನಂತರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಸಮಸ್ಯೆ ಕಾರಣ ಎಂದು ಶಂಕಿಸಲಾಗಿದೆ.

ಮಂಗಳೂರು: ಪತ್ನಿ, ಮಗನನ್ನು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ
ಮಂಗಳೂರು: ಪತ್ನಿ, ಮಗನನ್ನು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Nov 09, 2024 | 6:20 PM

ಮಂಗಳೂರು, ನವೆಂಬರ್​ 09: ಪತ್ನಿ ಮತ್ತು ಮಗನನ್ನು ಚೂರಿಯಿಂದ ಇರಿದು ಕೊಂದು (Kills) ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಪತ್ನಿ ಪ್ರಿಯಾಂಕಾ(28), ಪುತ್ರ ಹೃದಯ್(4) ಕೊಲೆ ಮಾಡಿ ಕಾರ್ತಿಕ್ ಭಟ್(32) ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮುಲ್ಕಿ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಹಕಾರಿ ಬ್ಯಾಂಕ್​ನಲ್ಲಿ ಉದ್ಯೋಗ ಮಾಡಿಕೊಂಡಿದ್ದ ಕಾರ್ತಿಕ್ ಭಟ್​ ನಿನ್ನೆಯೇ ಪತ್ನಿ, ಮಗನನ್ನು ಕೊಂದು ಬಳಿಕ ತಾವು ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ತಿಕ್ ಫ್ಲ್ಯಾಟ್ ಬಳಿಗೆ ಪೊಲೀಸರು ಬಂದಾಗ ಪತ್ನಿ, ಪುತ್ರನ ಶವ ಪತ್ತೆ ಆಗಿದೆ.

ಕೌಟುಂಬಿಕ ಸಮಸ್ಯೆಯಿಂದ ಹತ್ಯೆ ಮಾಡಿರುವ ಶಂಕೆ

ಸೊಸೆ ಮತ್ತು ಮೊಮ್ಮಗನ ಮೃತದೇಹ ಮನೆಯಲ್ಲಿದ್ದರೂ ವೃದ್ಧ ಅತ್ತೆ ಮಾವನಿಗೆ ಗೊತ್ತೆ ಆಗಿಲ್ಲ. ಕಾರ್ತಿಕ್ ಪತ್ನಿಗೆ ತನ್ನ ಮಾವ ಅತ್ತೆಯೊಂದಿಗೆ ಮನಸ್ತಾಪವಿದ್ದ ಮಾಹಿತಿ ಇದೆ. ಮನೆಯ ಕೋಣೆಯಲ್ಲಿ ಮತೃ ಕಾರ್ತಿಕ್ ಕುಟುಂಬ ಪ್ರತ್ಯೇಕವಾಗಿದ್ದು, ಇಡೀ ದಿನ ಮನೆಯ ಕೋಣೆಯಲ್ಲೇ ಇರುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಊರಿಗೆ ಹೋಗಿ ಬರುವಷ್ಟರಲ್ಲಿ ವ್ಯಾಪಾರಿಗೆ ಕಾದಿತ್ತು ಶಾಕ್​: ಮನೆಯಲ್ಲಿದ್ದ 15 ಕೋಟಿ ಮೌಲ್ಯದ ಚಿನ್ನ ಕಳವು

ಇನ್ನು ಮೃತ ಕಾರ್ತಿಕ್ ತಂದೆ ಜನಾರ್ದನ ಭಟ್​ ಪಕ್ಷಿಕೆರೆ ಜಂಕ್ಷನ್​ಲ್ಲಿ ಹೋಟೆಲ್ ನಡೆಸುತ್ತಿದ್ದರು. ನಿನ್ನೆ ಬೆಳಗ್ಗೆಯೂ ಮನೆಯಿಂದ ಹೋಟೆಲ್​ಗೆ ತೆರಳಿದ್ದರು. ಈ ವೇಳೆ ಹೆಂಡತಿ ಮತ್ತು ಮಗುವನ್ನು ಕೋಣೆಯೊಳಗೆ ಕಾರ್ತಿಕ್ ಹತ್ಯೆ ಮಾಡಿದ್ದಾರೆ.

ನಿನ್ನೆ ರಾತ್ರಿಯೂ ಮಗ, ಸೊಸೆ ಮತ್ತು ಮೊಮ್ಮಗ ಕೋಣೆಯಲ್ಲಿಯೇ ಇದ್ದಾರೆಂದು ಮಾವ ಜನಾರ್ದನ ಭಾವಿಸಿದ್ದರು. ಇಂದು ಬೆಳಗ್ಗೆ ಕೂಡ ಎಂದಿನಂತೆ ಅವರು ಹೋಟೆಲ್​ಗೆ ತೆರಳಿದ್ದಾರೆ. ಮಧ್ಯಾಹ್ನ ಕಾರ್ತಿಕ್ ವಿಳಾಸ ಹುಡುಕಿಕೊಂಡು ಪಕ್ಷಿಕೆರೆಯ ಮನೆಗೆ ಪೊಲೀಸರು ಬಂದಿದ್ದಾರೆ. ಮನೆಯ ಕೋಣೆಯ ಬಾಗಿಲು ತೆರೆದಾಗ ಕಾರ್ತಿಕ್ ಪತ್ನಿ, ಮಗ ಮೃತದೇಹ ಪತ್ತೆ ಆಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ