ಅಸ್ಸಾಂ ರೈಫಲ್ಸ್ನ ಯೋಧರೊಬ್ಬರು ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 6 ಮಂದಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ (ಎಆರ್) ಸೈನಿಕನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ಯೋಧರಿಗೆ ಗಾಯಗಳಾಗಿದ್ದು, ಅವರನ್ನು ಚುರಾಚಂದ್‌ಪುರದ ಸೇನಾ ಆಸ್ಪತ್ರೆಗೆ ರವಾನಿಸಲಾಗಿದೆ.
ಎಆರ್ ಬೆಟಾಲಿಯನ್ ಆವರಣದಲ್ಲಿ ಈ ಘಟನೆ ನಡೆದಿದ್ದು, ಘರ್ಷಣೆ ಪೀಡಿತ ಮಣಿಪುರದ ಚುರಾಚಂದ್‌ಪುರ ಮೂಲದ ಯೋಧ ಸಹ ಎಆರ್ ಸಿಬ್ಬಂದಿಯ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯ ಹಿಂದಿನ ಉದ್ದೇಶ ಅಸ್ಪಷ್ಟವಾಗಿದ್ದು, ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಮತ್ತಷ್ಟು ಓದಿ: ಹಳೆ ವೈಷಮ್ಯ ಹಿನ್ನೆಲೆ ವಿಜಯಪುರದಲ್ಲಿ ಗುಂಡಿನ ದಾಳಿ: ಓರ್ವನಿಗೆ ಗಾಯ
ಎಲ್ಲಾ ಅಸ್ಸಾಂ ರೈಫಲ್ಸ್ ಬೆಟಾಲಿಯನ್ಗಳು ಮಣಿಪುರದ ವಿವಿಧ ಸಮುದಾಯಗಳಿಗೆ ಸೇರಿದವರು ಸೇರಿದಂತೆ ಮಿಶ್ರ ವರ್ಗ ಸಂಯೋಜನೆಯನ್ನು ಹೊಂದಿವೆ. ಮಣಿಪುರದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:55 am, Wed, 24 January 24