AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್

ಬಿಜೆಪಿ ಮುಖಂಡನನೋರ್ವನ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಮೊದಲಿಗೆ ಕಾರಿನಲ್ಲೇ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಸಾಲದಕ್ಕೆ ಕಾರಿನಿಂದ ಇಳಿದು ಹೆದ್ದಾರಿಯಲ್ಲೇ ಸಾರ್ವಜನಿಕವಾಗಿ ರಾಸಲೀಲೆಯಲ್ಲಿ ತೊಡಗಿಸಿಕೊಂಡಿದ್ದಾನೆ. ಸದ್ಯ ಮುಖಂಡನ ಖುಲ್ಲಂ ಖುಲ್ಲಾ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ. ಹಾಗಾದ್ರೆ, ಮುಖಂಡ ಎಲ್ಲಿಯವರು? ಈ ಕೃತ್ಯ ನಡೆದಿದ್ದು ಎಲ್ಲಿ? ಇದಕ್ಕೆ ಪೊಲೀಸರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್
Manohar Lal Dhakad
ರಮೇಶ್ ಬಿ. ಜವಳಗೇರಾ
|

Updated on:May 25, 2025 | 11:12 AM

Share

ಮಂಡಸೌರ್, (ಮೇ 25): ಮಧ್ಯಪ್ರದೇಶದ (madhya pradesh) ಮಂಡಸೌರ್‌ ಜಿಲ್ಲೆಯ ಬಿಜೆಪಿ ಸದಸ್ಯ ಮನೋಹರ್ ಲಾಲ್ ಧಕಡ್ (Manohar Lal Dhakad) ಎಂಬಾತನ ಆಕ್ಷೇಪಾರ್ಹ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಒಬ್ಬ ಮಹಿಳೆಯೊಂದಿಗೆ ಧಕಡ್‌, ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ನಿಲ್ಲಿಸಿದ ಕಾರಿನಲ್ಲೇ ರಾಸಲೀಲೆ ನಡೆಸಿದ್ದಾನೆ. ಸಾಲದಕ್ಕೆ ಕಾರಿನಿಂದ ಇಳಿದು ಹೆದ್ದಾರಿಯಲ್ಲೇ ಸಾರ್ವಜನಿಕವಾಗಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದು, ಹೆದ್ದಾರಿಯಲ್ಲಿ ಅಳವಡಿಸಲಾದ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಮನೋಹರ್ ಲಾಲ್ ಧಕಡ್​ನ ರಾಸಲೀಲೆ ವಿಡಿಯೋ ಸಿಕ್ಕಾಪಟೆ ವೈರಲ್ ಆಗಿದ್ದು, ಜನರು ಛೀ ಥೂ ಎಂದು ಉಗಿಯುತ್ತಿದ್ದಾರೆ.

ವಿಡಿಯೋದಲ್ಲೇನಿದೆ?

ವಿಡಿಯೋದಲ್ಲಿ ಮನೋಹರ್ ಲಾಲ್ ಧಕಡ್ ತನ್ನ ಕಾರನ್ನು ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ನಿಲ್ಲಿದ್ದಾನೆ. ಮೊದಲು ಆ ಕಾರಿನಿಂದ ಒಬ್ಬ ಮಹಿಳೆ ಬಟ್ಟೆ ಇಲ್ಲದೆ ಹೊರಬರುತ್ತಾಳೆ. ನಂತರ ಧಕಡ್ ಕೂಡ ಅರ್ಧ ಪ್ಯಾಂಟ್​ ಬಿಚ್ಚಿಕೊಂಡು ಹೊರಬರುತ್ತಾನೆ. ಬಳಿಕ ರಸ್ತೆಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾನೆ. ಈ ವಿಡಿಯೋ 8ನೇ ಲೇನ್‌ನಲ್ಲಿ ಅಳವಡಿಸಲಾದ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ 8 ಲೇನ್‌ನದ್ದಾಗಿದೆ ಹಾಗೂ ಇದು ಹೆದ್ದಾರಿಯಲ್ಲಿ ಅಳವಡಿಸಲಾದ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಬೆನ್ನಲ್ಲೇ ಆತ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಮತ್ತು ಬರಿಸಿ ಬೆಳಗಾವಿಯ ಮೆಡಿಕಲ್​​ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ವಿಡಿಯೋದಲ್ಲಿ ಧಕಡ್ ಕಾಣಿಸಿಕೊಂಡಿರುವ ಬಿಳಿ ಕಾರಿನ ನೋಂದಣಿ ಸಂಖ್ಯೆ ಎಂಪಿ 14, ಸಿಸಿ 4782 ಆಗಿದ್ದು, ಇದು ಮನೋಹರ್ ಲಾಲ್ ಧಕಡ್ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ. ಈ ನಡುವೆ ಧಕಡ್‌ ಮಹಾಸಭಾ ಎಂಬ ಸಂಘಟನೆಯಿಂದ ಮನೋಹರ್ ಲಾಲ್ ಧಕಡ್ ನನ್ನು ವಜಾ ಮಾಡಲಾಗಿದೆ.

ಇದನ್ನೂ ಓದಿ
Image
ತುಂಡುಡುಗೆ ತೊಟ್ಟು ಅಶ್ಲೀಲ ವಿಡಿಯೋ ಮಾಡ್ತಾನೆ ಗಂಡನ ವಿರುದ್ಧ ಪತ್ನಿಯ ಆರೋಪ
Image
ಎಸ್​ಸಿ-ಎಸ್ಟಿ ಗರ್ಲ್ಸ್​ ಹಾಸ್ಟೆಲ್​ನಲ್ಲಿ ಬಾಲಕಿ ಮೇಲೆ ಅತ್ಯಾಚಾರ
Image
ಚಲಿಸುವ ಕಾರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
Image
ಬಾಲಕಿಯನ್ನು ಅಪಹರಿಸಿ, ವಾರಗಳ ಕಾಲ ಅತ್ಯಾಚಾರ

ಇನ್ನು ಈ ರಾಸಲೀಲೆ ವೈರಲ್ ಆಗುತ್ತಿರುವ ಬಗ್ಗೆ ತನಿಖೆ ನಡೆಸಿದಾಗ ಮೇ 13ರ ರಾತ್ರಿ ಆ ವಿಡಿಯೋ ಭಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ಪತ್ತೆಯಾಗಿದ್ದು, ಸದ್ಯ ಇಬ್ಬರ ವಿರುದ್ಧ ಬಿಎನ್​ಎಸ್​​ ಸೆಕ್ಷನ್ 296,285,3(5) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ಆರೋಪಿಗಳ ಶೋಧ ನಡೆಸಿದ್ದಾರೆ.

ಬಿಜೆಪಿ ನಾಯಕನಲ್ಲ ಎಂದು ಸ್ಪಷ್ಟನೆ

ಇನ್ನು ಮನೋಹರ್ ಲಾಲ್ ಧಕಡ್ ರಾಸಲೀಲೆ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಂಡಸೌರ್‌ ಜಿಲ್ಲಾಧ್ಯಕ್ಷ ರಾಜೇಶ್‌ ದೀಕ್ಷಿತ್‌ ಪ್ರತಿಕ್ರಿಯಿಸಿದ್ದು, ಧಕದ್ ಅವರ ಪತ್ನಿ ಮಂಡಸೌರ್ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯೆ. ಆದರೆ ಧಕಡ್‌ ಪಕ್ಷದ ನಾಯಕನಲ್ಲ. ಆತ ಆನ್‌ಲೈನ್‌ನಲ್ಲಿ ಬಿಜೆಪಿ ಸದಸ್ಯತ್ವ ಪಡೆದಿದ್ದ ಎಂದು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ವರ್ತಿಸುವುದು ಸರಿಯಲ್ಲ. ಪೊಲೀಸರು ವೀಡಿಯೊ ಚಿತ್ರೀಕರಣಗೊಂಡ ಸ್ಥಳಳವನ್ನು ಗುರುತಿಸುತ್ತಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಉಪ ಮಹಾನಿರೀಕ್ಷಕ ಮನೋಜ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ.

ಈ ಘಟನೆಯು ಸಾರ್ವಜನಿಕ ಸ್ಥಳಗಳಲ್ಲಿ ಚುನಾಯಿತ ಪ್ರತಿನಿಧಿಗಳ ನಡವಳಿಕೆ ಮತ್ತು ಜವಾಬ್ದಾರಿಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:11 am, Sun, 25 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ