ಹಾಸನ, ಜುಲೈ 21: ಟಿಪ್ಪರ್ ವಾಹನ ಡಿಕ್ಕಿ (accident) ಯಾಗಿ ಇನೋವಾ ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ದಾರುಣ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ. ಕುಪ್ಪಳ್ಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ ಅಶೋಕ್, ತಟ್ಟೆಕೆರೆ ಗ್ರಾಮದ ಪುರುಷೋತ್ತಮ ಹಾಗೂ ಆಲೂರು ತಾಲ್ಲೂಕಿನ ಚಿಗಳೂರು ಗ್ರಾಮದ ದಿನೇಶ್ ಮೃತರು. ಸದ್ಯ ಮೃತದೇಹಗಳನ್ನು ಆಲೂರಿನ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇನೋವಾ ಕಾರಿನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ವೇಳೆ ಹಾಸನ ಕಡೆಯಿಂದ ಆಗಮಿಸುತ್ತಿದ್ದ ಟಿಪ್ಪರ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸದ್ಯ ಮೃತಪಟ್ಟವರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿದ್ದ 9 ಕುರಿಗಳ ಕತ್ತು ಕೊಯ್ದು ದುಷ್ಕರ್ಮಿಗಳು ಕೊಂದಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ನಡೆದಿದೆ. 39 ಕುರಿಗಳಲ್ಲಿ 9 ಕುರಿಗಳ ಕತ್ತು ಸೀಳಿದ್ದು, 27 ಕುರಿಗಳನ್ನ ಹೊತ್ತೊಯ್ದಿದ್ದಾರೆ. ಕೊಟ್ಟಿಗೆ ತುಂಬಾ ಕುರಿಗಳ ಮೃತದೇಹ ಹರಡಿದ್ದು, ದಿನಕರ್ ಎಂಬುವರಿಗೆ ಸೇರಿದ್ದು ಎನ್ನಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಬಂಧಿತ ಶಂಕಿತ ಉಗ್ರರ ಬಳಿ ಸಿಕ್ಕಿದ್ದು ವಾಕಿಟಾಕಿ ಅಲ್ಲವೇ ಅಲ್ಲಾ! ಇಲ್ಲಿದೆ ಅಸಲಿ ಕಹಾನಿ
ಕಾರವಾರ: ಬೈಕ್‌ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 66ರ ಎಲ್‌ಐಸಿ ಕ್ರಾಸ್ ಬಳಿ ನಡೆದಿದೆ. ಎಲ್‌ಐಸಿ ಪ್ರತಿನಿಧಿ ಸಂದೇಶ ನಾಯ್ಕ ಅಪಾಯದಿಂದ ಪಾರಾದ ಬೈಕ್ ಸವಾರ. ರಸ್ತೆಯಲ್ಲಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ನಾಲ್ಕು ಬಾರಿ ಪತಿಯನ್ನು ಬಿಟ್ಟು ಓಡಿಹೋಗಿದ್ದ ಪತ್ನಿ ಇನ್ಸ್ಟಾಗ್ರಾಮ್ ರೀಲ್ಸ್ ಬಾಯ್ಫ್ರೆಂಡ್ ಜೊತೆ ಪರಾರಿ
ಕುಮಟಾದಿಂದ ಭಟ್ಕಳ ಕಡೆ ಕೆಎಸ್ಆರ್‌ಟಿಸಿ ಬಸ್ ತೆರಳುತ್ತಿತ್ತು. ಡಿಕ್ಕಿ ರಭಸಕ್ಕೆ ಡಿವೈಡರ್ ಮೇಲೆ ಬಸ್ ಹತ್ತಿದೆ. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:36 pm, Fri, 21 July 23