AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟಾಯಂ ಮೆಡಿಕಲ್ ಕಾಲೇಜಿನಲ್ಲಿ ಅಗ್ನಿ ಅವಘಡ; ಕಸದ ರಾಶಿಯಿಂದ ಹರಡಿದ ಬೆಂಕಿ

ಕೊಟ್ಟಾಯಂ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಹಿಂಬದಿಯಲ್ಲಿದ್ದ ತ್ಯಾಜ್ಯದ ರಾಶಿಗೆ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ.

ಕೊಟ್ಟಾಯಂ ಮೆಡಿಕಲ್ ಕಾಲೇಜಿನಲ್ಲಿ ಅಗ್ನಿ ಅವಘಡ; ಕಸದ ರಾಶಿಯಿಂದ ಹರಡಿದ ಬೆಂಕಿ
ಕೊಟ್ಟಾಯಂನಲ್ಲಿ ಬೆಂಕಿ ಅವಘಡ
TV9 Web
| Edited By: |

Updated on: Dec 18, 2021 | 5:52 PM

Share

ಕೊಟ್ಟಾಯಂ: ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕೊಟ್ಟಾಯಂ ಮೆಡಿಕಲ್ ಕಾಲೇಜಿನ ಹಿಂಭಾಗದಲ್ಲಿದ್ದ ತ್ಯಾಜ್ಯಗಳ ರಾಶಿಗೆ ಬೆಂಕಿ ತಗುಲಿದ್ದು, ಇದರಿಂದ ಸುತ್ತಲೂ ದಟ್ಟ ಹೊಗೆ ಆವರಿಸಿ, ಆಗಸದಲ್ಲೆಲ್ಲ ಬೆಂಕಿಯ ಉಂಡೆಗಳು ಏಳುತ್ತಿದ್ದವು. ಈ ಘಟನೆಯಿಂದ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೊಟ್ಟಾಯಂ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಹಿಂಬದಿಯಲ್ಲಿದ್ದ ತ್ಯಾಜ್ಯದ ರಾಶಿಗೆ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ.

ಇದರಿಂದ ಮೆಡಿಕಲ್ ಕಾಲೇಜಿಗೆ ಬೆಂಕಿ ಆವರಿಸಿದ್ದು, ಕಾಲೇಜಿನಿಂದ ದೊಡ್ಡ ಪ್ರಮಾಣದ ಹೊಗೆ ಹೊರಬರುತ್ತಿದ್ದರೂ ಸಹ ಕಾಲೇಜು ಮತ್ತು ಆಸ್ಪತ್ರೆಯ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆ ಸ್ಥಳದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ.

ಕಾಲೇಜಿನ ಸಿಬ್ಬಂದಿ ತೆಗೆದುಕೊಂಡು ಹೋಗಿದ್ದ ಬ್ಯಾಗ್ ಸೇರಿದಂತೆ ಎಲ್ಲವೂ ಬೆಂಕಿಗೆ ಆಹುತಿಯಾಗಿದೆ. ಎರಡು ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಪ್ರಯತ್ನಿಸುತ್ತಿವೆ. ಇಂದು ಮಧ್ಯಾಹ್ನ 2.30ಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಈ ಸ್ಥಳದಲ್ಲಿ ತ್ಯಾಜ್ಯವನ್ನು ಮತ್ತು ಪ್ಲಾಸ್ಟಿಕ್ ಕವರ್​ಗಳನ್ನು ಸಂಗ್ರಹಿಸಿಡಲಾಗಿತ್ತು.

ಇದನ್ನೂ ಓದಿ: ವರನಿದ್ದ ಕುದುರೆ ಗಾಡಿಗೆ ಬೆಂಕಿ! ತಪ್ಪಿತು ಬಾರಿ ದೊಡ್ಡ ಅನಾಹುತ; ವಿಡಿಯೋ ವೈರಲ್

Pakistan Bomb Blast: ಪಾಕಿಸ್ತಾನದ ಕರಾಚಿಯಲ್ಲಿ ಕಾರ್ ಬಾಂಬ್ ಸ್ಫೋಟ; 10 ಜನ ಸಾವು, 13ಕ್ಕೂ ಹೆಚ್ಚು ಮಂದಿಗೆ ಗಾಯ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ