AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ

ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ.

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ
ಮೃತ ವಿದ್ಯಾರ್ಥಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 29, 2023 | 9:12 AM

Share

ಬೆಂಗಳೂರು: ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ(Student). ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಸುಮಾರು ನಿನ್ನೆ ರಾತ್ರಿ 9.30 ಕ್ಕೆ ಈ ವೇಳೆ ಭಾಸ್ಕರ್​ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಈ ಕುರಿತು ಪೊಲೀಸರು ಕಾಲೇಜು ಸಿಸಿಟಿವಿ ಪರಿಶೀಲಿಸುತ್ತಿದ್ದಾರೆ.

ಎಣ್ಣೆ ನಶೆಯಲ್ಲಿ ಕಿರಿಕ್: ಅತ್ತಿಗೆ, ಅಣ್ಣನ ಮಗನನ್ನ ಕತ್ತರಿಸಿ ಕೊಂದ ಬಾಮೈದ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲುಕಿನ ಹೆಗಡಹಳ್ಳಿ ಭೀಕರ ಡಬಲ್ ಮರ್ಡರ್​​ಗೆ ಸಾಕ್ಷಿಯಾಗಿದೆ. ಹೌದು ಏ.27 ರ ಮದ್ಯಾಹ್ನ ಶಾಂತಮ್ಮ ಹಾಗೂ ಯಶವಂತ್ ಎಂಬುವವರು ಗದ್ದೆಗೆ ನೀರು ಹಾಯಿಸಲು ತೆರಳಿದ್ದಾರೆ. ಇದೇ ವೇಳೆ ಗದ್ದೆ ಬಳಿ ಬಂದ ಮೈದುನ ಸತೀಶ್​ ಎಂಬಾತ ನೀರಿನ ವಿಚಾರಕ್ಕೆ ಕಿರಿಕ್ ತೆಗೆದಿದ್ದಾನೆ. ಶಾಂತಮ್ಮ ಹಾಗೂ ಸತೀಶ್​ನಿಗೂ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ, ರೊಚ್ಚಿಗೆದ್ದ ಸತೀಶ ಮಿಷನ್ ಮನೆಯಲ್ಲಿದ್ದ ಕುಡುಗೋಲು ತೆಗೆದುಕೊಂಡು ಬಂದು ಏಕಾಏಕಿ ದಾಳಿ ಮಾಡಿದ್ದಾನೆ. ಹೌದು ಶಾಂತಮ್ಮಳ ತಲೆ ಎದೆ ಕತ್ತು ಹಾಗೂ ಹೊಟ್ಟೆ ಭಾಗಕ್ಕೆ ಮನಸೋ ಇಚ್ಛೆ ಕೊಚ್ಚಿ ಹಾಕಿದ್ದಾನೆ. ಕುಡುಗೋಲಿನ ಏಟಿಗೆ ಶಾಂತಮ್ಮ ಅರಚಾಡುತ್ತ ಕೆಳಗೆ ಬಿದ್ದು ಪ್ರಾಣ ಬಿಟ್ಟಿದ್ದಾಳೆ. ಅಮ್ಮನ ಚೀರಾಟ, ಕೂಗಾಟ ಕೇಳಿದ ಮಗ ಯಶವಂತ್ ಓಡೋಡಿ ಬಂದು, ತಾಯಿ ಸಹಾಯಕ್ಕೆ ಮುಂದಾಗಿದ್ದಾನೆ. ಈ ವೇಳೆ ಯಶವಂತ್ ಮೇಲೆಯೂ ದಾಳಿ ನಡೆಸಿದ ಸತೀಶ ಆತನನ್ನು ಕೊಚ್ಚಿ ಕೊಂದಿದ್ದಾನೆ.

ಇದನ್ನೂ ಓದಿ:ಶಿವಮೊಗ್ಗ: ಹಿಂದೂ ಯುವಕನ ಬರ್ಬರ ಹತ್ಯೆ, ನಾಲ್ವರು ಹಂತಕರು ಅಂದರ್

ಇನ್ನು ಆರೋಪಿ ಕೊಲೆ ಮಾಡಿದ ಬಳಿಕ ಸಿದಾ ಮನೆಗೆ ಬಂದ ಸತೀಶ ಸ್ನಾನ ಮಾಡಿದ್ದಾನೆ. ಬಳಿಕ ತನ್ನ ಹೆಂಡತಿ ಮಕ್ಕಳನ್ನ ತವರು ಮನೆಗೆ ಕಳುಹಿಸಿದ್ದಾನೆ. ಆದಾದ ಬಳಿಕ ನೇರವಾಗಿ ಪಾಂಡವಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪಾಂಡವಪುರ ಪೊಲೀಸರು. ಆರೋಪಿಯನ್ನ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಅದೇನೆ ಹೇಳಿ ಕ್ಷುಲ್ಲಕ ಕಾರಣಕ್ಕೆ ಸ್ವಂತ ಅತ್ತಿಗೆ ಹಾಗೂ ಆಕೆಯ ಮಗನನ್ನ ಕೊಚ್ಚಿ ಕೊಂದಿದ್ದು ಮಾತ್ರ ನಿಜಕ್ಕೂ ದುರಂತವೇ ಸರಿ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್