AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಗಳಿ ನಿದ್ರೆಗೆ ತೊಂದರೆ ಮಾಡಿದ ನಾಯಿಮರಿಗಳನ್ನು ಜೀವಂತವಾಗಿ ಸುಟ್ಟು ಹಾಕಿದ ಮಹಿಳೆಯರು!

ಮೀರತ್‌ನಲ್ಲಿ ತಮ್ಮ ನಿದ್ರೆಗೆ ಭಂಗ ತಂದಿದ್ದಕ್ಕಾಗಿ ಇಬ್ಬರು ಮಹಿಳೆಯರು ನಿರ್ದಯವಾಗಿ 5 ನಾಯಿಮರಿಗಳನ್ನು ಜೀವಂತವಾಗಿ ಸುಟ್ಟು ಹಾಕಿದರು. ಈ ಪ್ರಕರಣದಲ್ಲಿ ಆ ಮಹಿಳೆಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಬೊಗಳಿ ನಿದ್ರೆಗೆ ತೊಂದರೆ ಮಾಡಿದ ನಾಯಿಮರಿಗಳನ್ನು ಜೀವಂತವಾಗಿ ಸುಟ್ಟು ಹಾಕಿದ ಮಹಿಳೆಯರು!
ನಾಯಿ ಮರಿ
ಸುಷ್ಮಾ ಚಕ್ರೆ
|

Updated on: Nov 09, 2024 | 9:58 PM

Share

ಮೀರತ್: ಬೀದಿ ಬದಿಯ ನಾಯಿಮರಿಗಳ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಆರೋಪದ ಮೇಲೆ ಇಬ್ಬರು ಮಹಿಳೆಯರ ವಿರುದ್ಧ ಮೀರತ್‌ನ ಕಂಕೇರಖೇಡಾ ಪ್ರದೇಶದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯರ ಪ್ರಕಾರ, ಅದೇ ನೆರೆಹೊರೆಯ ನಿವಾಸಿಗಳಾದ ಮಹಿಳೆಯರು ನಾಯಿಮರಿಗಳ ಬೊಗಳುವಿಕೆಯಿಂದ ಹತಾಶೆಗೊಂಡಿದ್ದರು. ಅದೇ ಕಾರಣಕ್ಕೆ ನಾಯಿಮರಿಗಳನ್ನು ಜೀವಂತವಾಗಿ ಸುಟ್ಟುಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಅನಿಮಲ್ ಕೇರ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಅಂಶುಮಾಲಿ ವಶಿಷ್ಠ್ ನೀಡಿದ ಹೇಳಿಕೆ ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ಜಿತೇಂದ್ರ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.

ಕಂಕೇರಖೇಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳಾದ ಶೋಭಾ ಮತ್ತು ಆರತಿ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 325ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆ ದೂರಿನ ಪ್ರಕಾರ, ರೋಹ್ಟಾ ರಸ್ತೆಯ ಸಂತ ನಗರ ಕಾಲೋನಿಯಲ್ಲಿ ನವೆಂಬರ್ 5ರಂದು ಈ ಘಟನೆ ನಡೆದಿದೆ.

ಇದನ್ನೂ ಓದಿ: ಶರ್ಟ್​ನಲ್ಲಿ ಸಿಲುಕಿದ್ದ ನೊಣದಿಂದ ಸಿಕ್ಕಿಬಿದ್ದ ಕೊಲೆ ಆರೋಪಿ

ಇತ್ತೀಚೆಗಷ್ಟೇ ಬೀದಿ ನಾಯಿಯೊಂದು 5 ನಾಯಿ ಮರಿಗಳಿಗೆ ಜನ್ಮ ನೀಡಿತ್ತು. ಅವು ರಾತ್ರಿ ವೇಳೆ ಕೂಗುತ್ತಿದ್ದವು. ಇದರಿಂದ ಕಿರಿಕಿರಿಯಾಗಿದ್ದ ಮಹಿಳೆಯರು ಆ ನಾಯಿಮರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ನಾಯಿ ಮರಿಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು