ಬಿಹಾರದಲ್ಲಿ ಪತ್ರಕರ್ತನ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿದ ಆಗಂತುಕರು

ಬಿಹಾರದಲ್ಲಿ ಪತ್ರಕರ್ತರೊಬ್ಬರ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬಿಹಾರದಲ್ಲಿ ಪತ್ರಕರ್ತನ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿದ ಆಗಂತುಕರು
ಗುಂಡಿನ ದಾಳಿ

Updated on: Aug 18, 2023 | 10:46 AM

ಬಿಹಾರದಲ್ಲಿ ಪತ್ರಕರ್ತರೊಬ್ಬರ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಇಂದು ಮುಂಜಾನೆ ಕೆಲವು ಅಪರಿಚಿತ ವ್ಯಕ್ತಿಗಳು ಅವರ ಮನೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ ನಂತರ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತರನ್ನು ಬಿಮಲ್ ಯಾದವ್ ಎಂದು ಗುರುತಿಸಲಾಗಿದ್ದು, ರಾಣಿಗಂಜ್‌ನಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ ನಾಲ್ವರು ಎದೆಗೆ ಗುಂಡು ಹಾರಿಸಿದ್ದಾರೆ.

ಯಾದವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಮರಣೋತ್ತರ ಪರೀಕ್ಷೆ ಸ್ಥಳದಲ್ಲಿ ಭಾರೀ ಕೋಲಾಹಲ ಉಂಟಾಯಿತು. ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪ್ರದೇಶದ ಸಂಸದರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.

 

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  

Published On - 10:41 am, Fri, 18 August 23

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us