ರಾಜಸ್ಥಾನ: ಬಾಲಕಿಯನ್ನು ಅಪಹರಿಸಿ ಅಪ್ರಾಪ್ತ ಸೇರಿ ಮೂವರಿಂದ ಸಾಮೂಹಿಕ ಅತ್ಯಾಚಾರ

ಬಾಲಕಿಯನ್ನು ಅಪಹರಿಸಿ ಅಪ್ರಾಪ್ತ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದ ಲಾಡ್ನೂನ್​ನಲ್ಲಿ ನಡೆದಿದೆ. ಬಾಲಕಿಯನ್ನು ಭಾನುವಾರ ಮೂವರು ಅಪಹರಿಸಿದ್ದರು, ಅತ್ಯಾಚಾರವೆಸಗಿ ಕಾರಿನಲ್ಲಿ ಕರೆದುಕೊಂಡು ಬಂದು ಮನೆ ಎದುರು ಎಸೆದು ಹೋಗಿದ್ದರು. ಮೂವರು ಆರೋಪಿಗಳ ಪೈಕಿ ಇಬ್ಬರು ಶಂಕಿತರನ್ನು 38 ವರ್ಷದ ಜಸಾರಾಮ್ ಮತ್ತು 34 ವರ್ಷದ ಮಹಾವೀರ್ ಎಂದು ಗುರುತಿಸಲಾಗಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಲಾಡ್ನೂನ್ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ತಿಳಿಸಿದ್ದಾರೆ.

ರಾಜಸ್ಥಾನ: ಬಾಲಕಿಯನ್ನು ಅಪಹರಿಸಿ ಅಪ್ರಾಪ್ತ ಸೇರಿ ಮೂವರಿಂದ ಸಾಮೂಹಿಕ ಅತ್ಯಾಚಾರ
ಅಪರಾಧImage Credit source: India Today
Follow us
ನಯನಾ ರಾಜೀವ್
|

Updated on: Nov 22, 2023 | 10:02 AM

ಬಾಲಕಿಯನ್ನು ಅಪಹರಿಸಿ ಅಪ್ರಾಪ್ತ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದ ಲಾಡ್ನೂನ್​ನಲ್ಲಿ ನಡೆದಿದೆ. ಬಾಲಕಿಯನ್ನು ಭಾನುವಾರ ಮೂವರು ಅಪಹರಿಸಿದ್ದರು, ಅತ್ಯಾಚಾರವೆಸಗಿ ಕಾರಿನಲ್ಲಿ ಕರೆದುಕೊಂಡು ಬಂದು ಮನೆ ಎದುರು ಎಸೆದು ಹೋಗಿದ್ದರು. ಮೂವರು ಆರೋಪಿಗಳ ಪೈಕಿ ಇಬ್ಬರು ಶಂಕಿತರನ್ನು 38 ವರ್ಷದ ಜಸಾರಾಮ್ ಮತ್ತು 34 ವರ್ಷದ ಮಹಾವೀರ್ ಎಂದು ಗುರುತಿಸಲಾಗಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಲಾಡ್ನೂನ್ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ತಿಳಿಸಿದ್ದಾರೆ.

ಮೂರನೇ ಆರೋಪಿ 16 ವರ್ಷದ ಯುವಕನಾಗಿದ್ದು, ಆತನ ವಿರುದ್ಧ ಬಾಲಾಪರಾಧಿ ಕಾನೂನಿನಡಿ ಪ್ರತ್ಯೇಕವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಬಾಲಕಿಯ ಸ್ಥಿತಿ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಆಕೆಯ ಕುಟುಂಬಸ್ಥರು ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ದಾಖಲಿಸಿದ್ದು, ಘಟನೆಯ ಬಗ್ಗೆ ಮಾತನಾಡಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಡಿ (ಗ್ಯಾಂಗ್ರೇಪ್), 363 (ಅಪಹರಣ) ಮತ್ತು ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‌ಎಚ್‌ಒ ಹೇಳಿದರು.

ಮತ್ತಷ್ಟು ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಭಾನುವಾರ ಸಂಜೆ ಮಗಳು ಕಾಣದ ಹಿನ್ನೆಲೆಯಲ್ಲಿ ಹುಡುಕುತ್ತಿರುವಾಗ ಕಾರಿನಿಂದ ಯಾರನ್ನೋ ಎಸೆಯುವುದನ್ನು ಕಂಡಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ, ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ರಾಜಸ್ಥಾನದ ಜೈಪುರದಲ್ಲಿ 40 ವರ್ಷದ ಮಹಿಳೆಯನ್ನು ಬಸ್ ಚಾಲಕನೊಬ್ಬ ಅಪಹರಿಸಿ ಅತ್ಯಾಚಾರ ಎಸಗಿದ್ದ. ಮಹಿಳೆಯ ಪತಿ, ಆಕೆಯನ್ನು ಪತ್ತೆಹಚ್ಚಲು ಸಾಧ್ಯವಾಗದ ನಂತರ ಕಾಣೆಯಾದ ವರದಿಯನ್ನು ಸಲ್ಲಿಸಲು ಹರ್ಮಾಡ ಪೊಲೀಸ್ ಠಾಣೆಗೆ ಸಂಪರ್ಕಿಸಿದರು. ನಂತರ ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ