AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಗೆ ಮೇಲೆ ನಾದಿನಿಗೆ ಪ್ರೀತಿ; ಮದುವೆಯಾಗಲು ಮನೆ ಬಿಟ್ಟು ಓಡಿದ ಸಲಿಂಗ ಕಾಮಿಗಳ ಕತೆಯೇನಾಯ್ತು?

ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಅತ್ತಿಗೆಯೊಂದಿಗೆ ಪ್ರೀತಿಯಲ್ಲಿ ಬಿದ್ದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ನಡೆದಿದೆ. ಅವರಿಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಮನೆ ಬಿಟ್ಟು ಓಡಿಹೋಗಲು ಅವರು ಮುಂದಾಗಿದ್ದಾರೆ. ಬಳಿಕ ತಮ್ಮ ಮದುವೆಗೆ ಯಾರೂ ಒಪ್ಪದ ಹಿನ್ನೆಲೆಯಲ್ಲಿ ಅವರಿಬ್ಬರ ಸಲಿಂಗ ಪ್ರೇಮ ಸಂಬಂಧವು ವಿವಾದಗಳಿಗೆ ಕಾರಣವಾಯಿತು. ಇದಾದ ಬಳಿಕ ಅವರಿಗೆ ತಮ್ಮನ್ನು ಮದುವೆಯಾಗಲು ಮನೆಯಲ್ಲಿ ಬಿಡುವುದಿಲ್ಲ ಎಂದು ಹೇಳಿ ನಾದಿನಿ ತನ್ನ ಅಣ್ಣನ ಹೆಂಡತಿಗೆ ವಿಷ ಸೇವಿಸಲು ಒತ್ತಾಯಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಆ ಮಹಿಳೆಯ ಸ್ಥಿತಿ ಗಂಭೀರವಾಗಿದೆ.

ಅತ್ತಿಗೆ ಮೇಲೆ ನಾದಿನಿಗೆ ಪ್ರೀತಿ; ಮದುವೆಯಾಗಲು ಮನೆ ಬಿಟ್ಟು ಓಡಿದ ಸಲಿಂಗ ಕಾಮಿಗಳ ಕತೆಯೇನಾಯ್ತು?
Girls
ಸುಷ್ಮಾ ಚಕ್ರೆ
|

Updated on: Jan 06, 2025 | 9:54 PM

Share

ಉನ್ನಾವ್: ಉತ್ತರ ಪ್ರದೇಶದ ಉನ್ನಾವೊದಲ್ಲಿ ಯುವತಿಯೊಬ್ಬಳು ತನ್ನ ಅತ್ತಿಗೆಯನ್ನು ಮದುವೆಯಾಗುವಂತೆ ಒತ್ತಾಯಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಳೆದ 6 ತಿಂಗಳಿನಿಂದ ಅವರಿಬ್ಬರ ನಡುವೆ ಆಪ್ತ ಸಂಬಂಧ ಬೆಳೆದಿತ್ತು. ಯುವತಿಗೆ ತನ್ನ ಅತ್ತಿಗೆ ತನ್ನ ಅಣ್ಣನೊಂದಿಗೆ ಆತ್ಮೀಯವಾಗಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಅಣ್ಣನನ್ನು ಬಿಟ್ಟು ತನ್ನನ್ನೇ ಮದುವೆಯಾಗಬೇಕೆಂದು ಆಕೆ ಅತ್ತಿಗೆಗೆ ಒತ್ತಾಯಿಸುತ್ತಿದ್ದಳು. ಇಬ್ಬರೂ ಸಲಿಂಗ ವಿವಾಹವಾಗಲು ಮನೆ ಬಿಟ್ಟು ಓಡಿಹೋಗಲು ನಿರ್ಧರಿಸಿದ್ದರು.

ಈ ವಿಷಯ ಮನೆಯಲ್ಲಿ ಗೊತ್ತಾಗಿ ಅವರ ಪ್ರಣಯ ಸಂಬಂಧವು ವಿವಾದಗಳಿಗೆ ಕಾರಣವಾಯಿತು. ನಂತರ ಅತ್ತಿಗೆ ವಿಷ ಸೇವಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿವಾಹಿತ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಮತ್ತು ಆಕೆಯ ಕುಟುಂಬದವರು ಚಿಕಿತ್ಸೆಗಾಗಿ ಬಂಗಾರ್‌ಮೌ ಸಿಎಚ್‌ಸಿಗೆ ದಾಖಲಿಸಿದ್ದಾರೆ.

ಐದು ದಿನಗಳ ಹಿಂದೆ, ಯುವತಿ ಮತ್ತು ಆಕೆಯ ಅತ್ತಿಗೆ ಇಬ್ಬರೂ ಪರಾರಿಯಾಗಿದ್ದರು. ಆದರೆ ಪೊಲೀಸರು ಅವರನ್ನು ಪತ್ತೆ ಮಾಡಿ ಅವರ ಕುಟುಂಬಗಳಿಗೆ ಒಪ್ಪಿಸಿದ್ದಾರೆ. ವಿವಾಹಿತ ಮಹಿಳೆಯ ಪತಿ ಆಕೆಯಿಂದ ದೂರವಾಗಿದ್ದ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ