ಜಾಮೀನಿನ ಮೇಲೆ ಬಿಡುಗಡೆಗೊಂಡು ಅತ್ಯಾಚಾರ ಸಂತ್ರಸ್ತೆಯನ್ನು ಹಾಡ ಹಗಲೇ ಕೊಚ್ಚಿ ಕೊಂದ ಸಹೋದರರು

ಅತ್ಯಾಚಾರದ ಆರೋಪದ ಮೇಲೆ ಜೈಲು ಸೇರಿದ್ದ ಆರೋಪಿ  ಜಾಮೀನಿನ ಮೇಲೆ ಹೊರಬಂದು ಸಹೋದರನೊಂದಿಗೆ ಸೇರಿ ಅತ್ಯಾಚಾರ ಸಂತ್ರಸ್ತೆಯನ್ನು ಹಾಡಹಗಲಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಂತಕರಾದ ಅಶೋಕ್ ಮತ್ತು ಪವನ್ ನಿಶಾದ್ ಕ್ರೂರ ಹತ್ಯೆಯ ಕೆಲವು ದಿನಗಳ ಮೊದಲು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾವು
Follow us
|

Updated on: Nov 21, 2023 | 12:20 PM

ಅತ್ಯಾಚಾರದ ಆರೋಪದ ಮೇಲೆ ಜೈಲು ಸೇರಿದ್ದ ಆರೋಪಿ  ಜಾಮೀನಿನ ಮೇಲೆ ಹೊರಬಂದು ಸಹೋದರನೊಂದಿಗೆ ಸೇರಿ ಅತ್ಯಾಚಾರ ಸಂತ್ರಸ್ತೆಯನ್ನು ಹಾಡಹಗಲಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಂತಕರಾದ ಅಶೋಕ್ ಮತ್ತು ಪವನ್ ನಿಶಾದ್ ಕ್ರೂರ ಹತ್ಯೆಯ ಕೆಲವು ದಿನಗಳ ಮೊದಲು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಸ್ಥರು ಭಯ ಹಾಗೂ ಅಸಹಾಯಕತೆಯಿಂದ ನೋಡುತ್ತಾ ನಿಂತಿದ್ದರು, ಯುವತಿಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಪವನ್ ನಿಶಾದ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿ ದೂರು ನೀಡಿದ್ದಳು. ಪವನ್ ನಿಶಾದ್ ಹಾಗೂ ಆತನ ಸಹಚರರು ಯುವತಿಯ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದರು, ಜತೆಗೆ ದೂರನ್ನು ಹಿಂಪಡೆಯುವಂತೆಯೂ ಕೇಳಿದ್ದರು, ಆದರೆ ಯುವತಿಯ ಪೋಷಕರು ಅದಕ್ಕೆ ಒಪ್ಪಿರಲಿಲ್ಲ.

ಪವನ್ ಅವರ ಸಹೋದರ ಅಶೋಕ್ ನಿಶಾದ್ ಪ್ರತ್ಯೇಕ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಯುವತಿಯ ಕೊಲೆಗೆ ಎರಡು ದಿನಗಳ ಮೊದಲು ಬಿಡುಗಡೆಗೊಂಡಿದ್ದ. ಇಬ್ಬರೂ ಮಹಿಳೆಯ ಕುಟುಂಬದ ಬಳಿ ಹೋಗಿ ಪ್ರಕರಣ ಮುಚ್ಚಿ ಹಾಕುವಂತೆ ಒತ್ತಾಯಿಸಲಾಗಿತ್ತು. ಆದರೆ ಯುವತಿ ಹಿಂದೆ ಸರಿಯದ ಕಾರಣ ಹೊಲದಲ್ಲಿ ದನವನ್ನು ಮೇಯಿಸಿ ಹಿಂದಿರುಗುತ್ತಿದ್ದಾಗ ಸಹೋದರರು ಹೊಂಚು ಹಾಕಿ ಆಕೆಯನ್ನು ಹತ್ಯೆ ಮಾಡಿದ್ದಾರೆ.

ಮತ್ತಷ್ಟು ಓದಿ: ಮಾತಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ; BBMP ಸಿಬ್ಬಂದಿಯನ್ನು ಕೊಂದ ಸ್ನೇಹಿತ ಅರೆಸ್ಟ್

ಪವನ್ ಮತ್ತು ಅಶೋಕ್ ನಿಶಾದ್ ಈಗ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೇ ಸಮುದಾಯದ ಎರಡು ಕುಟುಂಬದ ನಡುವೆ ಹಳೆಯ ವೈಷಮ್ಯವಿತ್ತು,ವ್ಯಾಜ್ಯ ನಡೆಯುತ್ತಿತ್ತು. ಮಾಹೆವಾಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ದೇರ್ಹಾ ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದೆ.

ಪೊಲೀಸರು ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ತಂಡಗಳನ್ನು ರಚಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ

Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ

ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ

ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ

ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ