AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ತಂದೆಯ ಸ್ನೇಹಿತರಿಂದ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರ, ಗರ್ಭಿಣಿಯಾದ ಇಬ್ಬರು ಬಾಲಕಿಯರು

ತಂದೆಯ ಸ್ನೇಹಿತರು ಇಬ್ಬರು ಹದಿಹರೆಯದ ಸಹೋದರಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ (Rajasthan) ಅಲ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ.

ರಾಜಸ್ಥಾನದಲ್ಲಿ ತಂದೆಯ ಸ್ನೇಹಿತರಿಂದ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರ, ಗರ್ಭಿಣಿಯಾದ ಇಬ್ಬರು ಬಾಲಕಿಯರು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 31, 2023 | 2:05 PM

Share

ಜೈಪುರ, ಜು.31: ತಂದೆಯ ಸ್ನೇಹಿತರು ಇಬ್ಬರು ಹದಿಹರೆಯದ ಸಹೋದರಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ (Rajasthan) ಅಲ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ, ಈ ಬಗ್ಗೆ ಎನ್‌ಇಬಿ ಪೊಲೀಸ್ ಠಾಣೆಯಲ್ಲಿ ತಂದೆ ದೂರು ನೀಡಿದ್ದು, ಇದೀಗ ಇಬ್ಬರೂ ಹುಡುಗಿಯರು ಗರ್ಭಿಣಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ತಂದೆ ನೀಡಿರುವ ದೂರಿನ ಪ್ರಕಾರ ತನ್ನ 15 ಮತ್ತು 13 ವರ್ಷದ ಪುತ್ರಿಯರ ಮೇಲೆ  ಸ್ನೇಹಿತರಾದ ಸಪ್ಪಿ ಮತ್ತು ಸುಭಾನ್ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಹಿರಿಯ ಮಗಳು ಹೊಟ್ಟೆ ನೋವು ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದಳು, ಪೋಷಕರು ಆಕೆಯನ್ನು ತಕ್ಷಣ ವೈದ್ಯರ ಬಳಿಗೆ ಕರೆದುಕೊಂಡು ಹೋಗಿದ್ದಾರೆ. ಈ ಸಮಯದಲ್ಲಿ ಗರ್ಭಿಣಿ ಎಂಬ ವಿಷಯ ಬೆಳಕಿಗೆ ಬಂದಿದೆ. ಇದೀಗ ಆಕೆ ಏಳೂವರೆ ತಿಂಗಳ ಗರ್ಭಿಣಿ ಎಂದು ಆಕೆಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

ಈ ಬಗ್ಗೆ ತಂದೆ ದೊಡ್ಡ ಮಗಳನ್ನು ಪ್ರಶ್ನಿಸಿದಾಗ ಸಪ್ಪಿ ಮತ್ತು ಸುಭಾನ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿಸಿದ್ದಾಳೆ. ಇದರ ಜತೆಗೆ ತಂಗಿಯ ಮೇಲೆಯೂ ಅತ್ಯಾಚಾರವೆಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇನ್ನು ಈ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬಾಲಕಿಗೆ ಬೆದರಿಕೆ ಹಾಕಿದ್ದರು ಎಂದು ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: 6 ತಿಂಗಳ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಶುಕ್ರವಾರ ಎನ್‌ಇಬಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಬಾಲಕಿಯರ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ (ಅಲ್ವಾರ್) ಆನಂದ್ ಶರ್ಮಾ ತಿಳಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿಯರಿಬ್ಬರೂ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.

ಕಿರಿಯ ಬಾಲಕಿ ಎರಡೂವರೆ ತಿಂಗಳ ಗರ್ಭಿಣಿ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎನ್‌ಇಬಿ ಎಸ್‌ಎಚ್‌ಒ ಅನಿಲ್ ಜೈನ್ ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಯಾರು ಬಂಧನವಾಗಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:18 pm, Mon, 31 July 23

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ