Bengaluru News: ಪ್ರೀತಿಸಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಪ್ರೀತಿಸಿದ ಕಾರಣಕ್ಕೆ ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಮನಕಲುಕುವ ಘಟನೆ ನಡೆದಿದೆ. ಆರ್​ಆರ್​ ನಗರದ ಮನು ಎಂಬ ಯುವಕ ಬೆಂಕಿ ದಾಳಿಗೊಳಗಾದ ವಿದ್ಯಾರ್ಥಿ.

Bengaluru News: ಪ್ರೀತಿಸಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಯುವಕ
Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 16, 2023 | 8:07 AM

ಬೆಂಗಳೂರು: ಪ್ರೀತಿಸಿದ ಕಾರಣಕ್ಕೆ ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಮನಕಲುಕುವ ಘಟನೆ ನಡೆದಿದೆ. ಆರ್​ಆರ್‌ ನಗರ(RR Nagar)ದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರನಾದ ಮನು, ತನ್ನ ಸಂಬಂಧಿಕರ ಯುವತಿಯನ್ನು ಪ್ರೀತಿಸುತಿದ್ದ. ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಕಳೆದ ಜುಲೈ 3 ರಂದು ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ ಯುವತಿಯ‌ನ್ನು‌ ಮನೆಗೆ ಕರೆದೊಯ್ದಿದ್ದ. ಈ ವೇಳೆ ಯುವತಿಯ ಪೋಷಕರು ಮನು ಮನೆಗೆ ನುಗ್ಗಿ ಹಲ್ಲೆ ನಡೆಸಿ ಯುವತಿಯನ್ನು ಕರೆದೊಯ್ದುದಿದ್ದರು.

ಕಿಡ್ನಾಪ್ ಮಾಡಿ ಕೈ ಕಾಲು ಕಟ್ಟಿಹಾಕಿ ಬೆಂಕಿ ಇಟ್ಟ ದುಷ್ಕರ್ಮಿಗಳು

ಇದಾದ ಬಳಿಕ ಮನು ಎಂದಿನಂತೆ ಕಾಲೇಜಿಗೆ ತೆರಳಿದ್ದು, ಆತನ ತಂದೆ ತಂದೆ ರಂಗನಾಥ ನಿನ್ನೆ ಬೆಳಗ್ಗೆ ಡ್ರಾಪ್ ಮಾಡಿದ್ದರು. ಬಳಿಕ ವಾಪಾಸ್ಸಾಗುವ ವೇಳೆ ಬಸ್ ನಿಲ್ದಾಣದಲ್ಲಿ‌ ಬಸ್​ಗೆ ಕಾಯುತಿದ್ದ ಮನುವನ್ನು ಕಿಡ್ನಾಪ್ ಮಾಡಿದ ದುಷ್ಕರ್ಮಿಗಳು. ಯುವಕನ ಕೈ ಕಾಲು ಕಟ್ಟಿಹಾಕಿ ಬೆಂಕಿ ಇಟ್ಟಿದ್ದಾರೆ. ಸದ್ಯ ಕುಂಬಳಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಾಳು ವಿದ್ಯಾರ್ಥಿ ಮನುಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳ ವಿರುದ್ದ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ:ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನ ಕೈ ಕಾಲು ಕಟ್ಟಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ತಂದೆ

ಬೆಂಗಳೂರಿನ ಬೃಂದಾವನ ನಗರದಲ್ಲಿ ಟೆಕ್ಕಿ ಅಡ್ಡಗಟ್ಟಿ ಕಿರುಕುಳ; ಪುಂಡರ ಹಾವಳಿಗೆ ಬ್ರೇಕ್ ಹಾಕಲು ಪೊಲೀಸ್​ ಸಜ್ಜು

ಬೆಂಗಳೂರು ಗ್ರಾಮಾಂತರ: ಡ್ಯೂಟಿ ಮುಗಿಸಿ ಮನೆಗೆ ಬರುತ್ತಿದ್ದ ಮಹಿಳಾ ಟೆಕ್ಕಿಯನ್ನ ಅಡ್ಡಗಟ್ಟಿ ನಿಲ್ಲಿಸಿ, ಟೈಮ್ ಪಾಸ್​ಗಾಗಿ ನಿಮ್ಮ ಪೋನ್ ನಂಬರ್ ಕೊಡಿ ಮಾತನಾಡಬೇಕೆಂದು ಮಹಿಳಾ ಟೆಕ್ಕಿಗೆ ಟಾರ್ಚರ್ ನೀಡಿದ್ದರು. ಈ ವೇಳೆ ನಿನಗೇಕೆ ಕೊಡಬೇಕು ನನ್ನ ನಂಬರ್ ಎಂದು ಬೈದು ಮನೆಗೆ ತೆರಳಿದ್ದರು. ಬಳಿಕ ಪುಂಡರು ಮನೆವರೆಗೂ ಫಾಲೋ ಮಾಡಿಕೊಂಡು ಬಂದು ಕಾರ್ ಗ್ಲಾಸ್ ಒಡೆದು ಪರಾರಿಯಾಗಿದ್ದರು. ಬೆಂಗಳೂರು ಉತ್ತರ ತಾಲೂಕಿನ ಬೃಂದಾವನ ನಗರದಲ್ಲಿ ಈ ಘಟನೆ ನಡೆದಿತ್ತು.

ಪೊಲೀಸ್​ ಠಾಣೆಗೆ ದೂರು ನೀಡಿದ್ದ ಟೆಕ್ಕಿ

ಇನ್ನು ಘಟನೆ ಕುರಿತು ಟೆಕ್ಕಿ ಕೊಟ್ಟಿದ್ದ ದೂರಿನ ಮೇರೆಗೆ IPC 354(D),427,341,34ರೀತ್ಯಾ ಪ್ರಕರಣದಡಿ FIR ದಾಖಲು ಮಾಡಿದ್ದ ಪೀಣ್ಯಾ ಪೊಲೀಸರು. ಇದೀಗ ಪುಂಡರ ಹಾವಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಸಜ್ಜಾಗಿದ್ದು, ಅರೋಪಿಗಳ ಬಂಧನಕ್ಕೆ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ