ಬೆಂಗಳೂರಿನಲ್ಲಿ ಮಿತಿಮೀರಿದ ಕಿಡಿಗೇಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮಹಾನಗರದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವಸಂತನಗರದಲ್ಲಿ ಬೆಳಗಿನ ಜಾವ 5 ಗಂಟೆ ವೇಳೆಗೆ ನಡೆದಿದೆ.

ಬೆಂಗಳೂರಿನಲ್ಲಿ ಮಿತಿಮೀರಿದ ಕಿಡಿಗೇಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಬೆಂಗಳೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
Follow us
ರಾಚಪ್ಪಾಜಿ ನಾಯ್ಕ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 06, 2023 | 11:47 AM

ಬೆಂಗಳೂರು, ಆ.6: ಮಹಾನಗರದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದಂತೆ ಕಾಣುತ್ತದೆ. ದಿನವೂ ಒಂದಿಲ್ಲೊಂದು ಅಪರಾಧ ಕೃತ್ಯಗಳು ನಡೆಯುತ್ತಲೇ ಇದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಹೌದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್(Bike)​ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವಸಂತನಗರ(Vasanthanagar)ದಲ್ಲಿ ಬೆಳಗಿನ ಜಾವ 5 ಗಂಟೆ ವೇಳೆಗೆ ನಡೆದಿದೆ. ಇನ್ನು ಮೂವರು ಕಿಡಿಗೇಡಿಗಳು ಸೇರಿ ಬೆಂಕಿ ಹಚ್ಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಕುರಿತು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬ್ಯಾಟರಿ ಸ್ಫೋಟಗೊಂಡು ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್

ಚಾಮರಾಜನಗರ: ಬ್ಯಾಟರಿ ಸ್ಫೋಟಗೊಂಡು ಎಲೆಕ್ಟ್ರಿಕ್ ಬೈಕ್ ಹೊತ್ತಿ ಉರಿದ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ. ಒಂದು ವರ್ಷದ ಹಿಂದೆ ಬಸವರಾಜಪ್ಪ ಎನ್ನುವವರು ಅಕಿನೋವ್ ಬೈಕ್ ಖರೀದಿಸಿದ್ದರು. ಇದೀಗ ಓವರ್ ಹೀಟ್​ನಿಂದಾಗಿ ಬೈಕ್​ನ ಬ್ಯಾಟರಿ ಸ್ಫೋಟಗೊಂಡ ಕುರಿತು ಮಾಹಿತಿ ಸಿಕ್ಕಿದೆ. ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಎಲೆಕ್ಟ್ರಾನಿಕ್ ವಾಹನದ  ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವೃದ್ಧ ಸಾವು, ಮೂವರಿಗೆ ಗಾಯ

ಚಾರ್ಜ್​ಗೆ ಹಾಕಿದ ಹತ್ತೆ ನಿಮಿಷದಲ್ಲಿ ಸ್ಪೋಟಗೊಂಡ ಬೈಕ್ ಬ್ಯಾಟರಿ

ಇನ್ನು ಬೈಕ್​ ಚಾರ್ಜ್​ಗೆ ಹಾಕಿದ ಹತ್ತೆ ನಿಮಿಷದಲ್ಲಿ ಬೈಕ್ ಬ್ಯಾಟರಿ ಸ್ಪೋಟಗೊಂಡು, ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ. ಬೈಕ್ ಹೊತ್ತಿ ಉರಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಬ್ಯಾಟರಿ ಓವರ್ ಹೀಟ್ ಆದ ಪರಿಣಾಮದಿಂದ ಸ್ಪೋಟವಾಗಿದೆಯೆಂದು ಬೆಳಕಿಗೆ ಬಂದಿದೆ. ಇನ್ನು ಬ್ಯಾಟರಿ ಸ್ಪೋಟಗೊಳ್ಳುವ ವಿಡಿಯೋ ಮೊಬೈಲ್ ಕ್ಯಾಮರದಲ್ಲಿ ಸೆರೆಯಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:46 am, Sun, 6 August 23

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ