ಅನಾಥ ವೃದ್ದನ ತಲೆ ಮೇಲೆ ಕಲ್ಲು ಎತ್ತಾಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ನೈಸ್​ ರಸ್ತೆ ಬಳಿ ಒಂದು ಚಿಕ್ಕದಾದ ಪೇಪರ್​ ಶೆಡ್​​ ಹಾಕಿಕೊಂಡು ಜೀವನ ಸಾಗಿಸುತ್ತಿದ್ದ ವೃದ್ಧನ ಮೇಲೆ ದುಷ್ಕರ್ಮಿಗಳು ಏಕಾಎಕಿ ಬಂದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ನಲಮಂಗಲದ ನೈಸ್​ ರಸ್ತೆಯಲ್ಲಿ ನಡೆದಿದೆ.

ಅನಾಥ ವೃದ್ದನ ತಲೆ ಮೇಲೆ ಕಲ್ಲು ಎತ್ತಾಕಿ ಹತ್ಯೆ ಮಾಡಿದ ದುಷ್ಕರ್ಮಿಗಳು
ಪ್ರಾತಿನಿಧಿಕ ಚಿತ್ರ
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 10, 2023 | 2:52 PM

ಬೆಂಗಳೂರು ಗ್ರಾಮಾಂತರ, ಅ.10: ಅನಾಥ ವೃದ್ದನ ತಲೆ ಮೇಲೆ ಕಲ್ಲು ಎತ್ತು ಹಾಕಿ ಹತ್ಯೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala)ದ ನೈಸ್ ರಸ್ತೆ ಬಳಿ ನಡೆದಿದೆ. ಅಂಚೆಪಾಳ್ಯದ ನರಸಿಂಹಯ್ಯ(85) ಮೃತ ವ್ಯಕ್ತಿ. ಸಾವನ್ನಪ್ಪಿದ ನರಸಿಂಹಯ್ಯ ಅನಾಥವಾಗಿ ರಸ್ತೆ ಪಕ್ಕದಲ್ಲಿ ಜೀವನ ಮಾಡುತ್ತಿದ್ದ. ನೈಸ್​ ರಸ್ತೆ ಬಳಿ ಒಂದು ಚಿಕ್ಕದಾದ ಪೇಪರ್​ ಶೆಡ್​​ ಹಾಕಿಕೊಂಡು ಜೀವನ ಸಾಗಿಸುತ್ತಿದ್ದ. ಇದೀಗ ವೃದ್ದನ ಮೇಲೆ ದಿಢೀರ್​ ಕಲ್ಲು ಎತ್ತು ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಕುರಿತು ಲಾರಿ ಚಾಲಕ ನೀಡಿದ ದೂರಿನ ಮೇರೆಗೆ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಂತಕರಿಗಾಗಿ ಬಲೆ ಬೀಸಿದ್ದಾರೆ.

ರಸ್ತೆ ದಾಟುತಿದ್ದ ವ್ಯಕ್ತಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ, ಪಾದಚಾರಿ ಸ್ಥಳದಲ್ಲೇ ಸಾವು

ಕಲಬುರಗಿ: ಚಿಂಚೋಳಿ ತಾಲೂಕಿನ ಯಂಪಳ್ಳಿ ಗ್ರಾಮದ ಬಳಿ ಸಾರಿಗೆ ಬಸ್​ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ನಡೆದಿದೆ. ಬಕ್ಕಯ್ಯಾ(68) ಮೃತ ರ್ದುದೈವಿ. ಇಂದು ಮುಂಜಾನೆ ಬಹಿರ್ದೆಸೆಗೆ ತೆರಳುತ್ತಿದ್ದಾಗ ಬಸ್ ಡಿಕ್ಕಿಯಾಗಿದೆ. ಪರಿಣಾಮ ಬಕ್ಕಯ್ಯಾ  ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ರಾಜಸ್ಥಾನ: ಸಿಕಾರ್​ನಲ್ಲಿ ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ, 3 ದಿನಗಳಲ್ಲಿ ಎರಡನೇ ಸಾವು

ಜೈನ ಮಂದಿರದಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು: ಜೈನ ಮಂದಿರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಗಳನ್ನು ಅಶೋಕ್​ನಗರದ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅಶೋಕ್​​ನಗರದ ಜೈನ್ ದೇವಾಲಯದಲ್ಲಿ ಕಳ್ಳತನ ನಡೆದಿತ್ತು. 14 ಕೆಜಿ ದೇವರ ಬೆಳ್ಳಿಯ ಆಭರಣ ಸೇರಿದಂತೆ ಇನ್ನಿತರ ದೇವಾಲಯದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರು. ಈ ಕುರಿತು ಇದೀಗ  6 ಜನ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇವರುಗಳ ಪೈಕಿ ಓರ್ವ ದೇವಾಲಯದ ಟೈಲ್ಸ್ ಕೆಲಸ ಕೂಡ ಮಾಡಿದ್ದ ಎನ್ನಲಾಗಿದೆ. ಇದಾದ ಎರಡು ತಿಂಗಳ ಬಳಿಕ ಕೃತ್ಯ ಎಸಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ