ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ

ಕಾಣೆಯಾಗಿದ್ದ ಯುವತಿಯ ಮೃತದೇಹ ಮರುದಿನ ಬೆಂಗಳೂರಿನ ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನ ಮನೆ ಮುಂದೆ ಪತ್ತೆಯಾಗಿದ್ದ ಪ್ರಕಣರವನ್ನು ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಕೊಲೆ ಮಾಡಿ ಆರೋಪಿ ಮನೆ ಮುಂದೆ ಶವ ಇಟ್ಟು ಹೋಗಿದ್ದಾನೆ ಎಂಬುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 12, 2023 | 8:23 AM

ಬೆಂಗಳೂರು ಆ.12: ಕಾಣೆಯಾಗಿದ್ದ ಯುವತಿಯ ಮೃತದೇಹ (Dead Body) ಮರುದಿನ ಬೆಂಗಳೂರಿನ (Bengaluru) ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನ ಮನೆ ಮುಂದೆ ಪತ್ತೆಯಾಗಿದ್ದ ಪ್ರಕಣರವನ್ನು ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಕೊಲೆ ಮಾಡಿ ಆರೋಪಿ ಮನೆ ಮುಂದೆ ಶವ ಇಟ್ಟು ಹೋಗಿದ್ದಾನೆ ಎಂಬುವುದು ಪೊಲೀಸರ (Police) ತನಿಖೆಯಲ್ಲಿ ತಿಳಿದುಬಂದಿದೆ. ಕಲಬುರಗಿ ಮಹಾನಂದಾ (21) ಕೊಲೆಯಾದ ಯುವತಿ. ಕೊಲೆ ಆರೋಪಿ ಕೃಷ್ಣ ಚಂದ್​ ಸೇಟಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಮೂಲದ ಮಹಾನಂದಾ ಹಾಗೂ ಆಕೆಯ ಅಕ್ಕ ಇಬ್ಬರೂ ಶೆಲ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​​ನಲ್ಲಿ ವಾಸಿಸುತ್ತಿದ್ದರು. ಇವರ ಪಕ್ಕದ ಮನೆಯಲ್ಲಿ ಒಡಿಶಾ ಮೂಲದ ಕೃಷ್ಣ ಚಂದ ಸೇಟಿ ಎಂಬವನು ವಾಸವಿದ್ದಾನೆ. ಈತ ಟೆಕ್ ಪಾರ್ಕ್​​ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಮಹಾನಂದಾ ಆಗಸ್ಟ್​​ 10 ರಂದು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು.

ಹೀಗಾಗಿ ರಾತ್ರಿ ಊಟಕ್ಕೆಂದು ಸ್ಟೌ ಮೇಲೆ ಅನ್ನ ಮಾಡಲು ಪಾತ್ರೆ ಇಟ್ಟು ಮನೆಯಿಂದ ಹೊರಗೆ ಬಂದಿದ್ದಾರೆ. ಯುವತಿ ಪಕ್ಕದ ಮನೆಯ ಬಾಗಿಲ ಬಳಿ ಬಂದಾಗ ಆರೋಪಿ ಕೃಷ್ಣ ಚಂದ್​ ಸಾಟಿ ಮಹಾನಂದರನ್ನು ಮನೆಯೊಳಗೆ ಎಳೆದುಕೊಂಡು ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಯುವತಿಗೆ ಬಲವಂತವಾಗಿ ಮುತ್ತು ನೀಡಲು ಮುಂದಾಗಿದ್ದಾನೆ. ಈ ವೇಳೆ ಯುವತಿ ನಿರಾಕರಿಸಿ ಕಿರುಚಾಡಲು ಯತ್ನಿಸಿದ್ದಾರೆ.

ಇದನ್ನೂ ಓದಿ:ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ಬಂಧನ

ಈ ವೇಳೆ ಆರೋಪಿ ಕೃಷ್ಣ ಚಂದ್​ ಸಾಟಿ ಹಿಂಬದಿಯಿಂದ ಒಂದು ಕೈಯಿಂದ ಮಹಾನಂದರ ಮೂಗು ಬಾಯಿ ಮುಚ್ಚಿ ಮತ್ತೊಂದು ಕೈಯಿಂದ ಕುತ್ತಿಗೆ ಹಿಸುಕಿದ್ದಾನೆ. ಈ ವೇಳೆ ಕಿರುಚಾಡಲು ಸಾಧ್ಯವಾಗದೆ ಮಹಾನಂದ ಉಸಿರುಗಟ್ಟಿ ಸಾವನಪ್ಪಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿ ಕೃಷ್ಣ ಚಂದ್​ ಸಾಟಿ ಬೆಡ್ ಶೀಟ್​​ನಿಂದ ದೇಹವನ್ನು ಸುತ್ತಿ ಮೂಲೆಯೊಂದರಲ್ಲಿ ಇಟ್ಟಿದ್ದಾನೆ.

ನಂತರ ಬೆಳಗಿನ ಜಾವ 5:30 ರ ಸುಮಾರಿಗೆ ಮನೆಯೊಳಗಿದ್ದ ಶವವನ್ನು ಆರೋಪಿ ಕೃಷ್ಣ ಚಂದ್​ ಸಾಟಿ ಆಕೆಯ ಮನೆಯ ಮುಂದೆನೇ ಹಾಕಿದ್ದಾನೆ. ಸ್ವಲ್ಪ ಸಮಯದ ನಂತರ ಅಕ್ಕ-ಪಕ್ಕದ ಜನರು ಸೇರಿದ್ದಾರೆ. ಈ ವೇಳೆಯೂ ಆರೋಪಿ ಕೃಷ್ಣ ಚಂದ್​​ ಸಾಟಿ ತನಗೆ ಏನು ತಿಳಿಯದಂತೆ ಅಲ್ಲಯೇ ಇದ್ದನು. ಸದ್ಯ ಪೊಲೀಸರು ಆರೋಪಿ ಕೃಷ್ಣ ಚಂದ್​​ ಸಾಟಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮಹದೇವಪುರ ಪೊಲೀಸ್​ ಠಾಣೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 am, Sat, 12 August 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ