
ಬೆಂಗಳೂರು: ಕೋ ಆಪರೇಟಿವ್ ಸೊಸೈಟಿ ಹೆಸರಲ್ಲಿ ಜನರಿಗೆ ವಂಚನೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಣಿರಾಜ್ ಹಾಗೂ ಕೃಷ್ಣಕುಮಾರ್ ಬಂಧಿತ ಆರೋಪಿಗಳು.
ಬೆಂಗಳೂರು ಸೇರಿದಂತೆ ಹಲವೆಡೆ ಸಾರ್ವಜನಿಕರಿಂದ ಹಣವನ್ನ ಆರೋಪಿಗಳು ಹೂಡಿಕೆ ಮಾಡಿದ್ದರು. ಅಧಿಕ ಬಡ್ಡಿಯ ಆಸೆ ತೋರಿಸಿ 12ಜನರಿಗೆ ಸುಮಾರು 8ಲಕ್ಷದವರೆಗೆ ವಂಚಿಸಿದ್ದರು. ಈ ಸಂಬಂಧ 2014ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ನಿನ್ನೆ ಖಚಿತ ಮಾಹಿತಿ ಮೇರೆಗೆ ನಾಗರಬಾವಿ ಬಳಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.