ವಂಶಿಕಾ ಹೆಸರಿನಲ್ಲಿ ವಂಚನೆ ಎಸಗಿದ ಆರೋಪಿ ನಿಶಾ ನರಸಪ್ಪ ವಿರುದ್ಧ ದಾಖಲಾದ ಮತ್ತಷ್ಟು ದೂರುಗಳು

ಮಾಸ್ಟರ್ ಆನಂದ್ ಪುತ್ರಿ ವಂಶಿಕ ಹೆಸರು ಬಳಸಿ ವಂಚನೆ ಎಸಗಿದ್ದ ಆರೋಪಿ ನಿಶಾ ನರಸಪ್ಪ ಈ ಹಿಂದೆ ಹಲವರಿಗೆ ವಂಚಿಸಿದ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ವಂಶಿಕಾ ಹೆಸರಿನಲ್ಲಿ ವಂಚನೆ ಎಸಗಿದ ಆರೋಪಿ ನಿಶಾ ನರಸಪ್ಪ ವಿರುದ್ಧ ದಾಖಲಾದ ಮತ್ತಷ್ಟು ದೂರುಗಳು
ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ ವಂಚನೆ ಎಸಗಿ ಬಂಧಿತಳಾಗಿರುವ ನಿಶಾ ನರಸಪ್ಪ
Follow us
Prajwal Kumar NY
| Updated By: Rakesh Nayak Manchi

Updated on: Jul 15, 2023 | 10:49 AM

ಬೆಂಗಳೂರು, ಜುಲೈ 15: ಮಾಸ್ಟರ್ ಆನಂದ್ (Master Anand) ಪುತ್ರಿ ವಂಶಿಕಾ ಹೆಸರು ಬಳಸಿ ವಂಚನೆ ಎಸಗಿ ಬಂಧಿತಳಾಗಿರುವ ನಿಶಾ ನರಸಪ್ಪಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈಕೆ ಅರೆಸ್ಟ್ ಆಗುತ್ತಿದ್ದಂತೆ ಹಲವು ಮಂದಿ ಸದಾಶಿವನಗರ ಠಾಣೆಗೆ ಆಗಮಿಸಿ ವಂಚನೆ ದೂರು ನೀಡಲು ಆರಂಭಿಸಿದ್ದಾರೆ.

ಕಳೆದ ತಿಂಗಳು ದಾಖಲಾದ ದೂರಿನ ಬೆನ್ನಲ್ಲೇ ಇದೀಗ ಸಾಕಷ್ಟು ಮಂದಿ ನಿಶಾ ನರಸಪ್ಪಳ ವಿರುದ್ಧ ದೂರು ನೀಡಿದ್ದಾರೆ. ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ತಾರಾ ಎಂಬುವವರಿಗೆ 20 ಲಕ್ಷ ವಂಚನೆ ಎಸಗಿದ ಆರೋಪ ಸಂಬಂಧ ಕಳೆದ ತಿಂಗಳು ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೇ ರೀತಿ ಕೋಣನಕುಂಟೆ ಹಾಗೂ ಜ್ಞಾನಭಾರತಿ ಠಾಣೆಯಲ್ಲಿ ವಂಚನೆ ದೂರುಗಳು ದಾಖಲಾಗಿವೆ.

ಇದನ್ನೂ ಓದಿ: ಮಾಸ್ಟರ್ ಆನಂದ್​ಗೆ ವಂಚನೆ; ನಿವೇಶನ ಪಡೆಯಲು ಹೋಗಿ 18 ಲಕ್ಷ ರೂಪಾಯಿ ಕಳೆದುಕೊಂಡ ನಟ

ಸದಾಶಿವನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಬರೋಬ್ಬರಿ 35 ಲಕ್ಷ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಾಲದ ರೂಪದಲ್ಲಿ ಹಾಗೂ ಇನ್ವೆಸ್ಟ್ ಮಾಡಿದರೆ ಲಾಭಾಂಶ ನೀಡುವುದಾಗಿ ನಂಬಿಸಿ ವಂಚನೆ ಎಸಗುತ್ತಿದ್ದಳು. ಮೊದಲು ಲಾಭಾಂಶದ ಹಣ ಕೊಟ್ಟು ಎರಡರಷ್ಟು ಹಣ ಪಡೆದು ವಂಚನೆ ಮಾಡುತ್ತಿದ್ದಳು.

ಬೆಂಗಳೂರು ದೊಡ್ಡ ಮಾಲ್​ಗಳಲ್ಲಿ ಈವೆಂಟ್ ಮ್ಯಾನೇಜ್ಮೆಂಟ್ ಮಾಡುತ್ತಿದ್ದ ರಾಮನಗರ ಮೂಲದ ನಿಶಾ, ಬೆಂಗಳೂರು ಹೊರಹೊಲಯದಲ್ಲಿನ ರೆಸಾರ್ಟ್​ಗಳಲ್ಲಿ ಶೂಟಿಂಗ್ ಮಾಡುವ ಮೂಲಕ ಪೋಷಕರಿಗೆ ಮಕ್ಮಲ್ ಟೋಪಿ ಹಾಕಿದ್ದಾಳೆ. ಕೇವಲ ಮಕ್ಕಳಷ್ಟೇ ಅಲ್ಲ ಸಾಕಷ್ಟು ಮಂದಿಗೆ ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಲಕ್ಷಾಂತರ ಹಣ ವಂಚನೆ ಎಸಗಿದ್ದು, ಸದ್ಯ ಸದಾಶಿವನಗರ ಠಾಣೆಗೆ ಹಲವಾರು ದೂರುಗಳು ಬರುತ್ತಿವೆ. ಹೀಗಾಗಿ ದೂರುಗಳನ್ನ ತಮ್ಮ ಮನೆ ವ್ಯಾಪ್ತಿಯ ಠಾಣೆಗೆ ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್