ಮಗಳನ್ನೂ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಗು ಹತ್ಯೆಗೈದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಚನ್ನಪಟ್ಟಣ ಲೇಔಟ್‌ನ ಡೇರಿ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ರೂಪ(38), ಬಿಂದು(7) ಮೃತ ದುರ್ದೈವಿಗಳು. ತಾಯಿ ರೂಪಾ 7 ವರ್ಷದ ಮಗಳಾದ ಬಿಂದುನ ಉಸಿರುಗಟ್ಟಿಸಿ ಹತ್ಯೆಗೈದಿದ್ದಾಳೆ. ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತನ್ನ ಸಾವಿಗೆ ಪತಿಯೇ ಕಾರಣ ಎಂದು ಗೋಡೆ ಮೇಲೆ ಡೆತ್ ನೋಟ್ ಬರೆದಿದ್ದಾಳೆ. ಪಾಪಿ ತಾಯಿಯ ಕ್ಷಮಿಸಪ್ಪ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಾಸನ ನಗರ ಪೊಲೀಸ್ ಠಾಣಾ […]

ಮಗಳನ್ನೂ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ
ಸಾಧು ಶ್ರೀನಾಥ್​

Updated on: May 03, 2020 | 10:48 AM

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಗು ಹತ್ಯೆಗೈದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಚನ್ನಪಟ್ಟಣ ಲೇಔಟ್‌ನ ಡೇರಿ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ರೂಪ(38), ಬಿಂದು(7) ಮೃತ ದುರ್ದೈವಿಗಳು. ತಾಯಿ ರೂಪಾ 7 ವರ್ಷದ ಮಗಳಾದ ಬಿಂದುನ ಉಸಿರುಗಟ್ಟಿಸಿ ಹತ್ಯೆಗೈದಿದ್ದಾಳೆ.

ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತನ್ನ ಸಾವಿಗೆ ಪತಿಯೇ ಕಾರಣ ಎಂದು ಗೋಡೆ ಮೇಲೆ ಡೆತ್ ನೋಟ್ ಬರೆದಿದ್ದಾಳೆ. ಪಾಪಿ ತಾಯಿಯ ಕ್ಷಮಿಸಪ್ಪ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:33 am, Sun, 3 May 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us