ಮುಂಬೈ: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸುಮಾರು ಆರು ಶಸ್ತ್ರಸಜ್ಜಿತ ಡಕಾಯಿತರು 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಸಾಗಿಸುತ್ತಿದ್ದ ಟ್ರಕ್ ಅನ್ನು ಲೂಟಿ ಮಾಡಿದ್ದಾರೆ. ದುಷ್ಕರ್ಮಿಗಳು ಟ್ರಕ್ ಚಾಲಕನಿಗೂ ಥಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನು ಓದಿ: ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದ ಪತಿ
ನವಿ ಮುಂಬೈನ ರಬಲೆಯಿಂದ ಜೈಪುರ ಕಡೆಗೆ ಹೋಗುತ್ತಿದ್ದ ಟ್ರಕ್ ಅನ್ನು ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ತಡೆದು ನಿಲ್ಲಿಸಿ ಲೂಟಿ ಮಾಡಲಾಗಿದೆ.
ವರದಿಗಳ ಪ್ರಕಾರ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಕಾಯಿತರು ಸಕ್ವಾರ್ ಗ್ರಾಮದ ಬಳಿ ಟ್ರಕ್ ಅನ್ನು ಅಡ್ಡಗಟ್ಟಿ, ಚಾಲಕನಿಗೆ ಥಳಿಸಿದರು ಮತ್ತು ಅವರು ಕಣ್ಣಿಗೆ ಬಟ್ಟೆ ಕಟ್ಟಿದ್ದರು, ಚಾಲಕನನ್ನು ಅಲ್ಲಿಂದ ಕಿಡ್ನಾಪ್ ಮಢಿದ್ದಾರೆ. ದುಷ್ಕರ್ಮಿಗಳು ಸರಕುಗಳನ್ನು ಖಾಲಿ ಮಾಡಿ ಟ್ರಕ್ನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ. ಅವರು ಚರೋಟಿ ಟೋಲ್ ಬೂತ್ ಬಳಿ ಚಾಲಕನನ್ನು ಬಿಡುಗಡೆ ಮಾಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.