AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ನಟಿ ಮತ್ತು ಮಾಡೆಲ್​​ಗನ್ನೊಳಗೊಂಡ ಸೆಕ್ಸ್ ರ‍್ಯಾಕೆಟ್ ನಡೆಸುತ್ತಿದ್ದ ಅರೋಪದಲ್ಲಿ ಪೊಲೀಸರ ಬಲೆಗೆ ಬಿದ್ದ ರೂಪದರ್ಶಿ!

ನಟಿ ಮತ್ತು ಮಾಡೆಲ್ ಒಂದಿಗೆ ರೂ 4 ಲಕ್ಷಗಳಿಗೆ ಡೀಲ್ ಕುದುರಿಸಿದ್ದ ಆರೋಪಿತೆ ಒಂದು ನಿರ್ದಿಷ್ಟ ಸುಳಿವಿನ ನಂತರ ಬಂಧಿಸಲಾಯಿತು. ಪೊಲೀಸರು ಮಾರು ವೇಷದಲ್ಲಿ ಹೋಟೆಲ್ ಗೆ ಹೋಗಿ ಆಕೆಯನ್ನು ಬಂಧಿಸಿದರೆಂದು ತಿಳಿದು ಬಂದಿದೆ.

ಟಿವಿ ನಟಿ ಮತ್ತು ಮಾಡೆಲ್​​ಗನ್ನೊಳಗೊಂಡ ಸೆಕ್ಸ್ ರ‍್ಯಾಕೆಟ್ ನಡೆಸುತ್ತಿದ್ದ ಅರೋಪದಲ್ಲಿ ಪೊಲೀಸರ ಬಲೆಗೆ ಬಿದ್ದ ರೂಪದರ್ಶಿ!
ಸಾಂದರ್ಭಿಕ ಚಿತ್ರ
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Aug 21, 2021 | 12:18 AM

Share

ಮುಂಬೈ: ಹಿಂದಿ ಟಿವಿ ಧಾರಾವಾಹಿಗಳಲ್ಲಿ ನಟಿಸುವ ಕಲಾವಿದೆಯರು ಮತ್ತು ಮಾಡೆಲ್ಗಳನ್ನೊಳಗೊಂಡ ಸೆಕ್ಸ್ ರ‍್ಯಾಕೆಟ್ ನಡೆಸುತ್ತಿದ್ದ ಅರೋಪದಲ್ಲಿ 32-ವರ್ಷ ವಯಸ್ಸಿನ ಮಾಡೆಲ್ ಒಬ್ಬಳನ್ನು ಮುಂಬೈ ಕ್ರೈಮ್ ಬ್ರ್ಯಾಂಚ್ ಅಧಿಕಾರಿಗಳು ಬುಧವಾರ ಸಾಯಂಕಾಲ ಬಂಧಿಸಿರುವುದು ತಡವಾಗಿ ವರದಿಯಾಗಿದೆ. ಈಕೆಯನ್ನು ಮುಂಬೈ ಮಹಾನಗರದ ಉಪನಗರ ಜುಹುನಲ್ಲಿರುವ ಒಂದು ಐಷಾರಾಮಿ ಹೋಟೆಲ್ನಲ್ಲಿ ಬಂಧಿಸಲಾಗಿದೆ ಎಂದು ಕ್ರೈಮ್ ಬ್ರ್ಯಾಂಚ್ ಪೊಲೀಸ್ ಮೂಲಗಳು ತಿಳಿಸಿವೆ.

ಬುಧವಾರದಂದು ನಡೆದ ದಾಳಿಯಲ್ಲಿ ಟಿವಿ ಧಾರಾವಾಹಿಗಳಲ್ಲಿ ನಟಿಸುವ ಒಬ್ಬ ನಟಿ ಮತ್ತು ಒಂದು ಪ್ರಮುಖ ಎಂಟರ್ಟೇನ್ಮೆಂಟ್ ಚ್ಯಾನೆಲ್ ನಲ್ಲಿ ಕೆಲಸ ಮಾಡಿರುವ ಮತ್ತು ಒಂದು ಜನಪ್ರಿಯ ಬ್ರ್ಯಾಂಡ್ ಸಾಬೂನಿನ ಜಾಹೀರಾತಿನಲ್ಲಿ ಭಾಗಿಯಾಗಿರುವ ಒಬ್ಬ ರೂಪದರ್ಶಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ನಟಿ ಮತ್ತು ಮಾಡೆಲ್ ಒಂದಿಗೆ ರೂ 4 ಲಕ್ಷಗಳಿಗೆ ಡೀಲ್ ಕುದುರಿಸಿದ್ದ ಆರೋಪಿತೆ ಒಂದು ನಿರ್ದಿಷ್ಟ ಸುಳಿವಿನ ನಂತರ ಬಂಧಿಸಲಾಯಿತು. ಪೊಲೀಸರು ಮಾರು ವೇಷದಲ್ಲಿ ಹೋಟೆಲ್ ಗೆ ಹೋಗಿ ಆಕೆಯನ್ನು ಬಂಧಿಸಿದರೆಂದು ತಿಳಿದು ಬಂದಿದೆ.

ಆರೋಪಿತಳನ್ನು ಅನೈತಿಕ ಚಟುವಟಿಕೆಗಳು (ತಡೆ) ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ. ತನಿಖೆ ಜಾರಿಯಲ್ಲಿದೆ ಎಂದು ಮುಂಬೈ ಕ್ರೈಮ್ ಬ್ರ್ಯಾಂಚ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಪರಾಧ ಸುದ್ದಿಗಳು: ಚಿತ್ರದುರ್ಗದಲ್ಲಿ ಗುಂಡು ಹಾರಿಸಿ ಬಟ್ಟೆ ವ್ಯಾಪಾರಿಯ ಹತ್ಯೆ; ದರೋಡೆಗೆ ಹೊಂಚುಹಾಕಿ ಕುಳಿತಿದ್ದ ಆರೋಪದಡಿ ಕೋಲಾರದಲ್ಲಿ ಇಬ್ಬರ ಬಂಧನ

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?