Mumbai Crime: ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್​ನ ಕೊಠಡಿಯಲ್ಲಿ ಶವವಾಗಿ ಪತ್ತೆ, ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ

ಮುಂಬೈ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್​ನ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Mumbai Crime: ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್​ನ ಕೊಠಡಿಯಲ್ಲಿ ಶವವಾಗಿ ಪತ್ತೆ, ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ
ಪೊಲೀಸ್
Image Credit source: India Today

Updated on: Jun 07, 2023 | 9:26 AM

ಮುಂಬೈ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್​ನ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. 30 ವರ್ಷದ ಶಂಕಿತ ಆರೋಪಿಯನ್ನು ಓಂ ಪ್ರಕಾಶ್ ಕನೌಜಿಯಾ ಎಂದು ಗುರುತಿಸಲಾಗಿದ್ದು, ಹಾಸ್ಟೆಲ್ ಆವರಣದಿಂದ ತಲೆಮರೆಸಿಕೊಂಡಿದ್ದಾನೆ. ಶಂಕಿತ ಆರೋಪಿ ದಕ್ಷಿಣ ಮುಂಬೈನ ಪೊಲೀಸ್ ಜಿಮ್ಖಾನಾ ಬಳಿ ಇರುವ ಸಾವಿತ್ರಿ ಫುಲೆ ಮಹಿಳಾ ಹಾಸ್ಟೆಲ್‌ನಲ್ಲಿ 15 ವರ್ಷಗಳಿಂದ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಮೆರೈನ್ ಡ್ರೈವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದೆ.

ಮೃತ ಕಾಲೇಜು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಶವಪರೀಕ್ಷೆ ವರದಿ ಬಂದ ಬಳಿಕವಷ್ಟೇ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂತ್ರಸ್ತೆ ಬಾಂದ್ರಾ ಉಪನಗರದ ಸರ್ಕಾರಿ ಪಾಲಿಟೆಕ್ನಿಕ್‌ನ ವಿದ್ಯಾರ್ಥಿನಿ. ಕೋಣೆಗೆ ಪ್ರವೇಶಿಸಿದ ಪೊಲೀಸ್ ತಂಡವು ಸಂತ್ರಸ್ತೆ ಕುತ್ತಿಗೆಗೆ ದುಪ್ಪಟ್ಟಾ ಸುತ್ತಿಕೊಂಡು ಸತ್ತ ಸ್ಥಿತಿಯಲ್ಲಿರುವುದು ಕಂಡುಬಂದಿದೆ.

ಹಾಸ್ಟೆಲ್​ ಹೊರಗಡೆಯಿಂದ ಕೊಠಡಿಗೆ ಬೀಗ ಹಾಕಲಾಗಿತ್ತು, ಹೀಗಾಗಿ ಆಕೆಯ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೆಚ್ಚುವರಿ ಆಯುಕ್ತ ಅಭಿನವ್ ದೇಶಮುಖ್ ಹೇಳಿದ್ದಾರೆ.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ಆರೋಪಿಗಳನ್ನು ಬಂಧಿಸಲು ಹೆಚ್ಚುವರಿ ಕಮಿಷನರ್ ದೇಶಮುಖ್ ಮತ್ತು ಮೆರೈನ್ ಡ್ರೈವ್ ಸೀನಿಯರ್ ಇನ್ಸ್‌ಪೆಕ್ಟರ್ ನೀಲೇಶ್ ಬಾಗುಲ್ ನೇತೃತ್ವದಲ್ಲಿ ಇತರ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. ಆದರೆ, ಮಂಗಳವಾರ ಸಂಜೆ 5:30ರ ಸುಮಾರಿಗೆ ಸಮೀಪದ ರೈಲ್ವೆ ನಿಲ್ದಾಣದಲ್ಲಿ ಶಂಕಿತ ವ್ಯಕ್ತಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ನಂತರ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಟಿ ಆಸ್ಪತ್ರೆಗೆ ಕಳುಹಿಸಲಾಗಿದೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ