Mumbai Crime: ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದಿದ್ದ ಸೆಕ್ಯುರಿಟಿ ಗಾರ್ಡ್​ನ ಬಂಧನ

|

Updated on: Feb 16, 2023 | 1:07 PM

ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದಿದ್ದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಘಟನೆ ನವಿ ಮುಂಬೈನಲ್ಲಿ ನಡೆದಿದೆ.

Mumbai Crime: ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದಿದ್ದ ಸೆಕ್ಯುರಿಟಿ ಗಾರ್ಡ್​ನ ಬಂಧನ
ಮುಂಬೈ ಪೊಲೀಸ್
Image Credit source: NDTV
Follow us on

ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದಿದ್ದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ಘಟನೆ ನವಿ ಮುಂಬೈನಲ್ಲಿ ನಡೆದಿದೆ. ಆರೋಪಿ ರಾಜ್‌ಕುಮಾರ್ ಬಾಬುರಾಮ್ ಪಾಲ್ ಅವರನ್ನು ಬಂಧಿಸಲಾಗಿದೆ, ಸೆಕ್ಯುರಿಟಿ ಗಾರ್ಡ್​ ವಿವಾಹೇತರ ಸಂಬಂಧ ಹೊಂದಿದ್ದ, ಆಕೆ ಮದುವೆಯಾಗುವಂತೆ ಪದೇ ಪದೇ ಒತ್ತಡ ಹೇರುತ್ತಿದ್ದಳು, ಹಾಗಾಗಿ ಹತ್ಯೆ ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ.

ಫೆಬ್ರವರಿ 12 ರಂದು, ಥಾಣೆ ಜಿಲ್ಲೆಯ ನವಿ ಮುಂಬೈ ಪಟ್ಟಣದ ಕೋಪರ್ಖೈರ್ನೆ ಪ್ರದೇಶದ ಹೌಸಿಂಗ್ ಸೊಸೈಟಿ ಬಳಿಯ ಪೊದೆಯಲ್ಲಿ 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ ಎಂದು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ವಿಶ್ವನಾಥ್ ಕೋಲೇಕರ್ ತಿಳಿಸಿದ್ದಾರೆ.
ಮಹಿಳೆಯನ್ನು ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ, ಸಾಕ್ಷ್ಯವನ್ನು ನಾಶಮಾಡಲು ದೇಹವನ್ನು ಪೊದೆಯ ಬಳಿ ಎಸೆಯಲಾಗಿತ್ತು ಎಂದು ಹೇಳಿದ್ದಾರೆ.

ಕೋಪರ್ಖೈರ್ನೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 201 (ಅಪರಾಧದ ಸಾಕ್ಷ್ಯಾಧಾರಗಳು ಕಣ್ಮರೆಯಾಗಲು ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ಓದಿ: ಮನೆ-ಮಾನಕ್ಕೆ ಕಟ್ಟುಬಿದ್ದ ಗಂಡ, ಅವಳೋ ತನ್ನ ಶೋಕಿ ಜೀವನಕ್ಕೆ ಅಡ್ಡಬಂದ ಆ ಗಂಡನನ್ನೇ ಪರಲೋಕಕ್ಕೆ ಕಳಿಸಿಬಿಟ್ಟಳು

ನವಿ ಮುಂಬೈ ಪೊಲೀಸರು ಮಹಾರಾಷ್ಟ್ರದ ಎಲ್ಲಾ ಪೊಲೀಸ್ ಠಾಣೆಗಳಿಗೆ ಶವವನ್ನು ಹುಡುಕುವ ಬಗ್ಗೆ ಸಂದೇಶವನ್ನು ಕಳುಹಿಸಿದ್ದಾರೆ ಮತ್ತು ನೆರೆಯ ಮುಂಬೈನ ಟ್ರಾಂಬೆ ಪೊಲೀಸ್ ಠಾಣೆಯಲ್ಲಿ ಮಹಿಳೆ ಕಾಣೆಯಾದ ಪ್ರಕರಣವನ್ನು ದಾಖಲಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ನವಿ ಮುಂಬೈನಲ್ಲಿ ಪತ್ತೆಯಾದ ಮೃತದೇಹದ ವಿವರಣೆ ಮತ್ತು ಕಾಣೆಯಾದ ಮಹಿಳೆಯ ವಿವರಣೆಯು ಹೊಂದಿಕೆಯಾದ ನಂತರ ಪೊಲೀಸರು ತಮ್ಮ ತನಿಖೆಯನ್ನು ಹೆಚ್ಚಿಸಿದ್ದಾರೆ ಎಂದು ಅವರು ಹೇಳಿದರು.

ನಾಪತ್ತೆಯಾದ ಮಹಿಳೆಯ ಕುಟುಂಬದ ಸದಸ್ಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆಕೆ ಮುಂಬೈನ ಮನ್ಖುರ್ದ್ ಪ್ರದೇಶದಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದಳು ಮತ್ತು ನಾಪತ್ತೆಯಾಗಿದ್ದಳು ಎಂದು ಆಕೆಯ ಪತಿ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಂತರ ಪೊಲೀಸರು ಸಂತ್ರಸ್ತೆಯ ಮೊಬೈಲ್ ಫೋನ್ ಅನ್ನು ಪತ್ತೆ ಮಾಡಿದರು ಮತ್ತು ಸೆಕ್ಯುರಿಟಿ ಗಾರ್ಡ್ ಪಾಲ್ ಅವರನ್ನು ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.

ಪಾಲ್​ನನ್ನು ಬಂಧಿಸಿದ ಬಳಿಕ,  ಮಹಿಳೆ ತನ್ನನ್ನು ಮದುವೆಯಾಗುವಂತೆ ಪದೇ ಪದೇ ಕೇಳುತ್ತಿದ್ದಳು ಎಂದು ವಿಚಾರಣೆಯ ಸಮಯದಲ್ಲಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಿರಂತರ ಬೇಡಿಕೆಯಿಂದ ಬೇಸತ್ತ ಭದ್ರತಾ ಸಿಬ್ಬಂದಿ ಆಕೆಯನ್ನು ಹತ್ಯೆ ಮಾಡಲು ನಿರ್ಧರಿಸಿದ್ದಾರೆ. ತಾನು ಕೆಲಸ ಮಾಡುತ್ತಿದ್ದ ವಸತಿ ಸಮುಚ್ಚಯದ ಸಮೀಪವಿರುವ ಸ್ಥಳಕ್ಕೆ ಆಕೆಯನ್ನು ಕರೆಸಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಆರೋಪಿಗಳು ಶವವನ್ನು ಹೌಸಿಂಗ್ ಸೊಸೈಟಿಯ ಬಳಿಯ ಪೊದೆಯಲ್ಲಿ ಎಸೆದಿದ್ದಾನೆ, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ