Mumbai Crime: ಮನೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಕೊಳೆತ ಸ್ಥಿತಿಯಲ್ಲಿತ್ತು ಮಹಿಳೆಯ ಶವ, ಪುತ್ರಿಯ ವಿಚಾರಣೆ
ಮುಂಬೈನ ಮನೆಯೊಂದರಲ್ಲಿ ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ, ದೇಹವು ಸಂಪೂರ್ಣ ಕೊಳೆಯಲು ಆರಂಭಿಸಿತ್ತು. ಮಂಗಳವಾರ ಮಧ್ಯರಾತ್ರಿ ಮಹಿಳೆಯ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಇದಾದ ಬಳಿಕ ಮಹಿಳೆಯ ಮಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕವಷ್ಟೇ ಮಹಿಳೆಯ ಸಾವಿಗೆ ನಿಜವಾದ ಕಾರಣ ಏನೆಂಬುದು ತಿಳಿದುಬರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈನ ಲಾಲ್ಬಾಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ರಾತ್ರಿ 9.30ರ ಸುಮಾರಿಗೆ 53 ವರ್ಷದ ಮಹಿಳೆ ಬೀನಾ ಜೈನ್ ಕಾಣೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಬೀನಾ ಇಬ್ರಾಹಿಂ ಕಸಮ್ ಕಟ್ಟಡದಲ್ಲಿ ವಾಸಿಸುತ್ತಿದ್ದು, ಹಲವು ದಿನಗಳಿಂದ ನಾಪತ್ತೆಯಾಗಿದ್ದಳು ಎಂದು ಆಕೆಯ ಸಹೋದರ ಹಾಗೂ ಸೋದರಳಿಯ ಪೊಲೀಸರಿಗೆ ತಿಳಿಸಿದ್ದಾರೆ.
ಮತ್ತಷ್ಟು ಓದಿ: ಕಲಬುರಗಿ: ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ, ಕೊನೆಗೂ ತನ್ನ ಪತ್ನಿಯನ್ನೇ ಪರಲೋಕಕ್ಕೆ ಕಳುಹಿಸಿದ
ಮಾಹಿತಿ ಪಡೆದ ಪೊಲೀಸರು ತನಿಖೆ ಆರಂಭಿಸಿದ್ದರು, ಕಟ್ಟಡದ ಮೊದಲ ಮಹಡಿಯಲ್ಲಿರುವ ಫ್ಲಾಟ್ಗೆ ತೆರಳಿ ತಪಾಸಣೆ ನಡೆಸಿದಾಗ ದೊಡ್ಡ ಪ್ಲಾಸ್ಟಿಕ್ ಚೀಲ ಪತ್ತೆಯಾಗಿತ್ತು, ಅದರಲ್ಲಿ ಬೀನಾಳ ಶವ ಕೊಳೆತ ಸ್ಥಿತಿಯಲ್ಲಿತ್ತು. ಇದೀಗ ಆಕೆಯ ಮಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ