AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಪ್ರೇಮಿಯಿಂದಲೇ ಆಕೆಯ 2 ವರ್ಷದ ಮಗು ಮೇಲೆ ಅತ್ಯಾಚಾರ, ಕೊಲೆ

ಮುಂಬೈನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಆಕೆ ದೈಹಿಕ ಸಂಬಂಧ ಇಟ್ಟುಕೊಂಡಿದ್ದ ಯುವಕನಿಂದಲೇ ಆಕೆಯ ಎರಡು ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿದೆ. ಬಳಿಕ ಆತ ಆ ಮಗುವನ್ನು ಕೊಲೆ ಮಾಡಿದ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಆ ತಾಯಿಯ ಕಣ್ಣೆದುರೇ ಆಕೆಯ ಪ್ರಿಯಕರ ಆಕೆಯ ಮಗು ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದೀಗ ಅವರಿಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯ ಪ್ರೇಮಿಯಿಂದಲೇ ಆಕೆಯ 2 ವರ್ಷದ ಮಗು ಮೇಲೆ ಅತ್ಯಾಚಾರ, ಕೊಲೆ
Sexual Abuse
ಸುಷ್ಮಾ ಚಕ್ರೆ
|

Updated on: May 19, 2025 | 10:07 PM

Share

ಮುಂಬೈ, ಮೇ 19: ಮಹಾರಾಷ್ಟ್ರದ ಮುಂಬೈನ ಮಲಾಡ್‌ನ ಮಾಲ್ವಾನಿ ಪ್ರದೇಶದಲ್ಲಿ ಶಾಕಿಂಗ್ ಘಟನೆ (Shocking News) ಬೆಳಕಿಗೆ ಬಂದಿದೆ. ಗಂಡನಿಂದ ದೂರವಾಗಿದ್ದ ಮಹಿಳೆಯ ಎರಡು ವರ್ಷದ ಮಗಳ ಮೇಲೆ ಆಕೆಯ ಜೊತೆ ಅಕ್ರಮ ಸಂಬಂಧ (Extra Marital Affair) ಹೊಂದಿದ್ದ ಯುವಕನೇ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ. ಈ ಆರೋಪದ ಮೇಲೆ ಪೊಲೀಸರು ಮಹಿಳೆ ಮತ್ತು ಆಕೆಯ 19 ವರ್ಷದ ಪ್ರಿಯಕರನನ್ನು ಬಂಧಿಸಿದ್ದಾರೆ. ತಾಯಿಯ ಮುಂದೆ ಆಕೆಯ ಎರಡು ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ 19 ವರ್ಷದ ಪ್ರಿಯಕರನನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆಕೆಯ ಪ್ರಿಯಕರನು ಮಗುವಿನ ಮೇಲೆ ಅತ್ಯಾಚಾರ ಮಾಡಿದ ನಂತರ ಕೊಂದಿದ್ದಾನೆ. ಈ ಘಟನೆ ಮುಂಬೈನ ಮಾಲ್ವಾನಿ ಪ್ರದೇಶದಲ್ಲಿ ನಡೆದಿದೆ.

ಎರಡು ವರ್ಷದ ಮಗುವಿನ ಸಾವಿನ ಬಗ್ಗೆ ಆಸ್ಪತ್ರೆಯಿಂದ ಮಾಹಿತಿ ಪಡೆದ ಪೊಲೀಸರು ತಕ್ಷಣ ಆಸ್ಪತ್ರೆಗೆ ತೆರಳಿ ತನಿಖೆ ನಡೆಸಿದರು. 2 ವರ್ಷದ ಬಾಲಕಿ ಆಘಾತದಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾಳೆ ಎಂದು ವೈದ್ಯರು ವರದಿ ನೀಡಿದ್ದಾರೆ. ಸಂಪೂರ್ಣ ತನಿಖೆಯ ನಂತರ, ಪೊಲೀಸರು ಮಗುವಿನ ತಾಯಿ ಮತ್ತು ಆಕೆಯ ಪ್ರಿಯಕರನನ್ನು ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಹಲವು ವಿಭಾಗಗಳ ಅಡಿಯಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: ಅನಾಥವಾಗಿ ಬಿದ್ದಿದ್ದ ಮಗುವನ್ನು ಸಾಕಿದ ಮಹಿಳೆ ಆ ಮಗಳಿಂದಲೇ ಕೊಲೆಯಾದ ಕತೆಯಿದು!

ಇದನ್ನೂ ಓದಿ
Image
ಪಂಜಾಬ್​ನಲ್ಲಿ ಇಬ್ಬರು ಪಾಕಿಸ್ತಾನಿ ಗೂಢಚಾರಿಗಳ ಬಂಧನ
Image
ಜಗತ್ತಿನ ಮುಂದೆ ಪಾಕ್ ಮುಖವಾಡ ಕಳಚಲು ನಮ್ಮ ಸಂಸದರನ್ನು ಕಳಿಸೋದಿಲ್ಲ
Image
ಆಪರೇಷನ್​ ಸಿಂಧೂರ್​ನ ಮತ್ತೊಂದು ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ
Image
ಯೂಟ್ಯೂಬರ್ ಜ್ಯೋತಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

ಇದೇ ರೀತಿಯ ಮತ್ತೊಂದು ಘಟನೆಯಲ್ಲಿ, ನವಿ ಮುಂಬೈನಲ್ಲಿ ಸ್ಟಾಕ್‌ಯಾರ್ಡ್‌ಗೆ ಅತಿಕ್ರಮಣ ಮಾಡಿ ಸೌಲಭ್ಯದ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮೂವರು ಪುರುಷರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ