AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಪೆರೋಲ್​ ಮೇಲೆ ಬಿಡುಗಡೆಗೊಂಡಿದ್ದ ಕೊಲೆ ಆರೋಪಿಯಿಂದ ಬಾಲಕಿ ಮೇಲೆ ಅತ್ಯಾಚಾರ

ಪೆರೋಲ್​ ಮೇಲೆ ಬಿಡುಗಡೆಗೊಂಡಿದ್ದ ಕೊಲೆ ಆರೋಪಿಯೊಬ್ಬ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. ಆರೋಪಿ ಸಂಜಯ್ ಪ್ರಕಾಶ ಮಾನೆಯನ್ನು ಬಂಧಿಸಲಾಗಿದೆ, ಮಾನೆ 2011ರಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಎರಡು ತಿಂಗಳ ಹಿಂದಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ.

ಮಹಾರಾಷ್ಟ್ರ: ಪೆರೋಲ್​ ಮೇಲೆ ಬಿಡುಗಡೆಗೊಂಡಿದ್ದ ಕೊಲೆ ಆರೋಪಿಯಿಂದ ಬಾಲಕಿ ಮೇಲೆ ಅತ್ಯಾಚಾರ
ಅಪರಾಧ
ನಯನಾ ರಾಜೀವ್
|

Updated on: Aug 25, 2024 | 3:00 PM

Share

ಪೆರೋಲ್​ ಮೇಲೆ ಬಿಡುಗಡೆಗೊಂಡಿದ್ದ ಕೊಲೆ ಆರೋಪಿಯೊಬ್ಬ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. ಆರೋಪಿ ಸಂಜಯ್ ಪ್ರಕಾಶ ಮಾನೆಯನ್ನು ಬಂಧಿಸಲಾಗಿದೆ, ಮಾನೆ 2011ರಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಎರಡು ತಿಂಗಳ ಹಿಂದಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ.

ರಾತ್ರಿ 9.30ರ ಸುಮಾರಿಗೆ ಅಂಗಡಿಗೆಂದು ಹೊರಟಿದ್ದ ಬಾಲಕಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಬಲವಂತವಾಗಿ ಮನೆಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾನೆ. ಈ ಘಟನೆಯನ್ನು ಬಾಲಕಿ ತನ್ನ ತಾಯಿಗೆ ತಿಳಿಸಿದ್ದು, ದೂರು ದಾಖಲಾಗಿದೆ. ಎರಡು ಗಂಟೆಯೊಳಗೆ ಆತನನ್ನು ಸೆರೆ ಹಿಡಿಯಲಾಗಿದೆ.

ಕಳೆದ ತಿಂಗಳು ಮಾನೆ ಬಾಲಕಿಗೆ ಕಿರುಕುಳ ನೀಡಿದ್ದ, ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್​ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಓದಿ: Crime News: ಪಿಯುಸಿ ವಿದ್ಯಾರ್ಥಿನಿ ಮೇಲೆ ಶಾಲಾ ಬಸ್ ಚಾಲಕನಿಂದ ನಿರಂತರ ಅತ್ಯಾಚಾರ

ಮತ್ತೊಂದು ಘಟನೆ ಪಾಲ್ಗಢದ ಖಾಸಗಿ ಶಾಲೆಯೊಂದರ ಕ್ಯಾಂಟೀನ್​ನಲ್ಲಿ ಏಳು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಉತ್ತರ ಪ್ರದೇಶದ 16 ವರ್ಷದ ಬಾಲಕ ಎಂದು ಹೇಳಲಾಗಿದೆ. ಆತನನ್ನು ಬಂಧಿಸಿ ರಿಮಾಂಡ್​ ಹೋಮ್​ಗೆ ಕಳುಹಿಸಲಾಗಿದೆ.

ಎರಡನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಗುರುವಾರ ಶಾಲೆಯ ಕ್ಯಾಂಟೀನ್​ಗೆ ಹೋಗಲು ನಿರಾಕರಿಸಿದಾಗ ಮತ್ತು ಅಲ್ಲಿ ಕೆಲಸ ಮಾಡುವ ವ್ಯಕ್ತಿ ಕಿರುಕುಳ ನೀಡುತ್ತಿದ್ದಾರೆ ಎಂದು ತರಗತಿ ಶಿಕ್ಷಕರಿಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿ 15 ದಿನಗಳಲ್ಲಿ ಮೂನಾಲ್ಕು ಬಾರಿ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್