ಮಹಾರಾಷ್ಟ್ರ: ಪೆರೋಲ್​ ಮೇಲೆ ಬಿಡುಗಡೆಗೊಂಡಿದ್ದ ಕೊಲೆ ಆರೋಪಿಯಿಂದ ಬಾಲಕಿ ಮೇಲೆ ಅತ್ಯಾಚಾರ

|

Updated on: Aug 25, 2024 | 3:00 PM

ಪೆರೋಲ್​ ಮೇಲೆ ಬಿಡುಗಡೆಗೊಂಡಿದ್ದ ಕೊಲೆ ಆರೋಪಿಯೊಬ್ಬ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. ಆರೋಪಿ ಸಂಜಯ್ ಪ್ರಕಾಶ ಮಾನೆಯನ್ನು ಬಂಧಿಸಲಾಗಿದೆ, ಮಾನೆ 2011ರಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಎರಡು ತಿಂಗಳ ಹಿಂದಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ.

ಮಹಾರಾಷ್ಟ್ರ: ಪೆರೋಲ್​ ಮೇಲೆ ಬಿಡುಗಡೆಗೊಂಡಿದ್ದ ಕೊಲೆ ಆರೋಪಿಯಿಂದ ಬಾಲಕಿ ಮೇಲೆ ಅತ್ಯಾಚಾರ
ಅಪರಾಧ
Follow us on

ಪೆರೋಲ್​ ಮೇಲೆ ಬಿಡುಗಡೆಗೊಂಡಿದ್ದ ಕೊಲೆ ಆರೋಪಿಯೊಬ್ಬ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. ಆರೋಪಿ ಸಂಜಯ್ ಪ್ರಕಾಶ ಮಾನೆಯನ್ನು ಬಂಧಿಸಲಾಗಿದೆ, ಮಾನೆ 2011ರಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಎರಡು ತಿಂಗಳ ಹಿಂದಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ.

ರಾತ್ರಿ 9.30ರ ಸುಮಾರಿಗೆ ಅಂಗಡಿಗೆಂದು ಹೊರಟಿದ್ದ ಬಾಲಕಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಬಲವಂತವಾಗಿ ಮನೆಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾನೆ. ಈ ಘಟನೆಯನ್ನು ಬಾಲಕಿ ತನ್ನ ತಾಯಿಗೆ ತಿಳಿಸಿದ್ದು, ದೂರು ದಾಖಲಾಗಿದೆ. ಎರಡು ಗಂಟೆಯೊಳಗೆ ಆತನನ್ನು ಸೆರೆ ಹಿಡಿಯಲಾಗಿದೆ.

ಕಳೆದ ತಿಂಗಳು ಮಾನೆ ಬಾಲಕಿಗೆ ಕಿರುಕುಳ ನೀಡಿದ್ದ, ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್​ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಓದಿ: Crime News: ಪಿಯುಸಿ ವಿದ್ಯಾರ್ಥಿನಿ ಮೇಲೆ ಶಾಲಾ ಬಸ್ ಚಾಲಕನಿಂದ ನಿರಂತರ ಅತ್ಯಾಚಾರ

ಮತ್ತೊಂದು ಘಟನೆ
ಪಾಲ್ಗಢದ ಖಾಸಗಿ ಶಾಲೆಯೊಂದರ ಕ್ಯಾಂಟೀನ್​ನಲ್ಲಿ ಏಳು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಉತ್ತರ ಪ್ರದೇಶದ 16 ವರ್ಷದ ಬಾಲಕ ಎಂದು ಹೇಳಲಾಗಿದೆ. ಆತನನ್ನು ಬಂಧಿಸಿ ರಿಮಾಂಡ್​ ಹೋಮ್​ಗೆ ಕಳುಹಿಸಲಾಗಿದೆ.

ಎರಡನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಗುರುವಾರ ಶಾಲೆಯ ಕ್ಯಾಂಟೀನ್​ಗೆ ಹೋಗಲು ನಿರಾಕರಿಸಿದಾಗ ಮತ್ತು ಅಲ್ಲಿ ಕೆಲಸ ಮಾಡುವ ವ್ಯಕ್ತಿ ಕಿರುಕುಳ ನೀಡುತ್ತಿದ್ದಾರೆ ಎಂದು ತರಗತಿ ಶಿಕ್ಷಕರಿಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿ 15 ದಿನಗಳಲ್ಲಿ ಮೂನಾಲ್ಕು ಬಾರಿ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ