AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gang Rape: ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ; 14 ವರ್ಷದ ಬಾಲಕಿಯ ಶವ ಗೋಣಿಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮೃತ ಬಾಲಕಿಯ ತಾಯಿ ಫೆ.15ರಂದು ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದರು. ಪೊಲೀಸರು ಎಲ್ಲೆಡೆ ಹುಡುಕಾಡಿದರೂ ಆ ಹುಡುಗಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಅಂಗಡಿಯೊಂದರಲ್ಲಿ ಗೋಣಿ ಚೀಲದಲ್ಲಿ ಸುತ್ತಿದ್ದ ಬಾಲಕಿಯ ಕೊಳೆತ ಶವ ಪತ್ತೆಯಾಗಿದೆ.

Gang Rape: ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ; 14 ವರ್ಷದ ಬಾಲಕಿಯ ಶವ ಗೋಣಿಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 21, 2022 | 9:01 PM

Share

ನವದೆಹಲಿ: ಕಳೆದ 1 ವಾರಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿಯ ಮೃತದೇಹ ಗೋಣಿ ಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿ ದೆಹಲಿಯ ಹೊರವಲಯದ ನರೇಲಾ ಪ್ರದೇಶದಲ್ಲಿ ಪತ್ತೆಯಾಗಿದೆ. ಫೆಬ್ರವರಿ 12ರಂದು ಅತ್ಯಾಚಾರವೆಸಗಿ, ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ವ್ಯಕ್ತಿಗಳು ಮೃತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆಸಿ, ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ನರೇಲಾದ ಸನ್ನೋತ್ ಗ್ರಾಮದಿಂದ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೃತ ಬಾಲಕಿಯ ತಾಯಿ ಫೆಬ್ರವರಿ 15ರಂದು ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದರು. ಪೊಲೀಸರು ಎಲ್ಲೆಡೆ ಹುಡುಕಾಡಿದರೂ ಆ ಹುಡುಗಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಆದರೆ, ಶನಿವಾರ ಅಂಗಡಿಯೊಂದರ ಮಾಲೀಕರಿಂದ ಪೊಲೀಸ್ ಠಾಣೆಗೆ ಫೋನ್ ಬಂದಿತ್ತು. ತಮ್ಮ ಅಂಗಡಿಯಲ್ಲಿ ದುರ್ವಾಸನೆ ಬರುತ್ತಿದೆ ಎಂದು ಅವರು ದೂರು ನೀಡಿದ್ದರು. ಬಳಿಕ ಅಲ್ಲಿಗೆ ಹೋಗಿ ನೋಡಿದ ಪೊಲೀಸರಿಗೆ ಗೋಣಿ ಚೀಲದಲ್ಲಿ ಸುತ್ತಿಟ್ಟಿದ್ದ ಬಾಲಕಿಯ ಶವ ಪತ್ತೆಯಾಗಿದೆ. ಕೊಳೆತ ಶವ ದುರ್ನಾತ ಬೀರುತ್ತಿದ್ದು, ಅದನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಕಳೆದ ಮಂಗಳವಾರ ತನ್ನ 14 ವರ್ಷದ ಮಗಳು ನಾಪತ್ತೆಯಾಗಿರುವ ಬಗ್ಗೆ ದೂರುದಾರರ ಹೇಳಿಕೆ ಮೇರೆಗೆ ಅಪಹರಣ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 15 ದಿನಗಳಿಂದ ಬೇರೆ ಊರಿಗೆ ಹೋಗಿದ್ದ ಅಂಗಡಿಯೊಂದರ ಮಾಲೀಕ ರಾಹುಲ್ ಶನಿವಾರ ಝಾನ್ಸಿಯಿಂದ ಹಿಂದಿರುಗಿದ ನಂತರ ರಾಹುಲ್ ತನ್ನ ಅಂಗಡಿಯಿಂದ ದುರ್ವಾಸನೆ ಬರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಮಾಹಿತಿಯ ಮೇರೆಗೆ, ಅಂಗಡಿಯನ್ನು ತಪಾಸಣೆ ಮಾಡಲಾಯಿತು. ಅಲ್ಲಿ ಕಾಣೆಯಾದ ಹುಡುಗಿಯ ಭಾಗಶಃ ಕೊಳೆತ ದೇಹವು ಅಂಗಡಿಯ ಒಂದು ಮೂಲೆಯಲ್ಲಿ, ಗೋಣಿ ಚೀಲಗಳಲ್ಲಿ ಪತ್ತೆಯಾಗಿದೆ. ಪೊಲೀಸರು ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿದೆ. ಪೊಲೀಸ್ ಅಧಿಕಾರಿ ಜಹಾಂಗೀರ್ಪುರಿಯ ಬಿಜೆಆರ್​ಎಂ ಆಸ್ಪತ್ರೆಯ ಶವಾಗಾರಕ್ಕೆ ಶವವನ್ನು ಸ್ಥಳಾಂತರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಫೆಬ್ರವರಿ 20ರ ಮಧ್ಯರಾತ್ರಿಯಲ್ಲಿ ಆರೋಪಿಯು ದೆಹಲಿಯಿಂದ ಮುಂಬೈಗೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಸನ್ನೋತ್ ಗ್ರಾಮದ ಹೊರವಲಯದಿಂದ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಡಿಸಿಪಿ ಪ್ರಕಾರ, ಆರೋಪಿಯು ವಿಚಾರಣೆಯ ಸಮಯದಲ್ಲಿ ರಾಹುಲ್ ಅವರ ಇನ್ನೊಬ್ಬ ಉದ್ಯೋಗಿಯೊಂದಿಗೆ ಶನಿವಾರ ಸಂಜೆ ಮೆಟ್ರೋ ವಿಹಾರ್‌ನಲ್ಲಿ ರಾತ್ರಿ 7:30ರ ಸುಮಾರಿಗೆ ಒಟ್ಟಿಗೆ ಮದ್ಯ ಸೇವಿಸಿ ನಂತರ ಸಂತ್ರಸ್ತೆಯನ್ನು ತಮ್ಮ ಕೆಲಸದ ಸ್ಥಳಕ್ಕೆ ಕರೆಸಲು ಯೋಜಿಸಿದ್ದರು ಎಂದು ಒಪ್ಪಿಕೊಂಡಿದ್ದಾರೆ.

ಆರೋಪಿಗಳು ಮೊದಲು ಆಕೆಯ ಮೇಲೆ ಒಬ್ಬೊಬ್ಬರಾಗಿ ಅತ್ಯಾಚಾರವೆಸಗಿದರು ಮತ್ತು ನಂತರ ಆ ರಾತ್ರಿ ಹುಡುಗಿ ಧರಿಸಿದ್ದ ಪ್ಯಾಂಟ್ ಸಹಾಯದಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದರು ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಉಳಿದ ಆರೋಪಿಗಳನ್ನು ಬಂಧಿಸುವ ಪ್ರಕ್ರಿಯೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Murder: ಕೇರಳದ ಕಣ್ಣೂರಿನಲ್ಲಿ ಸಿಪಿಐಎಂ ಕಾರ್ಯಕರ್ತನ ಬರ್ಬರ ಹತ್ಯೆ; ಕೊಲೆಯ ಹಿಂದೆ ಆರ್​ಎಸ್​ಎಸ್​ ಕೈವಾಡದ ಆರೋಪ

Rape Case: ಕಳ್ಳತನಕ್ಕೆ ಬಂದವರಿಂದ 87ವರ್ಷದ ವೃದ್ಧೆ ಮೇಲೆ ಅತ್ಯಾಚಾರ!

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು