AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಮಗಳನ್ನೇ ಕೊಂದು ಆಕೆಯ ಶವದ ಮೇಲೆ ಅತ್ಯಾಚಾರ ನಡೆಸಿದ ಅಪ್ಪ!

Shocking News: ವಿಕೃತ ಕಾಮಿಯಾಗಿದ್ದ ವಿಕಲಚೇತನನೊಬ್ಬ ತನ್ನ 14 ವರ್ಷದ ಮಗಳನ್ನು ಕೊಲೆ ಮಾಡಿದ್ದಾನೆ. ನಂತರ ಆಕೆಯ ಶವದ ಮೇಲೆ ಅತ್ಯಾಚಾರವೆಸಗಿದ್ದಾನೆ.

Murder: ಮಗಳನ್ನೇ ಕೊಂದು ಆಕೆಯ ಶವದ ಮೇಲೆ ಅತ್ಯಾಚಾರ ನಡೆಸಿದ ಅಪ್ಪ!
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Feb 23, 2022 | 7:32 PM

Share

ಗುನಾ: ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ತಮ್ಮ ತಂದೆಯೇ ಮೊದಲ ಹೀರೋ. ಅಪ್ಪನ ಬೆಚ್ಚನೆಯ ಅಪ್ಪುಗೆಯಲ್ಲಿದ್ದರೆ ಜಗತ್ತಿನಲ್ಲಿ ಯಾರೂ ತಮ್ಮನ್ನು ಏನೂ ಮಾಡುವುದಿಲ್ಲ ಎಂಬ ಧೈರ್ಯ. ಆದರೆ, ಬೇಲಿಯೇ ಎದ್ದು ಹೊಲ ಮೇಯ್ದರೆ ಅದನ್ನು ಅರಗಿಸಿಕೊಳ್ಳುವುದಾದರೂ ಹೇಗೆ? ಮಗಳನ್ನು ಕಣ್ಣ ರೆಪ್ಪೆಯಂತೆ ಕಾಯಬೇಕಾಗಿದ್ದ ಅಪ್ಪನೇ ಆಕೆಯನ್ನು ಕೊಂದು, ಆಕೆಯ ಹೆಣದ ಮೇಲೆ ಅತ್ಯಾಚಾರ (Rape) ನಡೆಸಿರುವ ಆಘಾತಕಾರಿ ಘಟನೆಯೊಂದು (Shocking News) ಮಧ್ಯಪ್ರದೇಶದ ಗುನಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ವಿಕೃತ ಕಾಮಿಯಾಗಿದ್ದ ವಿಕಲಚೇತನನೊಬ್ಬ ತನ್ನ 14 ವರ್ಷದ ಮಗಳನ್ನು ಕೊಲೆ (Murder) ಮಾಡಿದ್ದಾನೆ. ನಂತರ ಆಕೆಯ ಶವದ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಜರಂಗಗಡ ಪೊಲೀಸ್ ಠಾಣೆ ವ್ಯಾಪ್ತಿಯ ಜೈತಾ ಡೊಂಗರ್ ಗ್ರಾಮದ ನಿವಾಸಿಯಾಗಿರುವ 40 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ. ಈ ಆರೋಪಿಯು ಮಂಗಳವಾರ ತನ್ನ 14 ವರ್ಷದ ಅಪ್ರಾಪ್ತ ಮಗಳು ಮನೆಯಿಂದ ನಾಪತ್ತೆಯಾಗಿದ್ದಾಳೆ ಎಂದು ಪೊಲೀಸ್ ದೂರು ನೀಡಿದ್ದ. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಲಾಗಿತ್ತು. ಆದರೆ, ತನಿಖೆ ವೇಳೆ ಆತನ ಮಗಳ ನಾಪತ್ತೆಯ ಹಿಂದೆ ಆತನದ್ದೇ ಕೈವಾಡವಿರುವುದು ಬಯಲಾಗಿತ್ತು.

ತನಿಖೆಯ ಸಮಯದಲ್ಲಿ ಮಂಗಳವಾರ ಮಧ್ಯಾಹ್ನ ಆ ಬಾಲಕಿ ತನ್ನ ತಂದೆಯೊಂದಿಗೆ ಹೋಗಿದ್ದನ್ನು ಕೊನೆಯ ಬಾರಿ ನೋಡಿದ್ದಾಗಿಯೂ, ಅದಾದ ನಂತರ ಆಕೆ ಮನೆಗೆ ವಾಪಾಸ್ ಬಂದಿಲ್ಲವೆಂದೂ ಆರೋಪಿಯ ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಮೃತ ಬಾಲಕಿಯ ತಂದೆಯನ್ನು ಕರೆದು ವಿಚಾರಣೆ ನಡೆಸಿದಾಗ, ಮನೆಯಲ್ಲಿ ಬೇರೆ ಸದಸ್ಯರು ಇದ್ದುದರಿಂದ ತನ್ನ ಮಗಳನ್ನು ಅತ್ಯಾಚಾರ ಮಾಡುವ ಉದ್ದೇಶದಿಂದ ಸಂಜೆ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದೆ. ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ದಾಮ್ಡೋಲಿ ಅರಣ್ಯಕ್ಕೆ ಕರೆದೊಯ್ದಿದ್ದೆ ಎಂದು ಆತ ತಪ್ಪೊಪ್ಪಿಕೊಂಡಿದ್ದಾನೆ.

ಅಪ್ಪ ತನ್ನ ಮೇಲೆ ಅತ್ಯಾಚಾರ ನಡೆಸಲು ಪ್ರಯತ್ನಿಸಿದಾಗ ಈ ವಿಷಯವನ್ನು ಮನೆಯವರಿಗೆಲ್ಲ ತಿಳಿಸುವುದಾಗಿ ಆಕೆ ಬೆದರಿಕೆ ಹಾಕಿದ್ದಳು. ಇದರಿಂದ ಗಾಬರಿಯಾದ ಆತ ತನ್ನ ಮಗಳ ಕತ್ತು ಹಿಸುಕಿ ಕೊಲೆ ಮಾಡಿದ್ದ. ನಂತರ ಆಕೆಯ ಶವದ ಮೇಲೆ ಅತ್ಯಾಚಾರ ನಡೆಸಿ, ತನ್ನ ಕಾಮದಾಸೆಯನ್ನು ತೀರಿಸಿಕೊಂಡಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸ್ ತಂಡವನ್ನು ಅರಣ್ಯಕ್ಕೆ ಕಳುಹಿಸಲಾಗಿದ್ದು, ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Rape Case: ಕಳ್ಳತನಕ್ಕೆ ಬಂದವರಿಂದ 87ವರ್ಷದ ವೃದ್ಧೆ ಮೇಲೆ ಅತ್ಯಾಚಾರ!

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮಹಿಳೆಯ ಕೂದಲು ಕತ್ತರಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ; ನಾಲ್ವರ ಬಂಧನ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ