AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಪ್ರೀತಿಸಲು ನಿರಾಕರಿಸಿದ್ದಕ್ಕೆ ಹಾಡಹಗಲೇ ಯುವತಿಯ ಕುತ್ತಿಗೆ ಸೀಳಿದ ಪಾಗಲ್ ಪ್ರೇಮಿ

Shocking News: ಪ್ರೀತಿಯನ್ನು ನಿರಾಕರಿಸಿದ ಯುವತಿಯ ಕುತ್ತಿಗೆ ಸೀಳಿದ ಯುವಕ ಎಲ್ಲರೆದುರೇ ರಸ್ತೆಯಲ್ಲಿ ಆಕೆಯನ್ನು ಕೊಲೆ ಮಾಡಿರುವ ಭಯಾನಕ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

Murder: ಪ್ರೀತಿಸಲು ನಿರಾಕರಿಸಿದ್ದಕ್ಕೆ ಹಾಡಹಗಲೇ ಯುವತಿಯ ಕುತ್ತಿಗೆ ಸೀಳಿದ ಪಾಗಲ್ ಪ್ರೇಮಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Feb 16, 2022 | 8:23 PM

Share

ಸೂರತ್: ಪ್ರೀತಿಸಿದ ಹುಡುಗಿ ಕೈ ಕೊಟ್ಟಾಗ ಕೋಪ ಬರುವುದು ಸಾಮಾನ್ಯ. ಲವ್ ಫೇಲ್ಯೂರ್ (Love Failure) ಆದ ಬೇಸರದಲ್ಲಿ ಆತ್ಮಹತ್ಯೆ (Suicide) ಮಾಡಿಕೊಂಡವರೂ ಇದ್ದಾರೆ, ತನಗೆ ಮೋಸ ಮಾಡಿದಾಕೆಯನ್ನು ಕೊಲೆ ಮಾಡಿ ಜೈಲು ಸೇರಿದವರೂ ಇದ್ದಾರೆ. ಇದೀಗ ಗುಜರಾತ್‌ನ ಸೂರತ್‌ನ ಕಮ್ರೇಜ್ ಬಳಿಯ ಪಸೋದರ ಎಂಬಲ್ಲಿ 21 ವರ್ಷದ ಯುವತಿಯೊಬ್ಬಳು ತನ್ನ ಪ್ರೇಮ ನಿವೇದನೆಯನ್ನು ನಿರಾಕರಿಸಿದ ಕಾರಣದಿಂದ ಆಕೆಯನ್ನು ಪ್ರೀತಿಸುತ್ತಿದ್ದ ಯುವಕ ಹಾಡಹಗಲೇ ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಪ್ರೀತಿಯನ್ನು ನಿರಾಕರಿಸಿದ ಯುವತಿಯ ಕುತ್ತಿಗೆ ಸೀಳಿದ ಯುವಕ ಎಲ್ಲರೆದುರೇ ರಸ್ತೆಯಲ್ಲಿ ಆಕೆಯನ್ನು ಕೊಲೆ ಮಾಡಿರುವ ಭಯಾನಕ ವಿಡಿಯೋ (Shocking Video) ಎಲ್ಲೆಡೆ ಹರಿದಾಡುತ್ತಿದೆ.

ಈ ವೇಳೆ ಆಕೆಯನ್ನು ರಕ್ಷಿಸಲು ಬಂದ ಆಕೆಯ ಸಹೋದರನಿಗೂ ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಈ ದೃಶ್ಯವನ್ನು ಕಣ್ಣಾರೆ ಕಂಡ ಸ್ಥಳೀಯರು ಮತ್ತು ವಿಡಿಯೋ ನೋಡಿದ ನೆಟ್ಟಿಗರು ಆ ಯುವಕನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಆ ಯುವತಿಯನ್ನು ಕೊಲೆ ಮಾಡಿದ ಬಳಿಕ ಆ ಯುವಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ, ಆತನನ್ನು ಆಸ್ಪತ್ರೆಗೆ ಸೇರಿಸಿ ಬದುಕಿಸಲಾಗಿದೆ.

ಕೊಲೆ ಮಾಡಿದ ಆರೋಪಿಯ ಹೆಸರು ಫೆನಿಲ್ ಗೋಯಾನಿ ಎಂದು ತಿಳಿದುಬಂದಿದೆ. ಪೊಲೀಸರು ಆ ಯುವಕನ್ನು ಬಂಧಿಸಿದ್ದಾರೆ. ಆತ ಯುವತಿಯನ್ನು ಕೊಲ್ಲಲು ಯತ್ನಿಸಿದಾಗ ಜನರು ಅವನನ್ನು ತಡೆಯಲು ಪ್ರಯತ್ನಿಸಿದ್ದಾದರೂ ಅವನು ಯಾರ ಮಾತನ್ನೂ ಕೇಳದೇ ಯುವತಿಯ ಕತ್ತು ಸೀಳಿದ್ದಾನೆ. ಇದೇ ವೇಳೆ ಬಾಲಕಿಯ ಕುಟುಂಬಸ್ಥರ ಮೇಲೂ ಹಲ್ಲೆ ನಡೆದಿದೆ. ಯುವಕ ಫೆನಿಲ್ ಗೋಯಾನಿಯ ಪ್ರೇಮ ನಿವೇದನೆಯನ್ನು ಗ್ರೀಷ್ಮಾ ವೆಕಾರಿಯಾ ತಿರಸ್ಕರಿಸಿದ್ದರು. ಇದೇ ಕಾರಣಕ್ಕೆ ಕೋಪಗೊಂಡಿದ್ದ ಆ ಯುವಕ ಆಕೆಯನ್ನು ಕೊಲೆ ಮಾಡಿದ್ದಾನೆ.

ಗ್ರಿಷ್ಮಾ ಅವರ ತಂದೆ ನಂದಲಾಲ್ ವೆಕಾರಿಯಾ ಅವರು ವಜ್ರದ ವ್ಯಾಪಾರಿಯಾಗಿದ್ದು, ನೈಜೀರಿಯಾದಲ್ಲಿ ವಾಸವಾಗಿದ್ದರು. ಮಗಳು ಕೊಲೆಯಾದ ಸುದ್ದಿ ಕೇಳಿ ಅವರು ನೈಜೀರಿಯಾದಿಂದ ಭಾರತಕ್ಕೆ ಮರಳಿದ್ದಾರೆ.

ಮೂಲಗಳ ಪ್ರಕಾರ, ಶನಿವಾರ ಮಧ್ಯಾಹ್ನ ಫೆನಿಲ್ ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿನಿ ಗ್ರೀಷ್ಮಾಳನ್ನು ಮನೆಯಿಂದ ಹೊರಗೆ ಎಳೆದೊಯ್ದಿದ್ದಾನೆ. ಕುಟುಂಬಸ್ಥರು ಹಾಗೂ ನೆರೆಹೊರೆಯವರನ್ನು ಹತ್ತಿರ ಬರದಂತೆ ಬೆದರಿಸಿ ಸಾರ್ವಜನಿಕರ ಸಮ್ಮುಖದಲ್ಲಿಯೇ ಆಕೆಯ ಕತ್ತು ಸೀಳಿದ್ದಾನೆ. ಇದರಿಂದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬಳಿಕ ಆತ ತನ್ನ ಕೈ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸೇರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ: Murder: ತವರು ಮನೆಗೆ ಹೋಗುತ್ತೇನೆಂದು ಹಠ ಮಾಡಿದ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!

Viral News: ಮದುವೆಯಾದ ಕೂಡಲೆ ಗಂಡನ ಬಿಟ್ಟು ಪ್ರಿಯಕರನ ಜೊತೆ ವಧು ಪರಾರಿ; ಲವ್ ಸ್ಟೋರಿಗೆ ಹೊಸ ಟ್ವಿಸ್ಟ್​!

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್