Murder: ಪ್ರಿಯಕರನ ಜೊತೆ ಸೇರಿ ಗಂಡ, ಮೂವರು ಮಕ್ಕಳನ್ನು ಬೆಂಕಿ ಹಚ್ಚಿ ಕೊಂದ ಮಹಿಳೆ

Crime News | ಸೆ. 14ರಂದು ಚಂಬ ಪ್ರದೇಶದ ಇಲ್ಲಿನ ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು 25 ವರ್ಷದ ಪುರುಷ ಹಾಗೂ ಆತನ ಮೂವರು ಮಕ್ಕಳು ಸುಟ್ಟು ಕರಕಲಾಗಿದ್ದರು. ಅದೃಷ್ಟವಶಾತ್ ಆತನ ಹೆಂಡತಿ ಬದುಕುಳಿದಿದ್ದಳು. ಆದರೆ, ಇದು ಅದೃಷ್ಟದಿಂದಲ್ಲ, ಮೊದಲೇ ಮಾಡಿದ ಪ್ಲಾನ್​ನಿಂದ ಎಂಬುದು ಈಗ ಬಯಲಾಗಿದೆ.

Murder: ಪ್ರಿಯಕರನ ಜೊತೆ ಸೇರಿ ಗಂಡ, ಮೂವರು ಮಕ್ಕಳನ್ನು ಬೆಂಕಿ ಹಚ್ಚಿ ಕೊಂದ ಮಹಿಳೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 30, 2021 | 1:19 PM

ಶ್ರೀನಗರ: ಕೆಟ್ಟ ಮಕ್ಕಳು ಬೇಕಾದರೆ ಇರಬಹುದು ಆದರೆ ಕೆಟ್ಟ ತಾಯಿ ಇರಲು ಸಾಧ್ಯವೇ ಇಲ್ಲ ಎಂಬ ಮಾತೊಂದಿದೆ. ಆದರೆ, ಕಾಲ ಬದಲಾದಂತೆ ಸಂಬಂಧಗಳಲ್ಲೂ ಬದಲಾವಣೆಯಾಗುತ್ತಿದ್ದು, ಎಷ್ಟೋ ಸಂಬಂಧಗಳು ಅರ್ಥ ಕಳೆದುಕೊಳ್ಳಲಾರಂಭಿಸಿದೆ. ತನ್ನ ಮಕ್ಕಳಿಗಾಗಿ ಜೀವವನ್ನೇ ಒತ್ತೆಯಾಗಿಡುವ ಅಮ್ಮಂದಿರು ಒಂದೆಡೆಯಾದರೆ ತನ್ನ ಸ್ವಾರ್ಥಕ್ಕಾಗಿ ಮಕ್ಕಳ ಜೀವ ತೆಗೆಯಲು ಕೂಡ ಹೇಸದ ಕೆಲವು ಅಮ್ಮಂದಿರು ಇನ್ನೊಂದೆಡೆ. ಹಿಮಾಚಲ ಪ್ರದೇಶದ ಚಂಬದಲ್ಲಿ 25 ವರ್ಷದ ವ್ಯಕ್ತಿ ಹಾಗೂ ಮೂವರ ಮಕ್ಕಳ ಕೊಲೆಯಾಗಿತ್ತು. ಆ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆ ವ್ಯಕ್ತಿಯ ಹೆಂಡತಿಯೇ ಆತನನ್ನು ಹಾಗೂ ಮೂವರು ಮಕ್ಕಳನ್ನು ಕೊಲೆ ಮಾಡಿದ್ದಾಳೆಂಬ ವಿಷಯವನ್ನು ಪತ್ತೆ ಹಚ್ಚಿದ್ದಾರೆ.

ಸೆ. 14ರಂದು ಚಂಬ ಪ್ರದೇಶದ ಇಲ್ಲಿನ ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು 25 ವರ್ಷದ ಪುರುಷ ಹಾಗೂ ಆತನ ಮೂವರು ಮಕ್ಕಳು ಸುಟ್ಟು ಕರಕಲಾಗಿದ್ದರು. ಅದೃಷ್ಟವಶಾತ್ ಆತನ ಹೆಂಡತಿ ಬದುಕುಳಿದಿದ್ದಳು. ಆದರೆ, ಇದು ಅದೃಷ್ಟದಿಂದಲ್ಲ, ಮೊದಲೇ ಮಾಡಿದ ಪ್ಲಾನ್​ನಿಂದ ಎಂಬುದು ಈಗ ಬಯಲಾಗಿದೆ. ಪಕ್ಕದ ಮನೆಯವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ನೂರಾ ತನ್ನ ಗಂಡನನ್ನು ಕೊಲೆ ಮಾಡಲು ಪ್ರಿಯಕರನ ಸಹಾಯ ಪಡೆದಿದ್ದಳು. ಯಾರಿಗೂ ಅನುಮಾನ ಬಾರದಂತೆ ಗಂಡನನ್ನು ಕೊಲೆ ಮಾಡಲು ನಿರ್ಧರಿಸಿದ್ದ ಆಕೆ ಆತನ ಜೊತೆ ಮೂವರು ಮಕ್ಕಳನ್ನು ಕೂಡ ಬಲಿ ನೀಡಿದ್ದಾಳೆ.

ಆಕೆಯ ಅಕ್ರಮ ಸಂಬಂಧವನ್ನು ಮುಚ್ಚಿಡಲು 25 ವರ್ಷದ ರಫಿ ಮೊಹಮ್ಮದ್, 6 ವರ್ಷದ ಮಗಳು ಜೈಟುನ್, 2 ವರ್ಷದ ಮಗಳು ಜುಲ್ಕ, 4 ವರ್ಷದ ಮಗ ಸಮೀರ್ ಮನೆಯಲ್ಲಿದ್ದಾಗ ಬೆಂಕಿ ಹಚ್ಚಿ ಕೊಂದಿದ್ದಾಳೆ. ಇಲ್ಲಿನ ಕರತೋಷ್ ಎಂಬ ಗ್ರಾಮದಲ್ಲಿ ಸೆ. 14ರಂದು ಮನೆಯೊಳಗೆ ಬೆಂಕಿ ಹಚ್ಚಿ ನಾಲ್ವರನ್ನೂ ಕೊಲೆ ಮಾಡಿದ್ದಾಳೆ. ಬಳಿಕ ತನಗೂ ಸಣ್ಣ ಪುಟ್ಟ ಗಾಯಗಳನ್ನು ಮಾಡಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಳೆ. ಹೀಗಾಗಿ, ಇದೊಂದು ಆಕಸ್ಮಿಕ ಬೆಂಕಿ ಅವಘಡ ಎಂದು ನಂಬಲಾಗಿತ್ತು.

ಆದರೆ, ರಫಿಯ ತಂದೆ ಈ ಘಟನೆಯ ಹಿಂದೆ ತಮ್ಮ ಸೊಸೆಯ ಕೈವಾಡ ಇರುವ ಅನುಮಾನವಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ನನ್ನ ಮಗ ಹಾಗೂ ಮೊಮ್ಮಕ್ಕಳ ಸಾವು ಆಕಸ್ಮಿಕವಲ್ಲ. ಅದೊಂದು ಪೂರ್ವ ನಿಯೋಜಿತ ಕೊಲೆ ಎಂದು ದೂರಿನಲ್ಲಿ ತಿಳಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲೂ ರಫಿಯ ತಲೆಗೆ ಹಿಂಭಾಗದಿಂದ ಬಲವಾದ ಪೆಟ್ಟು ಬಿದ್ದಿದ್ದರಿಂದ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿತ್ತು. ಇದರಿಂದ ತನಿಖೆ ನಡೆಸಿದ ಪೊಲೀಸರು ಅಸಲಿ ವಿಷಯವನ್ನು ಬಯಲಿಗೆಳೆದಿದ್ದಾರೆ.

ಇದನ್ನೂ ಓದಿ: Murder: ಲೇಡಿ ಪೊಲೀಸ್​ಗಾಗಿ ಹೆಂಡತಿ, ಮಕ್ಕಳನ್ನೇ ಕೊಂದ ಗಂಡ; ಸತ್ತು ಹೋಗಿದ್ದ ಕೊಲೆಗಾರ ಎದ್ದು ಬಂದ ಕತೆಯಿದು!

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ

Published On - 1:18 pm, Thu, 30 September 21

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ