Murder: ಸ್ನಾನಕ್ಕೆ ಹೋದ ಗಂಡನಿಗೆ ಟವೆಲ್ ಕೊಡಲು ತಡವಾಗಿದ್ದಕ್ಕೆ ಹೆಂಡತಿಯ ಬರ್ಬರ ಹತ್ಯೆ

Crime News Today: 50 ವರ್ಷದ ವ್ಯಕ್ತಿ ಸ್ನಾನಕ್ಕೆ ಹೋದಾಗ ತನ್ನ ಹೆಂಡತಿಯನ್ನು ಕರೆದು ಟವೆಲ್ ಕೊಡಲು ಹೇಳಿದ್ದ. ಆದರೆ, ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಆಕೆ ಸ್ವಲ್ಪ ಹೊತ್ತು ಕಾಯುವಂತೆ ಹೇಳಿದ್ದಳು.

Murder: ಸ್ನಾನಕ್ಕೆ ಹೋದ ಗಂಡನಿಗೆ ಟವೆಲ್ ಕೊಡಲು ತಡವಾಗಿದ್ದಕ್ಕೆ ಹೆಂಡತಿಯ ಬರ್ಬರ ಹತ್ಯೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 08, 2021 | 2:34 PM

ಭೂಪಾಲ್: ಕೆಲವೊಮ್ಮೆ ಬೇರೆಯವರಿಗೆ ಸಣ್ಣ ವಿಷಯವೆಂದು ಕಂಡಿದ್ದೇ ದೊಡ್ಡ ವಿಷಯವಾಗಿ ಮಾರ್ಪಾಡಾಗಿ ಕೊಲೆ ಮಾಡುವ ಮಟ್ಟಕ್ಕೂ ಬೆಳೆಯುತ್ತದೆ. ಗಂಡ-ಹೆಂಡತಿಯ ನಡುವೆ ನಡೆದ ಒಂದು ಸಣ್ಣ ಜಗಳದಿಂದ ಒಂದು ಜೀವವೇ ಹೋಗಿದೆ. ಅಷ್ಟಕ್ಕೂ ಈ ಜಗಳ ನಡೆದಿದ್ದು ಟವೆಲ್ ಸಲುವಾಗಿ ಎಂದರೆ ಆಶ್ಚರ್ಯವಾಗದಿರದು. ಸ್ನಾನಕ್ಕೆ ಹೋದ ಗಂಡನಿಗೆ ಆತನ ಹೆಂಡತಿ ಟವೆಲ್ ಕೊಡುವುದು ತಡವಾಯಿತು ಎಂಬ ಕಾರಣಕ್ಕೆ ಆತ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದಾನೆ.

ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 50 ವರ್ಷದ ವ್ಯಕ್ತಿ ಸ್ನಾನಕ್ಕೆ ಹೋದಾಗ ತನ್ನ ಹೆಂಡತಿಯನ್ನು ಕರೆದು ಟವೆಲ್ ಕೊಡಲು ಹೇಳಿದ್ದ. ಆದರೆ, ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಆಕೆ ಸ್ವಲ್ಪ ಹೊತ್ತು ಕಾಯುವಂತೆ ಹೇಳಿದ್ದಳು. ಆತನ ಸ್ನಾನ ಮುಗಿದರೂ ಆಕೆ ಟವೆಲ್ ಕೊಡದಿದ್ದರಿಂದ ಕೋಪಗೊಂಡ ಗಂಡ ತನ್ನ ಹೆಂಡತಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯ ಕಿರ್ನಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೀರಾಪುರ ಗ್ರಾಮದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಆರೋಪಿ, ಅರಣ್ಯ ಇಲಾಖೆಯ ದಿನಗೂಲಿ ನೌಕರ ರಾಜಕುಮಾರ್ ಬಹೆ (50) ತನ್ನ ಪತ್ನಿ ಪುಷ್ಪಾ ಬಾಯಿ (45)ಯನ್ನು ಕೊಲೆ ಮಾಡಿದ್ದಾನೆ. ಆತ ಸ್ನಾನದ ನಂತರ ಟವೆಲ್ ನೀಡುವಂತೆ ಕೇಳಿದ್ದ. ಆದರೆ, ಆಕೆ ಟವೆಲ್ ನೀಡಲು ತಡವಾಗಿದ್ದಕ್ಕೆ ಈ ಕೊಲೆ ಮಾಡಿದ್ದಾನೆ ಎಂದು ಎಂದು ಕಿರ್ನಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಜೇಂದ್ರ ಕುಮಾರ್ ಬರಿಯಾ ತಿಳಿಸಿದ್ದಾರೆ.

ಅಡುಗೆ ಮನೆಯಲ್ಲಿ ಪಾತ್ರೆಗಳನ್ನು ತೊಳೆಯುತ್ತಿದ್ದುದರಿಂದ ಸ್ವಲ್ಪ ಸಮಯ ಕಾಯುವಂತೆ ಅವನ ಹೆಂಡತಿ ಹೇಳಿದ್ದಳು. ಇದರಿಂದ ಕೋಪಗೊಂಡ ವ್ಯಕ್ತಿ ಸ್ನಾನ ಮುಗಿಸಿ ಹೊರಗೆ ಬಂದ ನಂತರ ಕಬ್ಬಿಣದ ರಾಡಿನಿಂದ ಪತ್ನಿಯ ತಲೆಗೆ ಪದೇ ಪದೇ ಹೊಡೆದಿದ್ದಾನೆ. ಇದರಿಂದ ಆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತನ್ನ ಅಪ್ಪನನ್ನು 23 ವರ್ಷದ ಮಗಳನ್ನು ತಡೆಯಲು ಪ್ರಯತ್ನಿಸಿದಾಗ ಆಕೆಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಭಾನುವಾರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಆರೋಪಿಯನ್ನು ಭಾನುವಾರ ಬಂಧಿಸಲಾಗಿದ್ದು, ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Murder: ರಾಡ್‌ನಿಂದ ಪತಿ ಹತ್ಯೆಗೈದು ಪೊಲೀಸರ ಮುಂದೆ ಶರಣಾದ 2ನೇ ಪತ್ನಿ, ಕೊಲೆಯ ಹಿಂದೆ ಆಸ್ತಿ ಕಬಳಿಕೆ ಆರೋಪ

Murder: ಫಿಶ್​ ಕರಿಗಾಗಿ ಗೆಳೆಯನಿಂದಲೇ ಬರ್ಬರ ಹತ್ಯೆ!

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ