Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಆಲ್ಕೋಹಾಲ್​ ಖರೀದಿಸಲು ಹಣ ಕೊಡದ ಗರ್ಭಿಣಿ ಹೆಂಡತಿಯನ್ನು ಕೊಂದ ಗಂಡ

Crime News: ತಿಲೇಶ್ವರ್ ಕಳೆದ ವರ್ಷ ಮೇ 25ರಂದು ಪ್ರಿಯಾ ದೇವಿ ಎಂಬಾಕೆಯನ್ನು ಮದುವೆಯಾಗಿದ್ದ. ಕಳೆದ ಗುರುವಾರ ಆತ ತನ್ನ ಹೆಂಡತಿ ಪ್ರಿಯಾ ಬಳಿ ಆಲ್ಕೋಹಾಲ್ ಖರೀದಿಸಲು ಹಣ ಕೇಳಿದ್ದ. ಆದರೆ, ಆಕೆ ಹಣವನ್ನು ನೀಡಲು ನಿರಾಕರಿಸಿದ್ದಳು.

Murder: ಆಲ್ಕೋಹಾಲ್​ ಖರೀದಿಸಲು ಹಣ ಕೊಡದ ಗರ್ಭಿಣಿ ಹೆಂಡತಿಯನ್ನು ಕೊಂದ ಗಂಡ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 15, 2022 | 8:02 PM

ಛತ್ರಾ: ಆಲ್ಕೋಹಾಲ್ ಖರೀದಿಸಲು ಹಣ ನೀಡದ 7 ತಿಂಗಳ ಗರ್ಭಿಣಿಯನ್ನು ಆಕೆಯ ಗಂಡನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್‌ನ (Jharkhand) ಛತ್ರಾ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೆಂಡತಿಯನ್ನು ಕೊಂದ ಆರೋಪಿಯನ್ನು ತಿಲೇಶ್ವರ ಗಂಜು ಎಂದು ಗುರುತಿಸಲಾಗಿದ್ದು, ಶುಕ್ರವಾರ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ತಿಲೇಶ್ವರ್ ಕಳೆದ ವರ್ಷ ಮೇ 25ರಂದು ಪ್ರಿಯಾ ದೇವಿ ಎಂಬಾಕೆಯನ್ನು ಮದುವೆಯಾಗಿದ್ದ. ಹಜಾರಿಬಾಗ್ ನಿವಾಸಿಯಾಗಿರುವ ಪ್ರಿಯಾ ಅವರ ಸಹೋದರ ನರೇಶ್ ಗಂಜು ಅವರ ಪ್ರಕಾರ, ತಿಲೇಶ್ವರ್ ದಿನವೂ ಕಂಠಪೂರ್ತಿ ಕುಡಿದು ಪ್ರಿಯಾಗೆ ಥಳಿಸುತ್ತಿದ್ದ. ಆಲ್ಕೋಹಾಲ್ (Liquor) ಖರೀದಿಸಲು ಆತ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಮಾರಾಟ ಮಾಡುತ್ತಿದ್ದ.

ಕಳೆದ ಗುರುವಾರ ಆತ ತನ್ನ ಹೆಂಡತಿ ಪ್ರಿಯಾ ಬಳಿ ಆಲ್ಕೋಹಾಲ್ ಖರೀದಿಸಲು ಹಣ ಕೇಳಿದ್ದ. ಆದರೆ, ಆಕೆ ಹಣವನ್ನು ನೀಡಲು ನಿರಾಕರಿಸಿದ್ದಳು. ನಂತರ ಅವರು ಅವಳನ್ನು ಥಳಿಸಿದರು ಎಂದು ನರೇಶ್ ಹೇಳಿದ್ದಾರೆ. 7 ತಿಂಗಳ ಗರ್ಭಿಣಿಯಾಗಿದ್ದ ಪ್ರಿಯಾ ಜೊತೆಗೆ ಇದೇ ವಿಷಯಕ್ಕೆ ಜಗಳವಾಡಿದ ಆತ ಹಣಕ್ಕಾಗಿ ಪ್ರಿಯಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಪರಾಧ ನಡೆದ ಸ್ಥಳಕ್ಕೆ ಆಗಮಿಸಿ, ಮೃತ ಮಹಿಳೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಛತ್ರಾ ಸದರ್ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ವರದಿಯಲ್ಲಿ ತಿಳಿಸಲಾಗಿದೆ.

ಕೃತ್ಯ ಎಸಗಿ ಪರಾರಿಯಾಗಿದ್ದ ತಿಲೇಶ್ವರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆತನನ್ನು ದಾಖಲಿಸಲಾಗಿದೆ. ಶುಕ್ರವಾರ ಆತನನ್ನು ಜೈಲಿಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ಪ್ರಿಯಕರನಿಗಾಗಿ ಪತಿಯ ಕೊಲೆ ಮಾಡಿ ಮೂರ್ಛೆ ರೋಗದಿಂದ ಸಾವು ಎಂದು ಕತೆ ಕಟ್ಟಿದ್ದ ಖರ್ತನಾಕ್ ಲೇಡಿಯ ಬಂಧನ

Murder: ಲವರ್ ಜೊತೆ ಮಾತಾಡಿದ್ದಕ್ಕೆ ಯುವಕನ ಕಗ್ಗೊಲೆ; ಹಂತಕನನ್ನು ಪತ್ತೆಹಚ್ಚಿದ್ದೇ ಒಂದು ರೋಚಕ ಕತೆ

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್