Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು

ಆ ಯುವಕನ ಗಂಟಲು ಸೀಳಿದ ಗಾಯಗಳು ಕಂಡುಬಂದಿದೆ. ನೇರಳೆ ಬಣ್ಣದ ಟ್ರಾವೆಲ್ ಬ್ಯಾಗ್‌ನಲ್ಲಿ ಈ ಶವವನ್ನು ತುಂಬಿ ಬಿಸಾಡಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು
ಸೂಟ್​ಕೇಸ್​ನಲ್ಲಿದ್ದ ಶವ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 25, 2022 | 8:54 PM

ನವದೆಹಲಿ: 2 ದಿನಗಳ ಹಿಂದೆ ನಾಪತ್ತೆಯಾಗಿದ್ದ 17 ವರ್ಷದ ಯುವಕನ ಶವ (Dead Body) ಸೂಟ್​ಕೇಸ್​ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಾಯುವ್ಯ ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ಇಂದು ಬೆಳಗ್ಗೆ 17 ವರ್ಷದ ಯುವಕನ ಮೃತದೇಹವನ್ನು ಸೂಟ್​ಕೇಸ್​ನಲ್ಲಿ ತುಂಬಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 2 ದಿನಗಳ ಹಿಂದೆ ರೋಹಿಣಿ ಪ್ರದೇಶದಿಂದ ಈ ಯುವಕ ನಾಪತ್ತೆಯಾಗಿದ್ದ. ಈ ಕುರಿತು ಆತನ ಪೋಷಕರು ದೂರು ನೀಡಿದ್ದರು. ಇಂದು ಬೆಳಗ್ಗೆ 7 ಗಂಟೆಗೆ ಆ ಯುವಕನ ಮೃತದೇಹದ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದೆ.

ವೈ-ಬ್ಲಾಕ್ ಮಂಗೋಲ್‌ಪುರಿ ಎದುರಿನ ಮುಖ್ಯ ರಸ್ತೆಯ ಪೀರ್ ಬಾಬಾ ಮಜಾರ್ ಬಳಿಯಲ್ಲಿ ಆ ಯುವಕನ ಶವ ಪತ್ತೆಯಾಗಿದೆ. ಆ ಯುವಕನ ಗಂಟಲು ಸೀಳಿದ ಗಾಯಗಳು ಕಂಡುಬಂದಿದೆ. ನೇರಳೆ ಬಣ್ಣದ ಟ್ರಾವೆಲ್ ಬ್ಯಾಗ್‌ನಲ್ಲಿ ಈ ಶವವನ್ನು ತುಂಬಿ ಬಿಸಾಡಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾಣೆಯಾದ ವ್ಯಕ್ತಿಯ ದಾಖಲೆಗಳನ್ನು ಪರಿಶೀಲಿಸಲು ಎಲ್ಲಾ ನೆರೆಯ ಪೊಲೀಸ್ ಠಾಣೆಗಳು ಮತ್ತು ಜಿಲ್ಲೆಗಳಿಗೆ ತಿಳಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಆ ಮೃತದೇಹವು ರೋಹಿಣಿ ಸೆಕ್ಟರ್ -1ರ ನಿವಾಸಿ 17 ವರ್ಷದ ಯುವಕನದ್ದಾಗಿದೆ ಎಂದು ಪತ್ತೆಯಾಗಿತ್ತು. ಆ ಯುವಕ ಕಾಣೆಯಾದ ವರದಿಯನ್ನು ಆಧರಿಸಿ, ಶುಕ್ರವಾರ ದಕ್ಷಿಣ ರೋಹಿಣಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 363 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: Murder: ಕುಡಿದು ಅಮ್ಮನಿಗೆ ಹೊಡೆದು ಹಿಂಸಿಸುತ್ತಿದ್ದ ಅಪ್ಪನನ್ನೇ ಕೊಲೆ ಮಾಡಿದ ಮಗ

Murder: ಮನೆಯೊಳಗೆ ಮಗ, ಸೊಸೆ, ಮೊಮ್ಮಕ್ಕಳನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೃದ್ಧ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್