Murder: ಹೆಂಡತಿಗೆ ಹೊಡೆದು ಕೊಂದು, ಆಕಸ್ಮಿಕವಾಗಿ ಬಿದ್ದು ಸತ್ತಿದ್ದಾಳೆಂದು ಕತೆ ಕಟ್ಟಿದ ಗಂಡ
ರೋಷನಿ (22) ಎಂಬ ಮಹಿಳೆಯ ತೀವ್ರವಾಗಿ ಗಾಯಗೊಂಡಿದ್ದರಿಂದ ಸಿಯಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ವೇಳೆ ಆಕೆ ಪ್ರಜ್ಞಾಹೀನಳಾಗಿದ್ದಳು. ಆರೋಪಿಯು ತನ್ನ ಹೆಂಡತಿ ಮಹಡಿಯಿಂದ ಬಿದ್ದು ಪ್ರಜ್ಞಾಹೀನಳಾಗಿದ್ದಾಳೆ ಎಂದು ವೈದ್ಯರಿಗೆ ತಿಳಿಸಿದ್ದ.
ಮುಂಬೈ: ಮಹಾರಾಷ್ಟ್ರದ ಧಾರಾವಿಯಲ್ಲಿ 27 ವರ್ಷದ ಯುವಕನೊಬ್ಬ ತನ್ನ ಪತ್ನಿಯನ್ನು ಹೊಡೆದು ಕೊಂದಿದ್ದು (Murder), ಬಳಿಕ ಅದನ್ನು ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದಾನೆ. ತನ್ನ ಹೆಂಡತಿಯನ್ನು ಕೊಲೆ ಮಾಡಿದ ಆರೋಪಿಯನ್ನು ರಾಹುಲ್ ಜೈಸ್ವಾಲ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ವರದಿಯ ಪ್ರಕಾರ, ಮರಣೋತ್ತರ ಪರೀಕ್ಷೆಯ ವರದಿಯಿಂದ ಆ ಮಹಿಳೆ ಕೊಲೆಯಾಗಿದ್ದಾಳೆ ಎಂಬುದು ದೃಢವಾಯಿತು. ಈ ಹಿನ್ನೆಲೆಯಲ್ಲಿ ಅನುಮಾನಗೊಂಡು ರಾಹುಲ್ನನ್ನು ಬಂಧಿಸಿದ್ದಾರೆ.
ಕಳೆದ ವಾರ ಈ ಘಟನೆ ನಡೆದಿದ್ದು, ರೋಷನಿ (22) ಎಂಬ ಮಹಿಳೆಯ ತೀವ್ರವಾಗಿ ಗಾಯಗೊಂಡಿದ್ದರಿಂದ ಸಿಯಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ವೇಳೆ ಆಕೆ ಪ್ರಜ್ಞಾಹೀನಳಾಗಿದ್ದಳು. ಆರೋಪಿಯು ತನ್ನ ಹೆಂಡತಿ ಮಹಡಿಯಿಂದ ಬಿದ್ದು ಪ್ರಜ್ಞಾಹೀನಳಾಗಿದ್ದಾಳೆ ಎಂದು ವೈದ್ಯರಿಗೆ ತಿಳಿಸಿದ್ದ. ಆದರೆ, ಆಘಾತಕಾರಿ ಸಂಗತಿಯೆಂದರೆ, ಅದಾದ ಸ್ವಲ್ಪ ಸಮಯದ ನಂತರ ಸಂತ್ರಸ್ತೆ ಸಾವನ್ನಪ್ಪಿದ್ದಳು. ಈ ಕುರಿತು ಪೊಲೀಸ್ ತನಿಖೆಯ ಸಂದರ್ಭದಲ್ಲಿ ಆಕೆ ಆಕಸ್ಮಿಕವಾಗಿ ಸಾವನ್ನಪ್ಪಿಲ್ಲ, ಅದೊಂದು ಕೊಲೆ ಎಂದು ಸ್ಪಷ್ಟವಾಗಿತ್ತು.
ಆ ಮಹಿಳೆಯ ಮರಣೋತ್ತರ ಪರೀಕ್ಷೆಯಲ್ಲಿ ಆಕೆ ಆಂತರಿಕ ಗಾಯಗಳಿಂದಾಗಿ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ದಾಖಲಾಗಿತ್ತು. ಈ ಕುರಿತು ಪೊಲೀಸರು ವೈದ್ಯರನ್ನು ವಿಚಾರಿಸಿದಾಗ ಯಾರಾದರೂ ಆಕೆಗೆ ಥಳಿಸಿರಬಹುದು. ಅದೇ ಕಾರಣದಿಂದ ಗಾಯವಾಗಿ ಸಾವನ್ನಪ್ಪಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು. ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ನಡೆಸಿ, ಮೃತ ಮಹಿಳೆಯ ಗಂಡನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸಂತ್ರಸ್ತೆಯ ನೆರೆಹೊರೆಯವರನ್ನೂ ಸಹ ವಿಚಾರಣೆಗೆ ಒಳಪಡಿಸಲಾಗಿದೆ. ಆಗ ಆ ಗಂಡ-ಹೆಂಡತಿಯ ನಡುವೆ ಉತ್ತಮ ಸಂಬಂಧವಿರಲಿಲ್ಲ, ಅವರಿಬ್ಬರೂ ಸದಾ ಜಗಳವಾಡುತ್ತಿದ್ದರು ಎಂದು ಪೊಲೀಸರಿಗೆ ಗೊತ್ತಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಈ ಕುರಿತು ಕೂಲಂಕುಷವಾಗಿ ತನಿಖೆ ನಡೆಸಿದಾಗ ಮೃತ ಮಹಿಳೆ ತನ್ನ ಪತಿಗೆ ವಿವಾಹೇತರ ಸಂಬಂಧವಿದೆ ಎಂದು ಅನುಮಾನದಿಂದ ಆತನೊಂದಿಗೆ ಜಗಳವಾಡುತ್ತಿದ್ದುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ವಿಚಾರಣೆ ವೇಳೆ ರಾಹುಲ್ ತಾನು ತನ್ನ ಹೆಂಡತಿಯನ್ನು ಹೊಡೆದು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇದೀಗ ಆತ ಪೊಲೀಸರ ವಶದಲ್ಲಿದ್ದಾನೆ.
ಇದನ್ನೂ ಓದಿ: Murder: ತವರು ಮನೆಗೆ ಹೋಗುತ್ತೇನೆಂದು ಹಠ ಮಾಡಿದ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!
Murder: ಮರುಮದುವೆಯಾಗಲು ಮುಂದಾದ 80 ವರ್ಷದ ತಂದೆಯನ್ನು ಕೊಚ್ಚಿ ಕೊಂದ ಮಗ!