Murder: ಮಗನ ಜೊತೆ ಸೇರಿ ಗಂಡನನ್ನೇ ಕೊಂದು 7ನೇ ಮಹಡಿಯಿಂದ ಎಸೆದ ಮಹಿಳೆ!

Crime News: ಶಂತನುಕೃಷ್ಣ ಶೇಷಾದ್ರಿ ಎಂಬ 54 ವರ್ಷದ ವ್ಯಕ್ತಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಅವರ ಹೆಂಡತಿ ಮತ್ತು ಮಗ ಪೊಲೀಸರಿಗೆ ತಿಳಿಸಿದ್ದರು. ಅವರು ಈ ಮೊದಲು ಕೂಡ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದರು ಎಂದು ಪೊಲೀಸರಿಗೆ ಹೇಳಿದ್ದರು.

Murder: ಮಗನ ಜೊತೆ ಸೇರಿ ಗಂಡನನ್ನೇ ಕೊಂದು 7ನೇ ಮಹಡಿಯಿಂದ ಎಸೆದ ಮಹಿಳೆ!
ಸಾಂದರ್ಭಿಕ ಚಿತ್ರ
Updated By: ಸುಷ್ಮಾ ಚಕ್ರೆ

Updated on: Feb 12, 2022 | 3:45 PM

ಮುಂಬೈ: ಮುಂಬೈನ ಅಂಬೋಲಿ ಪ್ರದೇಶದಲ್ಲಿ 54 ವರ್ಷದ ವ್ಯಕ್ತಿಯನ್ನು ಕೊಂದು (Murder) ಆತನ ಶವವನ್ನು ಅಪರ್ಟ್​ಮೆಂಟ್​ನ 7ನೇ ಮಹಡಿಯಿಂದ ಎಸೆಯಲಾಗಿದೆ. ಮೃತಪಟ್ಟ ವ್ಯಕ್ತಿಯ ಪತ್ನಿ ಮತ್ತು ಮಗ ಸೇರಿಕೊಂಡು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದ್ದು, ಅವರಿಬ್ಬರನ್ನೂ ಬಂಧಿಸಲಾಗಿದೆ. ಮೃತ ವ್ಯಕ್ತಿಯ ಹೆಂಡತಿ ಮತ್ತು ಮಗನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನಲ್ಲಿ ವಾಸವಾಗಿದ್ದ ಶಂತನುಕೃಷ್ಣ ಶೇಷಾದ್ರಿ ಎಂಬ 54 ವರ್ಷದ ವ್ಯಕ್ತಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಅವರ ಹೆಂಡತಿ ಮತ್ತು ಮಗ ಪೊಲೀಸರಿಗೆ ತಿಳಿಸಿದ್ದರು. ಅವರು ಈ ಮೊದಲು ಕೂಡ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದರು ಎಂದು ಪೊಲೀಸರಿಗೆ ಹೇಳಿದ್ದರು. ಆದರೆ, ಪೊಲೀಸರ ತನಿಖೆ ವೇಳೆ ಅವರಿಬ್ಬರೂ ಸುಳ್ಳು ಹೇಳುತ್ತಿರುವುದು ಗೊತ್ತಾಗಿತ್ತು. ಅಲ್ಲದೆ, ಮಗನ ಜೊತೆ ಸೇರಿ ಗಂಡನನ್ನು ಕೊಂದಿದ್ದ ಮಹಿಳೆ ಬಳಿಕ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೌಟುಂಬಿಕ ಕಲಹವೇ ಈ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಉಪ ಪೊಲೀಸ್ ಆಯುಕ್ತ ಮಂಜುನಾಥ ಶಿಂಗೆ ತಿಳಿಸಿದ್ದಾರೆ. ಮೃತ ವ್ಯಕ್ತಿಯ ಹೆಂಡತಿ ಮತ್ತು ಮಗನನ್ನು ಬಂಧಿಸಲಾಗಿದೆ. ಈ ಪ್ರಕರಣದ ಬಗ್ಗೆ ನಾವು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Viral News: 6 ವರ್ಷಗಳಿಂದ ಗಂಡನ ಊಟಕ್ಕೆ ಡ್ರಗ್ಸ್​ ಬೆರೆಸುತ್ತಿದ್ದ ಹೆಂಡತಿ; ಕಾರಣವೇನು ಗೊತ್ತಾ?

Shocking News: ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರನ್ನು ಕೊಲ್ಲಲು ಗಂಡ ಮಾಡಿದ ಪ್ಲಾನ್ ಅಂತಿಂಥದ್ದಲ್ಲ!