AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ನಾಲ್ಕು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ; ಬೆಂಗಳೂರಿನಲ್ಲಿ ಘಟನೆ

ಊಟ ಮಾಡಿ ಫೋಟೋ ತೆಗೆಸಿಕೊಂಡು ಬರ್ತಿನಿ ಎಂದು ಹರೀಶ್ ಹೊರಗೆ ತೆರಳಿದ್ದ. ಪೊಲೀಸ್ ಠಾಣೆಯಿಂದ ಹೊರಗೆ ಬಂದಿದ್ದ ಹರೀಶ್, ಬಾಣಸವಾಡಿ ಪೊಲೀಸ್ ಠಾಣೆಯಿಂದ ಸ್ವಲ್ಪ ದೂರಕ್ಕೆ ಹೋಗುತ್ತಿದ್ದಂತೆ ಆತನ ಮೇಲೆ ಹಲ್ಲೆ ಮಾಡಲಾಗಿದೆ.

Crime News: ನಾಲ್ಕು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ; ಬೆಂಗಳೂರಿನಲ್ಲಿ ಘಟನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 28, 2021 | 3:52 PM

Share

ಬೆಂಗಳೂರು: ತಲೆಯ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ಇಂದು (ಜುಲೈ 28) ನಡೆದಿದೆ. ಹರೀಶ್ ಎಂಬಾತನನ್ನು ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ ಹರೀಶ್ ಕೂಡ ಸಾಮಾನ್ಯನಲ್ಲ. ಆತನೂ ಬಾಣಸವಾಡಿಯ ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅರೋಪಿಯಾಗಿದ್ದಾನೆ. ಹೀಗಾಗಿ ಈ ಕೊಲೆ ಪ್ರಕರಣ ಮಹತ್ವ ಪಡೆದುಕೊಂಡಿದೆ.

ನಾಲ್ಕು ಪ್ರಕರಣಗಳಲ್ಲಿ ಆರೋಪದಲ್ಲಿರುವ ಹರೀಶ್, ಬಾಣಸವಾಡಿ ಬಿಟ್ಟು ಬಸವೇಶ್ವರ ನಗರದಲ್ಲಿ ವಾಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಈ ಮಧ್ಯೆ ಇಂದು ಬಾಣಸವಾಡಿ ಪೊಲೀಸ್ ಠಾಣೆಗೆ ಹರೀಶ್ ಅಗಮಿಸಿದ್ದ. ಹರೀಶ್​ಗೆ ಸಿಆರ್​ಪಿಸಿ 110 ಕೇಸ್ ಹಾಕಿ, ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಲು ಪೊಲೀಸರು ಠಾಣೆಗೆ ಕರೆಸಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

ಈ ವೇಳೆ, ಊಟ ಮಾಡಿ ಫೋಟೋ ತೆಗೆಸಿಕೊಂಡು ಬರ್ತಿನಿ ಎಂದು ಹರೀಶ್ ಹೊರಗೆ ತೆರಳಿದ್ದ. ಪೊಲೀಸ್ ಠಾಣೆಯಿಂದ ಹೊರಗೆ ಬಂದಿದ್ದ ಹರೀಶ್, ಬಾಣಸವಾಡಿ ಪೊಲೀಸ್ ಠಾಣೆಯಿಂದ ಸ್ವಲ್ಪ ದೂರಕ್ಕೆ ಹೋಗುತ್ತಿದ್ದಂತೆ ಆತನ ಮೇಲೆ ಹಲ್ಲೆ ಮಾಡಲಾಗಿದೆ.

ಬೈಕ್ ನಲ್ಲಿ ಹೋಗ್ತಾ ಇದ್ದಾಗ ಅಡ್ಡಗಟ್ಟಿ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಕಾರಿನಲ್ಲಿ ಬಂದು ಹರೀಶ್ ಕೊಲೆ ನಡೆಸಿ ಪರಾರಿ ಆಗಿದ್ದಾರೆ. ಘಟನಾ ಸ್ಥಳಕ್ಕೆ ಪೂರ್ವ ವಿಭಾಗ ಡಿಸಿಪಿ ಶರಣಪ್ಪ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಸವಾಡಿ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಮಾತನಾಡುವ ನೆಪದಲ್ಲಿ ಕರೆಸಿ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಯುವಕನ ಭೀಕರ ಕೊಲೆ

Crime News: 26 ವರ್ಷದ ಹಿಂದಿನ ಕೊಲೆ ಆರೋಪ ಸಾಬೀತು; ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ

(Murder near Bengaluru Banasavadi Police Station Crime News Death)

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್