Murder: ಅತ್ತೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿ ಕೊಂದ ಸೊಸೆ

Crime News Today: ಕೊಲೆ ಮಾಡಿರುವ ಪೂನಮ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಳು. ಅದಕ್ಕಾಗಿಯೇ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದಳು. ಅತ್ತೆಯನ್ನು ಕೊಲೆ ಮಾಡಿರುವ ಆಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Murder: ಅತ್ತೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿ ಕೊಂದ ಸೊಸೆ
ಪ್ರಾತಿನಿಧಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Sep 03, 2023 | 3:54 PM

ನಾಗ್ಪುರ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಮಹಿಳೆಯೊಬ್ಬರು ಮಹಾರಾಷ್ಟ್ರದ (Maharashtra) ನಾಗ್ಪುರದಲ್ಲಿರುವ ತಮ್ಮ ಮನೆಯಲ್ಲಿ 80 ವರ್ಷದ ಅತ್ತೆಯ ಮೇಲೆ ಹಲ್ಲೆ ನಡೆಸಿ, ಕತ್ತು ಸೀಳಿ ಅವರನ್ನು ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಈ ಭಯಾನಕ ಕೊಲೆ (Murder News) ನಡೆದಿದ್ದು, ಹತ್ಯೆಗೆ ಸಂಬಂಧಿಸಿದಂತೆ ಗುಡಧೆ ಲೇಔಟ್ ನಿವಾಸಿ 36 ವರ್ಷದ ಪೂನಂ ಆನಂದ ಶಿಖರವಾರ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊಲೆ ಮಾಡಿರುವ ಪೂನಮ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಳು. ಅದಕ್ಕಾಗಿಯೇ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದಳು. ಆದರೆ ಆಕೆ ಕಳೆದ ಕೆಲವು ವಾರಗಳಿಂದ ಔಷಧಿ ಸೇವಿಸುವುದನ್ನು ನಿಲ್ಲಿಸಿ, ತನ್ನ ಕುಟುಂಬದ ಸದಸ್ಯರೊಂದಿಗೆ ಜಗಳವಾಡುತ್ತಿದ್ದಳು. ಜಗಳವಾಡುವಾಗ ಕೋಪದ ಭರದಲ್ಲಿ ಆಕೆ ತನ್ನ ಅತ್ತೆ ತಾರಾದೇವಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕತ್ತು ಸೀಳಿದ್ದಾಳೆ. ಹಲವು ಬಾರಿ ಅತ್ತೆಗೆ ಇರಿದು ಕೊಲೆ ಮಾಡಿದ್ದಾಳೆ.

ಇದನ್ನೂ ಓದಿ: ಬೆಂಗಳೂರು: ನನ್ನ ಮಗಳ ವಿಚಾರಕ್ಕೆ ಬರಬೇಡ ಎಂದಿದ್ದಕ್ಕೆ ಬಾಲಕಿ ತಂದೆಯ ಕೊಲೆ

ಗಲಾಟೆ ಕೇಳಿ ಬಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿ ಮಹಿಳೆಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ