ಬೆಂಗಳೂರು: ಕ್ಷುಲಕ ಕಾರಣಕ್ಕಾಗಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಆನೇಕಲ್ನಲ್ಲಿ ನಡೆದಿದೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ SFO ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಿದ್ದರಾಜು ಮೃತ ದುರ್ದೈವಿ.
ಸಿದ್ದರಾಜು ಮೂಲತಃ ಕಲಬುರಗಿ ನಿವಾಸಿಯಾಗಿದ್ದು, SFO ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಸಿದ್ದರಾಜು ಜೊತೆ ಜಗಳ ತೆಗೆದ ಅದೇ ಕಂಪನಿಯ ನೌಕರರು ಜಿಗಣಿ ಲಿಂಕ್ ರಸ್ತೆಯಲ್ಲಿರುವ ರೂಪೇಶ್ ಹೊಟೇಲ್ ಬಳಿ ಸಿದ್ದರಾಜುಗೆ ಚಾಕುವಿನಿಂದ ಇರಿದಿದ್ದಾರೆ.
ಕೂಡಲೇ ಸಿದ್ದರಾಜುನ ಆನೆಕಲ್ ಬಳಿಯ ಸ್ಪರ್ಶ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಿದ್ದರಾಜು ಮೃತಪಟ್ಟಿದ್ದಾನೆ. ಸದ್ಯ ಪ್ರಕರಣದ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದು, ಹೆಬ್ಬಗೋಡಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.