Murder: ತವರು ಮನೆಗೆ ಹೋಗುತ್ತೇನೆಂದು ಹಠ ಮಾಡಿದ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!

Crime News: ಮದುವೆಯಾದಾಗಿನಿಂದ ಆಗಾಗ ತವರು ಮನೆಗೆ ಹೋಗುತ್ತಿದ್ದ ಮಹಿಳೆಯ ಮೇಲೆ ಆಕೆಯ ಗಂಡ ಕೋಪಗೊಂಡಿದ್ದ. ಇದೇ ವಿಷಯಕ್ಕೆ ಇಬ್ಬರ ನಡುವೆ ಜಗಳವಾಗುತ್ತಿತ್ತು. ನಿನ್ನೆ ಬೆಳಗ್ಗೆ ಅಪ್ಪ-ಅಮ್ಮನ ಮನೆಗೆ ಹೋಗುತ್ತೇನೆ ಎಂದ ಹೆಂಡತಿಯನ್ನು ಗಂಡ ಕೊಂದಿದ್ದಾನೆ.

Murder: ತವರು ಮನೆಗೆ ಹೋಗುತ್ತೇನೆಂದು ಹಠ ಮಾಡಿದ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 22, 2021 | 7:57 PM

ನವದೆಹಲಿ: ಕೆಲವೊಮ್ಮೆ ಸಣ್ಣಪುಟ್ಟ ವಿಷಯಗಳಿಗೆ ಹೆಣಗಳೇ ಉರುಳಿ ಬಿಡುತ್ತವೆ. ಉತ್ತರ ಪ್ರದೇಶದ ( ಸಹರಾನ್‌ಪುರದ ಟೆಲಿಪುರಾ ಪ್ರದೇಶದಲ್ಲಿರುವ ಮಹಿಳೆಯೊಬ್ಬರು ತನ್ನ ತವರುಮನೆಗೆ ಹೋಗಬೇಕೆಂದು ಒತ್ತಾಯ ಮಾಡಿದ್ದರಿಂದ 24 ವರ್ಷದ ವ್ಯಕ್ತಿ ತನ್ನ ಹೆಂಡತಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. 24 ವರ್ಷದ ಆರೋಪಿ ಕಲೀಂ ಅಲಿ ತನ್ನ 22 ವರ್ಷದ ಶಮಾ ಎಂಬ ಯುವತಿಯನ್ನು ಕೊಲೆ ಮಾಡಿದಾತ.

ಟೈಮ್ಸ್ ಆಫ್ ಇಂಡಿಯಾದಲ್ಲಿ ಪ್ರಕಟವಾದ ವರದಿ ಪ್ರಕಾರ, ಆರೋಪಿಯನ್ನು ಕಲೀಂ ಅಲಿ ಎಂದು ಗುರುತಿಸಲಾಗಿದೆ. ಆತ ಶಮಾಳನ್ನು ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ. ಕೆಲೀಮ್ ಅಲಿ ತನ್ನ ಹೆಂಡತಿ ಆಗಾಗ ತನ್ನ ತಂದೆ-ತಾಯಿಯ ಮನೆಗೆ ಆಗಾಗ ಭೇಟಿ ನೀಡುತ್ತಿದ್ದರಿಂದ ಹತಾಶೆಗೊಂಡಿದ್ದ. ಶಮಾಳ ಸಹೋದರರು ಕೂಡ ಕೆಲೀಮ್‌ನೊಂದಿಗೆ ಆಕೆಯ ಪೋಷಕರ ಮನೆಗೆ ಭೇಟಿ ನೀಡಲು ಅವಕಾಶ ನೀಡುವ ಬಗ್ಗೆ ತೀವ್ರ ವಾಗ್ವಾದ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಲೀಂ ಅವರ ನೆರೆಹೊರೆಯವರು ಮಾಹಿತಿ ನೀಡಿದ ಪ್ರಕಾರ, ಮಂಗಳವಾರ ಬೆಳಿಗ್ಗೆ ಮನೆಯೊಳಗೆ ಶಮಾ ಅವರ ಅಳು ಮತ್ತು ಕಿರುಚಾಟವನ್ನು ಕೇಳಿದಾಗ ಅಕ್ಕಪಕ್ಕದವರು ಬಾಗಿಲು ಬಡಿದಿದ್ದಾರೆ. ಅವರು ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಸ್ವಲ್ಪ ಸಮಯದ ನಂತರ, ನೆರೆಹೊರೆಯವರು ಕೆಲೀಮ್ ಮನೆಯಿಂದ ಹೊರಬರುವುದನ್ನು ನೋಡಿದರು.

ಪ್ರತ್ಯಕ್ಷದರ್ಶಿಗಳ ಪ್ರಕಾರ, ತನ್ನ ಮನೆಯಿಂದ ಹೊರಡುವಾಗ ಕಲೀಂ, ಇನ್ನು ನಿನ್ನೆ ತವರು ಮನೆಯಲ್ಲಿ ಇರು ಎಂದು ಕಿರುಚಾಡಿದ್ದಾರೆ. ಈ ಬಗ್ಗೆ ಸಹರಾನ್‌ಪುರ್ ಎಸ್‌ಪಿ ರಾಜೇಶ್ ಕುಮಾರ್ ಹೇಳಿಕೆ ನೀಡಿದ್ದು, ಕಲೀಂ ಅವರ ನೆರೆಹೊರೆಯವರು ಮನೆಯೊಳಗೆ ಮಹಿಳೆ ಕಿರುಚುತ್ತಿರುವುದನ್ನು ಕೇಳಿದ್ದಾರೆ. ಅವರು ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಕಲೀಂ ತನ್ನ ಮನೆಯಿಂದ ಹೊರಗೆ ಹೋಗುವುದನ್ನು ನೋಡಿದ ನಂತರ ಅವರು ಪೊಲೀಸರಿಗೆ ಕರೆ ಮಾಡಿದರು ಎಂದಿದ್ದಾರೆ.

ಇದನ್ನೂ ಓದಿ: ಮಂಡ್ಯ: ಅಪ್ರಾಪ್ತ ಬಾಲಕಿಯ ಸಾವಿನ ಸುತ್ತ ಅನುಮಾನದ ಹುತ್ತ; ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ಪೋಷಕರ ಆರೋಪ

Murder: ಸ್ನಾನಕ್ಕೆ ಹೋದ ಗಂಡನಿಗೆ ಟವೆಲ್ ಕೊಡಲು ತಡವಾಗಿದ್ದಕ್ಕೆ ಹೆಂಡತಿಯ ಬರ್ಬರ ಹತ್ಯೆ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್