AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ‌ ಕಿರುಕುಳ‌ ನೀಡಿದ ಆರೋಪ; ಮುರುಘಾ ಶ್ರೀಗಳ ವಿರುದ್ಧ ಎಫ್​ಐಆರ್ ದಾಖಲು

ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಗಳ ನೀಡಿದ ಆರೋಪ ಮುರುಘಾ ಶ್ರೀಗಳ ವಿರುದ್ಧ ಕೇಳಿಬಂದಿದ್ದು, ತಡರಾತ್ರಿ ಎಫ್​ಐಆರ್ ದಾಖಲಾಗಿದೆ.

ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ‌ ಕಿರುಕುಳ‌ ನೀಡಿದ ಆರೋಪ; ಮುರುಘಾ ಶ್ರೀಗಳ ವಿರುದ್ಧ ಎಫ್​ಐಆರ್ ದಾಖಲು
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು
TV9 Web
| Updated By: Rakesh Nayak Manchi|

Updated on:Oct 14, 2022 | 9:46 AM

Share

ಮೈಸೂರು: ಲೈಂಗಿಕ ಕಿರುಕುಳ ಆರೋಪದ ಮೇಲೆ ಜೈಲಿನಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇದೀಗ ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಅಂತಹದ್ದೇ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮಠದಲ್ಲಿ‌ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಶ್ರೀಗಳ ವಿರುದ್ಧ ನಿನ್ನೆ ತಡ ರಾತ್ರಿ ಮೈಸೂರಿನ ನಜರಬಾದ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅದರಂತೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದು, ಬಳಿಕ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಯಿತು. ಸದ್ಯ ಜೈಲಿನಲ್ಲಿರುವ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ (POCSO case) ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರುಗಳು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಶ್ರೀಗಳನ್ನು ಬಂಧಿಸಿದ ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 am, Fri, 14 October 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!