ಮುಜಾಫರ್‌ಪುರದ ವಿದ್ಯಾರ್ಥಿಗೆ ಥಳಿಸಿ, ಬಲವಂತವಾಗಿ ಎಂಜಲು ನೆಕ್ಕಿಸಿದ ವಿಡಿಯೋ ವೈರಲ್

ಬಿಹಾರದ ಮುಜಾಫರ್‌ಪುರದಲ್ಲಿ ಮನಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಎಂಎಸ್‌ಕೆಬಿ ಶಾಲೆಯ ಮೈದಾನದಲ್ಲಿ ವಿದ್ಯಾರ್ಥಿಯೊಬ್ಬನನ್ನು ಅಮಾನುಷವಾಗಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೈರಲ್ ವಿಡಿಯೋದಲ್ಲಿ ಮೂರ್ನಾಲ್ಕು ಹುಡುಗರು ಇನ್ನೊಬ್ಬ ಹುಡುಗನನ್ನು ಬೆಲ್ಟ್ ಮತ್ತು ದೊಣ್ಣೆಗಳಿಂದ ಹೊಡೆಯುತ್ತಿರುವುದು ಕಂಡುಬಂದಿದೆ. ನಂತರ ಆತನಿಗೆ ಕಿವಿ ಹಿಡಿದುಕೊಂಡು ಬಸ್ಕಿ ಮಾಡುವಂತೆಯೂ ಒತ್ತಾಯಿಸುತ್ತಿದ್ದಾರೆ. ಬಳಿಕ ಆತನ ಬಳಿ ಎಂಜಲು ನೆಕ್ಕಿಸಿದ್ದಾರೆ.

ಮುಜಾಫರ್‌ಪುರದ ವಿದ್ಯಾರ್ಥಿಗೆ ಥಳಿಸಿ, ಬಲವಂತವಾಗಿ ಎಂಜಲು ನೆಕ್ಕಿಸಿದ ವಿಡಿಯೋ ವೈರಲ್
Bihar video
Follow us
ಸುಷ್ಮಾ ಚಕ್ರೆ
|

Updated on:Dec 22, 2024 | 5:47 PM

ಮುಜಾಫರ್​ನಗರ: ಬಿಹಾರದ ಕಾಲೇಜು ಕ್ಯಾಂಪಸ್‌ನಲ್ಲಿ ಮೂವರು ಪುಂಡರ ಗುಂಪೊಂದು ವ್ಯಕ್ತಿಯೊಬ್ಬನಿಗೆ ಚಿತ್ರಹಿಂಸೆ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಅವರು ಆ ಯುವಕನನ್ನು ಕೋಲು ಮತ್ತು ಬೆಲ್ಟ್‌ನಿಂದ ಥಳಿಸಿದ್ದಾರೆ. ಅವನ ಕಿವಿಗಳನ್ನು ಹಿಡಿದುಕೊಂಡು ಬಸ್ಕಿ ಹೊಡೆಯುವಂತೆ ಮಾಡಿದ್ದಾರೆ. ಮುಜಾಫರ್‌ಪುರದ ಎಂಎಸ್‌ಕೆಬಿ ಕಾಲೇಜಿನಲ್ಲಿ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ.

ಈ ವಿಡಿಯೋ ವೈರಲ್ ಆದ ನಂತರ ಆ ಬಾಲಕನ ಕುಟುಂಬದ ಸದಸ್ಯರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಬಾಲಕನನ್ನು ಹೊಡೆಯುವ ಮೊದಲು ನೆಲದ ಮೇಲೆ ಉಗುಳಿದ ಎಂಜಲು ನೆಕ್ಕುವಂತೆ ಬಲವಂತಪಡಿಸಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ನಂತರ ಹಲ್ಲೆಯ ವಿಡಿಯೋ ಆನ್‌ಲೈನ್‌ನಲ್ಲಿ ಹರಿದಾಡಿತ್ತು. ಈ ವಿಡಿಯೋ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ನಗರದ ಬನಾರಸ್ ಬ್ಯಾಂಕ್ ಚೌಕ್ ಪ್ರದೇಶದ ಮೂವರು ಶಂಕಿತರು ಮತ್ತು ಐವರು ಅಪರಿಚಿತ ಹುಡುಗರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: Viral : ಪ್ರವಾಸಿಗರ ಮುಂದೆಯೇ ಜಿಂಕೆಯನ್ನು ಬೇಟೆಯಾಡಿದ ಹುಲಿರಾಯ, ವಿಡಿಯೋ ವೈರಲ್

ಕುಟುಂಬದವರ ಹೇಳಿಕೆ ಆಧರಿಸಿ ಪೊಲೀಸರು ಎಂಟು ಬಾಲಕರನ್ನು ಆರೋಪಿಗಳೆಂದು ಹೆಸರಿಸಿದ್ದು, ತನಿಖೆ ಆರಂಭಿಸಿದ್ದಾರೆ. ಡಿಸೆಂಬರ್ 16ರಂದು ತನ್ನ ಮಗ ಮನೆಗೆಲಸದ ನಿಮಿತ್ತ ಎಂಎಸ್‌ಕೆಬಿ ಕಾಲೇಜು ಬಳಿ ಹೋಗಿದ್ದ ಎಂದು ಸಂತ್ರಸ್ತೆಯ ತಾಯಿ ಫರ್ಜಾನಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆಯ ಸಮಯದಲ್ಲಿ ತನ್ನ ಮಗನಿಗೆ ಬಸ್ಕಿ ಹೊಡೆಸಲು ಒತ್ತಾಯಿಸಲಾಯಿತು. ನಂತರ ನೆಲದ ಮೇಲೆ ಉಗುಳಿದ್ದನ್ನು ನೆಕ್ಕಲು ಒತ್ತಾಯಿಸಲಾಯಿತು ಎಂದು ತಾಯಿ ಆರೋಪಿಸಿದ್ದಾರೆ.

ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಮಗನಿಗೆ 2 ಸಾವಿರ ರೂ. ನೀಡಿದ್ದು, ಹಲ್ಲೆ ವೇಳೆ ಕದ್ದೊಯ್ದಿರುವುದಾಗಿ ಸಂತ್ರಸ್ತೆಯ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆ ಪ್ರಭಾರಿ ಶರತ್ ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Sun, 22 December 24

ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು