ಮೈಸೂರು: ಮನೆಯಲ್ಲಿ ನೇಣು ಬಿಗಿದುಕೊಂಡು ಸಾಫ್ಟ್​​ವೇರ್​ ಇಂಜಿನಿಯರ್​​ ಆತ್ಮಹತ್ಯೆ

ಮನೆಯಲ್ಲಿ ನೇಣು ಬಿಗಿದುಕೊಂಡು ಸಾಫ್ಟ್​​ವೇರ್​ ಇಂಜಿನಿಯರ್ ಪ್ರತಾಪ್​(38) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ರೂಪಾ ನಗರದಲ್ಲಿ ನಡೆದಿದೆ.

ಮೈಸೂರು: ಮನೆಯಲ್ಲಿ ನೇಣು ಬಿಗಿದುಕೊಂಡು ಸಾಫ್ಟ್​​ವೇರ್​ ಇಂಜಿನಿಯರ್​​ ಆತ್ಮಹತ್ಯೆ
ಮೈಸೂರು ಮನೆಯಲ್ಲಿ ನೇಣು ಬಿಗಿದುಕೊಂಡು ಸಾಫ್ಟ್​​ವೇರ್​ ಇಂಜಿನಿಯರ್​​ ಆತ್ಮಹತ್ಯೆ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 03, 2023 | 9:02 AM

ಮೈಸೂರು: ಮನೆಯಲ್ಲಿ ನೇಣು ಬಿಗಿದುಕೊಂಡು ಸಾಫ್ಟ್​​ವೇರ್​ ಇಂಜಿನಿಯರ್(Software Engineer) ಪ್ರತಾಪ್​(38) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ರೂಪಾ ನಗರದಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿ ಆಗಿದ್ದ ಪ್ರತಾಪ್, ಸಧ್ಯ​ ವರ್ಕ್ ಫ್ರಮ್​ ಹೋಮ್​​(Work From Home) ಮೂಲಕ ಕೆಲಸ ಮಾಡುತ್ತಿದ್ದರು. ಇನ್ನು 38 ವರ್ಷವಾದರೂ ಪ್ರತಾಪ್​​ಗೆ ಮದುವೆಯಾಗಿರಲಿಲ್ಲ. ಜೀವನದಲ್ಲಿ ಜಿಗುಪ್ಸೆ ಬಂದು ಟೆಕ್ಕಿ ನೇಣಿಗೆ ಶರಣಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಸಾಫ್ಟ್​​ವೇರ್​ ಇಂಜಿನಿಯರ್ ಪ್ರತಾಪ್ ತಂದೆ ಜೊತೆ ಮೈಸೂರಿನಲ್ಲಿ ವಾಸವಿದ್ದು, ಕೊರೊನಾ ಬಂದಾಗಿನಿಂದ ವರ್ಕ್ ಫ್ರಮ್​ ಹೋಮ್​ನಲ್ಲಿ ಕೆಲಸ ಮಾಡುತ್ತಿದ್ದರು. ಮತ್ತು ಇತನ ಸಹೋದರಿ ಅಮೆರಿಕದಲ್ಲಿ ನೆಲೆಸಿದ್ದಾರೆ. ಇದೀಗ ಪ್ರತಾಪ್​ ಆತ್ಮಹತ್ಯೆ ಮಾಡಿಕೊಂಡಿದ್ದು, ಮೈಸೂರಿನ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನ: ಹೊಯ್ಸಳ ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು ಮಹಿಳೆಯ ಜೀವ

ಬೆಂಗಳೂರು: ಪತ್ನಿ, ಮಕ್ಕಳಿಬ್ಬರಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಬೆಂಗಳೂರು: ಪತ್ನಿ, ಇಬ್ಬರು ಪುತ್ರಿಯರಿಗೆ ವಿಷವುಣಿಸಿ ಪತಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಗರದ ಕೋಣನಕುಂಟೆಯ ಠಾಣಾ ವ್ಯಾಪ್ತಿಯ ವಡ್ಡರಪಾಳ್ಯ ಮನೆಯೊಂದರಲ್ಲಿ ನಡೆದಿದೆ. ಪತ್ನಿ ವಿಜಯಾ(28), ಪುತ್ರಿಯರಾದ ನಿಶಾ(7), ದೀಕ್ಷಾ(5) ಮೃತ ದುರ್ದೈವಿಗಳು. ಪತಿ ನಾಗೇಂದ್ರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಊಟದಲ್ಲಿ ವಿಷವುಣಿಸಿ ಹತ್ಯೆ ಶಂಕೆ ವ್ಯಕ್ತವಾಗಿದೆ. ಇನ್ನು ಪತಿ ನಾಗೇಂದ್ರ ಕ್ಯಾನ್ಸರ್​ನಿಂದ ಬಳತ್ತಿದ್ದು, ಬ್ಲೇಡ್​ನಿಂದ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗುತ್ತಿದೆ. 2014ರಲ್ಲಿ ದಂಪತಿ ಮದುವೆಯಾಗಿದ್ದರು. ನಾಗೇಂದ್ರನಿಗೆ ವಿಪರೀತ ಕುಡಿದ ಚಟ ಇತ್ತು. ಪತ್ನಿ ವಿಜಯ ಮೆಡಿಕಲ್​ನಲ್ಲಿ ಕೆಲಸ ಮಾಡುತ್ತಿದ್ದರು. ವಿಜಯ ಆರ್ಥಿಕವಾಗಿ ಕುಟುಂಬಕ್ಕೆ ಆಧಾರವಾಗಿದ್ದರು. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಕಿಮ್ಸ್​ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆಕಸ್ಮಿಕ ಬೆಂಕಿ ತಗುಲಿ ಎರಡು ಗುಡಿಸಲುಗಳು ಸಂಪೂರ್ಣ ಭಸ್ಮ

ಚಿಕ್ಕಮಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿದ ಎರಡು ಗುಡಿಸಲುಗಳು ಸಂಪೂರ್ಣ ಭಸ್ಮವಾದ ಘಟನೆ ಕಡೂರು ತಾಲೂಕಿನ ದೊಣ್ಣೆಕೋರಳಿ ಗ್ರಾಮದ ಭೋವಿಕಾಲೋನಿಯಲ್ಲಿ ನಡೆದಿದೆ. ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ ಈರಬೋವಿ,ಆನಂದ್​ ಎಂಬುವವರಿಗೆ ಸೇರಿದ ಗುಡಿಸಲು ಹೊತ್ತಿ ಉರಿದಿದ್ದು, ದಾಖಲಾತಿ, ಬಟ್ಟೆ, ಪಾತ್ರೆಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಯಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:00 am, Fri, 3 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ