ಜಗಳ ಬಿಡಿಸಲು ಬಂದ ಪಕ್ಕದ ಮನೆ ಮಹಿಳೆಯ ಕೊಲೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಮೈಸೂರು ಕೋರ್ಟ್
ಜಗಳ ಬಿಡಿಸಲು ಬಂದ ಪಕ್ಕದ ಮನೆಯ ಮಹಿಳೆಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಆರೋಪಿಗೆ ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. 2020ರ ಅಕ್ಟೋಬರ್ 17 ರಂದು ನಡೆದ ಕೊಲೆ ಪ್ರಕರಣ ಇದಾಗಿದ್ದು, ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮೈಸೂರು, ಜ.24: ಜಗಳ ಬಿಡಿಸಲು ಬಂದ ಪಕ್ಕದ ಮನೆಯ ಮಹಿಳೆಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಆರೋಪಿಗೆ ಮೈಸೂರು (Mysuru) ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಲಷ್ಕರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ (Murder) ಪ್ರಕರಣ ಆರೋಪಿ ಆಲ್ವಿನ್ ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿಯಾಗಿದ್ದು, 50 ಸಾವಿರ ರೂಪಾಯಿ ದಂಡ ಕೂಡ ವಿಧಿಸಲಾಗಿದೆ.
ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಅಪರಾಧಿ ಆಲ್ವಿನ್ 2020ರ ಅಕ್ಟೋಬರ್ 17 ರಂದು ತನ್ನ ಪತ್ನಿಯ ಜೊತೆ ಜಗಳವಾಡುತ್ತಿದ್ದನು. ಈ ವೇಳೆ ಪಕ್ಕದ ಮನೆಯ ಮಹಿಳೆ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ್ದರು. ಇದರಿಂದ ಇನ್ನಷ್ಟು ಆಕ್ರೋಶಗೊಂಡ ಆಲ್ವಿನ್, ಆ ಮಹಿಳೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು.
ಇದನ್ನೂ ಓದಿ: ಜಮೀನಿಗೆ ನೀರು ಹಾಯಿಸುವ ಗಲಾಟೆ ಅಣ್ಣನ ಕೊಲೆಯಲ್ಲಿ ಅಂತ್ಯ, 60 ವರ್ಷದ ಸಂಬಂಧಕ್ಕೆ ದಾರುಣ ಅಂತ್ಯ
ಪ್ರಕರಣ ಸಂಬಂಧ ಠಾಣಾ ಇನ್ಸ್ಪೆಕ್ಟರ್ ಸುರೇಶ್ ಅವರು, ತನಿಖೆ ನಡೆಸಿ ಸಾಕ್ಷಿ ಸಮೇತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಪಿಪಿಗಳಾದ ಹೆಚ್.ಇ. ಚಿನ್ನಪ್ಪ ಮತ್ತು ಶ್ರೀಮತಿ ರಂಜನಾರಾವ್ ಅವರು ವಾದ ಮಂಡಿಸಿದರು.
ಮೈಸೂರಿನಲ್ಲಿ ಗಾಂಜಾ ಮಾರಾಟ; ಇಬ್ಬರ ಬಂಧನ
ಗಾಂಜಾ ಮಾರಾಟ ಆರೋಪ ಸಂಬಂಧ ಮೈಸೂರಿನ ಕಾವೇರಿನಗರದ ಗೋದಾಮಿನ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹದೇವಪುರ ಮುಖ್ಯರಸ್ತೆಯ ಕಾವೇರಿನಗರದಲ್ಲಿರುವ ಗೋದಾಮಿನಲ್ಲಿ ಗಾಂಜಾ ಸಂಗ್ರಹಣೆ ಮಾಡಿಟ್ಟಿದ್ದ ವಿಚಾರ ತಿಳಿದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.
ದಾಳಿ ವೇಳೆ ಸಿಸಿಬಿ ಪೊಲೀಸರು 20.19 ಲಕ್ಷ ಮೌಲ್ಯದ 57 ಕೆ.ಜಿ. 700 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ. ಆಸೀಮ್, ನದೀಮ್ ಬಂಧಿತ ಆರೋಪಿಗಳಾಗಿದ್ದು, ಮತ್ತೊಬ್ಬ ಆರೋಪಿ ಫರ್ಜು ಪರಾರಿಯಾಗಿದ್ದಾನೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ