ಮೈಸೂರು: ಈಜು ಬಾರದೆ ಕಾಲುವೆಯಲ್ಲಿ ಮುಳುಗಿ ವೈದ್ಯಕೀಯ ವಿದ್ಯಾರ್ಥಿ ಸಾವು
ಕಾಲುವೆಯಲ್ಲಿ ಮುಳುಗಿ ಬೆಂಗಳೂರಿನ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ಎಚ್.ಡಿ. ಕೋಟೆ ತಾಲೂಕಿನ ಬಿದರಹಳ್ಳಿ ಗ್ರಾಮದ ಎಡದಂಡೆ ನಾಲೆಯಲ್ಲಿ ನಡೆದಿದೆ. ಈಜಲು ಬಾರದೆ ಮೃತಪಟ್ಟಿದ್ದು, ಸದ್ಯ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮೈಸೂರು, ಅಕ್ಟೋಬರ್ 30: ಕಾಲುವೆಯಲ್ಲಿ ಮುಳುಗಿ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿರುವಂತಹ (death) ಘಟನೆ ಎಚ್.ಡಿ. ಕೋಟೆ ತಾಲೂಕಿನ ಬಿದರಹಳ್ಳಿ ಗ್ರಾಮದ ಎಡದಂಡೆ ನಾಲೆಯಲ್ಲಿ ನಡೆದಿದೆ. ಬೆಂಗಳೂರಿನ ನಿವಾಸಿ ಶೈಲೇಂದ್ರ ಎಂಬುವರ ಪುತ್ರ ಕಿಶನ್ (21) ಮೃತ ವೈದ್ಯಕೀಯ ವಿದ್ಯಾರ್ಥಿ. ಮೃತ ಕಿಶನ್ ಬೆಂಗಳೂರಿನ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ಮೆಡಿಕಲ್ ವಿದ್ಯಾರ್ಥಿ. ಸರಗೂರಿನ ವಿವೇಕಾನಂದ ಸ್ಮಾರಕ ಆಸ್ಪತ್ರೆಗೆ ಆಗಮಿಸಿದ್ದು, ಎಡದಂಡೆ ನಾಲೆಗೆ ಈಜಲು ತೆರಳಿದ್ದಾರೆ. ಈ ವೇಳೆ ಈಜಲು ಬಾರದ ಕಿಶನ್ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಚಿರತೆ ದಾಳಿ: ಮೇಕೆ ಬಲಿ
ಮೈಸೂರು ಜಿಲ್ಲೆಯಲ್ಲಿ ಚಿರತೆ ದಾಳಿ ಮುಂದುವರೆದಿದ್ದು ಮೇಕೆ ಬಲಿ ಪಡೆದುಕೊಂಡಿದೆ. ಹುಣಸೂರು ತಾಲ್ಲೂಕು ಹನಗೋಡ ಗ್ರಾಮದಲ್ಲಿ ಘಟನೆ ನಡೆದಿದೆ. ಕೊಟ್ಟಿಗೆಗೆ ನುಗ್ಗಿದ ಚಿರತೆ ರೈತ ಪಾಪಯ್ಯ ಎಂಬುವವರಿಗೆ ಸೇರಿದ ಮೇಕೆಯನ್ನು ಹೊತ್ತೊಯ್ದಿದೆ. ಅರ್ಧ ತಿಂದು ಜಮೀನಿನಲ್ಲಿ ಮೇಕೆ ಮೃತದೇಹ ಬಿಟ್ಟು ಹೋಗಿದೆ. ಪದೇ ಪದೇ ಚಿರತೆ ದಾಳಿ ಮಾಡಿತ್ತಿದ್ದು, ಚಿರತೆ ಸೆರೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವಿಶಾಲವಾದ ತೋಟದಲ್ಲಿ ಮೃತ ದೇಹ ಪತ್ತೆ
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಮಂಟನಕುರ್ಚಿ ಗ್ರಾಮದ ಅನುಸೂಯಮ್ಮ ಎಂಬುವರ ತೋಟದಲ್ಲಿ ನಿನ್ನೆ ಕೊಲೆಯಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತ ದೇಹವನ್ನು ಪೊಲೀಸರು ಪರಿಶೀಲನೆ ನಡೆಸಿ ಬಳಿಕ ಶ್ವಾನದಳ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ ಬಳಿಕ ಇದೊಂದು ಸುಮಾರು 5೦ ವರ್ಷ ವಯಸ್ಸುಳ್ಳು ಪುರುಷನ ಮೃತ ದೇಹ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಹಣ ಲಪಟಾಯಿಸುತ್ತಿದ್ದ ಮೂವರ ಸೆರೆ
ಅಲ್ಲದೆ ಮೃತ ದೇಹದ ಎದೆ ಭಾಗ ಹಾಗೂ ತೋಡೆ ಭಾಗದಲ್ಲಿ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಗುರುತುಗಳು ಪತ್ತೆಯಾಗಿದ್ದು, ಮೃತ ದೇಹದ ಮೇಲೆ ಬಟ್ಟೆಗಳು ಇಲ್ಲದಿರುವುದು ಸಾಕ್ಷ ನಾಶ ಪಡಿಸಲು ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಗಲಾಟೆ ವೇಳೆ ಸೀರೆ ಹಿಡಿದು ವ್ಯಕ್ತಿ ಎಳೆದಾಡಿದ ಆರೋಪ: ಮನನೊಂದು ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ
ಸದ್ಯ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪಾರ್ಟಿ ವೇಳೆ ಗಲಾಟೆ ಹಾಗೂ ಯಾವುದು ಅನೈತಿಕ ಸಂಬಂಧ ಕೊಲೆ ಆಗಿರಬಹುದು ಎಂದು ಗ್ರಾಮಸ್ಥರಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸುತ್ತ ಮುತ್ತಲ ಠಾಣೆಗಳಲ್ಲಿ ಮಿಸಿಂಗ್ ಆದವರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು ಮೃತ ದೇಹದ ಗುರುತು ಪತ್ತೆಗೆ ಹರಸಾಹಸ ಪಡಿತ್ತಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.