ಮೈಸೂರು, ಡಿಸೆಂಬರ್ 29: ಹನಿಟ್ರ್ಯಾಪ್ (Honey Trap) ಮೂಲಕ ಅಮಾಯಕರನ್ನು ತಮ್ಮ ಬಲೆ ಬೀಳಿಸಿಕೊಳ್ಳುತ್ತಿದ್ದ ಗ್ಯಾಂಗ್ ಅನ್ನು ಮೈಸೂರು ಗ್ರಾಮಾಂತರ (Mysore Rural) ಪೊಲೀಸರು ಬಂಧಿಸಿದ್ದಾರೆ. ಓರ್ವ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಫಜಲುಲ್ಲಾ ರೆಹಮಾನ್, ರಿಜ್ವಾನ್, ಮೋನಾ ಬಂಧಿತ ಆರೋಪಿಗಳು. ಉದ್ಯಮಿ ಸುನ್ನಿ ಎಂಬುವರು ಚೆನ್ನೈನಿಂದ ಮೈಸೂರು ಮಾರ್ಗವಾಗಿ ಕೇರಳಕ್ಕೆ ಹೋಗುತ್ತಿದ್ದರು. ದಾರಿ ಮಧ್ಯೆ ಸುನ್ನಿ ಅವರಿಗೆ ಆರೋಪಿಗಳು ಪರಿಚಯವಾಗಿದ್ದಾರೆ. ಬಳಿಕ ಆರೋಪಿಗಳು ಮಾನಂದವಾಡಿ ರಸ್ತೆಯಲ್ಲಿ ಸುನ್ನಿ ಅವರ ಕಾರು ಅಡ್ಡಗಟ್ಟಿದ್ದಾರೆ.
ನಂತರ ಆರೋಪಿಗಳು ಸುನ್ನಿ ಅವರನ್ನು ಬಲವಂತವಾಗಿ ಮನೆಯೊಂದಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಮೋನ ಜೊತೆ ನಗ್ನವಾಗಿ ಮಲಗಿಸಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಿಸಿಕೊಂಡಿದ್ದಾರೆ. ನಂತರ ಫೋಟೋ ಹಾಗೂ ವಿಡಿಯೋಗಳನ್ನು ಸುನ್ನಿ ಅವರಿಗೆ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಾರೆ.
ನಮಗೆ 10 ಲಕ್ಷ ರೂ. ನೀಡು, ಇಲ್ಲವಾದರೇ ಈ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಆಗ ಉದ್ಯಮಿ ಸುನ್ನಿ ಅವರು 5 ಲಕ್ಷ ರೂ. ನೀಡಿದ್ದಾರೆ. ಬಳಿಕ ಆರೋಪಿಗಳು ಸುನ್ನಿ ಅವರು ಧರಿಸಿದ್ದ ಚಿನ್ನದ ಉಂಗುರ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಉದ್ಯಮಿ: ದಂಪತಿ ಸಹಿತ ನಾಲ್ವರನ್ನು ಬಂಧಿಸಿದ ಸಿಸಿಬಿ
ಈ ಬಗ್ಗೆ ಸುನ್ನಿ ಅವರು ಕೇರಳದ ತಿರುನೆಲ್ಲಿ ಪೊಲೀಸ್ ಠಾಣೆಯಲ್ಲಿ ದೂಉ ದಾಖಲಸಿದರು. ಕೃತ್ಯ ಮೈಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿನ್ನೆಲೆಯಲ್ಲಿ ಪ್ರಕರಣ ಇಲ್ಲಿಗೆ ವರ್ಗಾವಣೆಯಾಗಿತ್ತು. ಪ್ರಕರಣ ವರ್ಗಾವಣೆಯಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಚಾರಣೆ ವೇಳೆ ಇದೇ ತಂಡ ಮಡಿಕೇರಿಯಲ್ಲೂ ಇಂತಹದ್ದೇ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಂಧಿತರಿಂದ 50 ಸಾವಿರ ನಗದು ಮತ್ತು ಕೃತ್ಯಕ್ಕೆ ಬಳಸಿದ ಇನೋವಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ