ಮೈಸೂರು: ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯ ಹತ್ಯೆ ಮಾಡಿದ ಪತಿ, ಆಸ್ತಿಗಾಗಿ ಕೃತ್ಯ

| Updated By: Ganapathi Sharma

Updated on: Feb 19, 2024 | 8:11 AM

Mysuru Crime News: ಮೊದಲ ಹೆಂಡತಿಯ ಮಕ್ಕಳಿಗೆ ಎರಡನೇ ಪತ್ನಿಯ ಹೆಸರಿನಲ್ಲಿದ್ದ ಮನೆ ಕೊಡಿಸುವುದಕ್ಕೆಂದು ಆಕೆಯನ್ನೇ ವ್ಯಕ್ತಿಯೊಬ್ಬ ಮಕ್ಕಳ ಜತೆ ಸೇರಿ ಹತ್ಯೆ ಮಾಡಿದ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಸದ್ಯ ಮೃತ ಮಹಿಳೆಯ ಸಂಬಂಧಿಕ ನೀಡಿದ ದೂರಿನ ಮೇರೆಗೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೈಸೂರು: ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯ ಹತ್ಯೆ ಮಾಡಿದ ಪತಿ, ಆಸ್ತಿಗಾಗಿ ಕೃತ್ಯ
ಸಾಂದರ್ಭಿಕ ಚಿತ್ರ
Follow us on

ಮೈಸೂರು, ಫೆಬ್ರವರಿ 19: ಆಸ್ತಿಗಾಗಿ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯನ್ನು ವ್ಯಕ್ತಿಯೊಬ್ಬ ಹತ್ಯೆ (Murder) ಮಾಡಿದ ದಾರುಣ ಘಟನೆ ಮೈಸೂರಿನ (Mysuru) ನಾಯ್ಡುನಗರದಲ್ಲಿ ನಡೆದಿದೆ. ಇದೀಗ ಕೃತ್ಯಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರನ್ನು ಅಖಿಲಾ ಭಾನು (46) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಆರೋಪಿ ಪತಿ ಅಬ್ಬ ಥಾಯೂಬ್, ಆತನ ಮೊದಲನೇ ಹೆಂಡತಿಯ ಮಕ್ಕಳಾದ ಮೊಹಮದ್ ಆಸಿಫ್, ಮೊಹಮದ್ ಥೋಸಿಫ್ ಹಾಗೂ ಮೊಹಮದ್ ಹೈದರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ಅಬ್ಬ ಥಾಯೂಬ್ ಸಿಲ್ಕ್ ಫ್ಯಾಕ್ಟರಿಯಲ್ಲಿ ನೌಕರನಾಗಿದ್ದ. 2013 ರಲ್ಲಿ ಅಖಿಲಾ ಭಾನುರನ್ನು ಎರಡನೇ ವಿವಾಹವಾಗಿದ್ದ. ಆತನಿಗೆ ಮೊದಲ ಹೆಂಡತಿಯಲ್ಲಿ ನಾಲ್ವರು ಮಕ್ಕಳಿದ್ದರು. ಎರಡನೇ ಪತ್ನಿ ಅಖಿಲಾ ಭಾನು ಕ್ಯಾನ್ಸರ್​​ನಿಂದ ಬಳಲುತ್ತಿದ್ದು ಗುಣಮುಖರಾಗಿದ್ದರು. ಆಕೆಗೆ ಮಕ್ಕಳಿರಲಿಲ್ಲ. ಇತ್ತೀಚೆಗೆ ಅಖಿಲಾ ಭಾನು ಅವರ ಅಕ್ಕನ ಮಗ ಸೈಯದ್ ಇರ್ಫಾನ್ ಆಕೆಗಾಘಿ ನಾಯ್ಡುನಗರದಲ್ಲಿ ಆರ್ಥಿಕ ನೆರವು ನೀಡಿ ಒಂದು ಮನೆ ಖರೀದಿಸಿಕೊಟ್ಟಿದ್ದರು. ಅಬ್ಬ ಥಾಯುಬ್ ಹಾಗೂ ಅಖಿಲಾ ಭಾನು ಇಬ್ಬರ ಹೆಸರಲ್ಲಿ ಮನೆಯ ಜಂಟಿ ನೋಂದಣಿಯಾಗಿತ್ತು. 6 ತಿಂಗಳ ಹಿಂದಷ್ಟೇ ಮನೆ ಖರೀದಿಯಾಗಿತ್ತು.

ಮೊದಲ ಪತ್ನಿಯ ಮಕ್ಕಳಿಗೆ ಮನೆ ನೀಡಲು ಯತ್ನಿಸಿದ್ದ ಅಬ್ಬಥಾಯುಬ್

ಅಖಿಲಾ ಭಾನು ಅವರ ಮನೆಯನ್ನು ಇತ್ತೀಚೆಗೆ ಮೊದಲ ಹೆಂಡತಿಯ ಮಕ್ಕಳಿಗೆ ಬರೆದು ಕೊಡಲು ಅಬ್ಬಥಾಯುಬ್ ಪ್ರಯತ್ನಿಸಿದ್ದ. ಈ ವಿಚಾರದಲ್ಲಿ ಗಂಡ ಹೆಂಡತಿ ಮಧ್ಯೆ ಆಗಾಗ ಗಲಾಟೆಯಾಗುತ್ತಿತ್ತು. ಫೆಬ್ರವರಿ 16 ರ ಬೆಳಿಗ್ಗೆ ಇದ್ದಕ್ಕಿದ್ದಂತೆ ಸೈಯದ್ ಇರ್ಫಾನ್ ಮನೆಗೆ ಬಂದ ಅಬ್ಬ ಥಾಯೂಬ್ ಕಣ್ಣೀರಿಡುತ್ತಾ, ‘ಅಖಿಲಾಬಾನು ಮೃತಪಟ್ಟಿದ್ದಾಳೆ’ ಎಂದು ತಿಳಿಸಿ ಗೋಳಾಡಿದ್ದ. ರಾಜೇಂದ್ರ ನಗರದ ಮನೆಯಲ್ಲಿ ಇರಿಸಲಾಗಿದ್ದ ಅಖಿಲಾಬಾನು ಶವವನ್ನ ಸೈಯದ್ ಇರ್ಫಾನ್ ಪರಿಶೀಲನೆ ಮಾಡಿದಾಗ ಕುತ್ತಿಗೆಯ ಮೇಲೆ ತರಚಿದ ಗಾಯಗಳು ಕಂಡು ಬಂದಿದ್ದವು. ಇದರಿಂದ ಅನುಮಾನಗೊಂಡ ಸೈಯದ್ ಇರ್ಫಾನ್ ತಮ್ಮ ಚಿಕ್ಕಮ್ಮ ಸಾವು ಸಹಜವಲ್ಲ ಕೊಲೆ ಎಂದು ದೂರು ನೀಡಿದ್ದರು.

ಇದನ್ನೂ ಓದಿ: ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳ್ಳರ ಕೈಚಳಕ, ಒಂದೇ ದಿನ 3 ಬೈಕ್ ಕಳವು

ಇರ್ಫಾನ್ ದೂರಿನ ಹಿನ್ನೆಲೆಯಲ್ಲಿ ತನಿಖೆ‌ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಮೈಸೂರಿನ ಎನ್ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ