AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಸಿಡ್ ದಾಳಿಗೂ ಮುನ್ನಾ ಹೊಸ ಸಿಮ್ ಖರೀದಿಸಿದ್ದ ನಾಗೇಶ್; ಹಳೆ ಮೊಬೈಲ್​ನ ಹೊಸಕೋಟೆ ಬಳಿ ಎಸೆದಿರುವ ಆರೋಪಿ

ಮಾಗಡಿ ರಸ್ತೆಯ ಬ್ಯಾಡರಹಳ್ಳಿಯಲ್ಲಿ ಹೊಸ ಸಿಮ್ ಖರೀದಿಸಿದ್ದಾರೆ. ಆರೋಪಿ ಕಾಲ್ ಡೀಟೈಲ್ಸ್ ಹುಡುಕಾಡಿದಾಗ ಸಿಮ್ ಖರೀದಿ ಮಾಡಿರುವುದು ಪತ್ತೆಯಾಗಿದೆ.

ಆ್ಯಸಿಡ್ ದಾಳಿಗೂ ಮುನ್ನಾ ಹೊಸ ಸಿಮ್ ಖರೀದಿಸಿದ್ದ ನಾಗೇಶ್; ಹಳೆ ಮೊಬೈಲ್​ನ ಹೊಸಕೋಟೆ ಬಳಿ ಎಸೆದಿರುವ ಆರೋಪಿ
ಆರೋಪಿ ನಾಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.
TV9 Web
| Edited By: |

Updated on:May 03, 2022 | 12:21 PM

Share

ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ (Acid) ದಾಳಿ ಮಾಡಿದ್ದ ಆರೋಪಿ ನಾಗೇಶ್, ಕೃತ್ಯ ಎಸಗುವ ಮೊದಲು ಹೊಸ ಸಿಮ್ (Mobile Sim) ಖರೀದಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾಗಡಿ ರಸ್ತೆಯ ಬ್ಯಾಡರಹಳ್ಳಿಯಲ್ಲಿ ಹೊಸ ಸಿಮ್ ಖರೀದಿಸಿದ್ದಾರೆ. ಆರೋಪಿ ಕಾಲ್ ಡೀಟೈಲ್ಸ್ ಹುಡುಕಾಡಿದಾಗ ಸಿಮ್ ಖರೀದಿ ಮಾಡಿರುವುದು ಪತ್ತೆಯಾಗಿದೆ. ಹಳೆಯ ಮೊಬೈಲ್​ನ ಹೊಸಕೋಟೆ ಬಳಿ ಎಸೆದು ಹೋಗಿದ್ದಾನೆ. ಪರಾರಿಯಾಗಿರುವ ನಾಗೇಶ್ ಇನ್ನು ಹೊಸ ಸಿಮ್ನ ಆಕ್ಟಿವೇಷನ್ ಮಾಡಿಕೊಂಡಿಲ್ಲ. ಈ ಎಲ್ಲಾ ಬೆಳವಣಿಗೆಯನ್ನು ಗಮನಿಸಿದಾಗ ಆರೋಪಿ ಆ್ಯಸಿಡ್ ದಾಳಿ ಬಗ್ಗೆ ಮೊದಲೇ ಪ್ಲ್ಯಾನ್ ಮಾಡಿದ್ದ ಎಂದು ತಿಳಿಯುತ್ತದೆ.

ಇನ್ನು ದಾಳಿಗೆ ಒಳಗಾಗಿದ್ದ ಸಂತ್ರಸ್ತೆಗೆ ನಿನ್ನೆಯಿಂದ (ಮೇ 2) ಚರ್ಮ ಜೋಡಣೆ ಕಾರ್ಯ ಆರಂಭವಾಗಿದೆ. ಯುವತಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ನುರಿತ ವೈದ್ಯರ ತಂಡದಿಂದ ಸುಟ್ಟ ಭಾಗಕ್ಕೆ ಚರ್ಮ ಜೋಡಣೆ ಮಾಡುತ್ತಿದ್ದಾರೆ. ಸದ್ಯ ಯುವತಿಯ ಸ್ಥಿತಿ ಸಹಜವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ.

ಮಹಿಳೆಯರ ಭಯ ಮುಕ್ತ ಕರ್ನಾಟಕ ಹೆಸರಿನಲ್ಲಿ ಬೈಕ್ ರ್ಯಾಲಿ: ರಾಯಚೂರು: ಯುವತಿಯರು ಮಹಿಳೆಯರ ಭಯ ಮುಕ್ತ ಕರ್ನಾಟಕ ಹೆಸರಿನಲ್ಲಿ ರಾಜ್ಯಾದ್ಯಂತ ಬೈಕ್ ರ್ಯಾಲಿ ಮಾಡುತ್ತಿದ್ದಾರೆ. ಸದ್ಯ ಬೈಕ್ ರ್ಯಾಲಿ ರಾಯಚೂರು ತಲುಪಿದೆ. ಆಸಿಡ್ ದಾಳಿಗೆ ಒಳಗಾಗಿರುವವರಿಗೆ ಸ್ಕಿನ್ ಡೊನೇಶನ್ ಇತರೆ ಮಹಿಳಾ ಸಮಸ್ಯೆಗಳ ಕುರಿತು ಸಂದೇಶ ಸಾರುತ್ತಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ಆಸಿಡ್ ದಾಳಿ ಕೇಸ್‌ ವಿರುದ್ಧ ಕಿಡಿಕಾರಿದ್ದಾರೆ. ಟಿವಿ9ಗೆ ಹೇಳಿಕೆ ನೀಡಿದ ಕೀರ್ತಿನಿ, ಮುಂಬೈನಲ್ಲಿ ಆಸಿಡ್ ಕೇಸ್ ನೋಡುತ್ತಿದ್ದೆವು. ಈಗ ಕರ್ನಾಟಕದಲ್ಲಿ ಮತ್ತೆ ಆಗುತ್ತಿವೆ. ಆರೋಪಿಯನ್ನು ಕರೆತಂದು ನಡು ರಸ್ತೆಯಲ್ಲಿ ನಿಲ್ಲಿಸಬೇಕು. ಅವನಿಗೆ ಸೀಮೆ ಎಣ್ಣೆ ಸುರಿದು, ಬೊಬ್ಬೆಗಳು ಬರೋ ಹಾಗೆ ಮಾಡಬೇಕು. ಅವನನ್ನು ಸಾಯಿಸೋದು ಬೇಡ, ಆತನನ್ನು ಬದುಕಿಸಿ. ಆದರೆ ಆರೋಪಿಗೆ ಆ ನರಳಾಟ ಏನು ಅನ್ನೋದು ಗೊತ್ತಾಗಬೇಕು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದೆ

Published On - 9:14 am, Tue, 3 May 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ